ಮಂಗಳೂರು, ಅ.28:ನಗರ ಹೊರವಲಯದ ಗುರುಪುರದಲ್ಲಿ ಫಲ್ಗುಣಿ ನದಿಗೆ ಯುವಕನೊಬ್ಬ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಶವಕ್ಕಾಗಿ ಪೊಲೀಸರು ಮತ್ತು ಅಗ್ನಿಶಾಮಕ ದಳ ನದಿಯಲ್ಲಿ ಶೋಧ ನಡೆಸುತ್ತಿದ್ದಾರೆ.
ವಾಮಂಜೂರು ಮೂಡುಶೆಡ್ಡೆ ನಿವಾಸಿ ಅರುಣ್ ಪೂಜಾರಿ(38) ಆತ್ಮಹತ್ಯೆಗೆ ಶರಣಾದವರು. ವೃತ್ತಿಯಲ್ಲಿ ಪೈಂಟರ್ ಆಗಿರುವ ಅರುಣ್ ಗುರುವಾರ ರಾತ್ರಿ 8:30 ರ ಸುಮಾರಿಗೆ ಗುರುಪುರ ಸೇತುವೆಯ ಮೇಲೆ ತನ್ನ ದ್ವಿಚಕ್ರ ವಾಹನ ನಿಲ್ಲಿಸಿ ನದಿಗೆ ಹಾರಿದ್ದರು. ವಿಚ್ಛೆಧೀತರಾಗಿರುವ ಅರುಣ್ ಓರ್ವ ಮಗಳನ್ನು ಹೊಂದಿದ್ದಾರೆ. ಅರುಣ್ ನದಿಗೆ ಹಾರುವುದನ್ನು ಕಂಡ ಸ್ಥಳೀಯರು ತಕ್ಷಣ ಪೋಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದರು. ಸ್ಥಳಕ್ಕೆ ಧಾವಿಸಿದ ಬಜಪೆ ಪೊಲೀಸರು ಮೃತದೇಹದ ಹುಡುಕಾಟದ ಕಾರ್ಯಾಚರಣೆ ನಡೆಸಿದ್ದರು ಆದರೆ ರಾತ್ರಿಯಾ ದುದರಿಂದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು .ಶುಕ್ರವಾರ ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ಮುಂದುವರಿದಿದೆ.
ಇಂದು ಬೆಳಗ್ಗಿನಿಂದ ಪೊಲೀಸರು, ಅಗ್ನಿಶಾಮಕ ದಳ ಸಿಬಂದಿ ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಸ್ಥಳೀಯರು, ವಾಹನಗಳಲ್ಲಿ ಸಾಗುತ್ತಿರುವ ಮಂದಿ ವಾಹನ ನಿಲ್ಲಿಸಿ ಸೇತುವೆಯಿಂದ ಕೆಳಕ್ಕೆ ಕುತೂಹಲದಿಂದ ಇಣುಕುತ್ತಿದ್ದಾರೆ. ಮಧ್ಯಾಹ್ನದ ವರೆಗೂ ಶವ ಪತ್ತೆಯಾಗಿಲ್ಲ.
Discover more from Coastal Times Kannada
Subscribe to get the latest posts sent to your email.
Discussion about this post