• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಭಯೋತ್ಪಾದನೆ ವಿರುದ್ಧ ಏಳು ಕಡೆಗಳಲ್ಲಿ ಜನಜಾಗೃತಿ ಅಭಿಯಾನ

Coastal Times by Coastal Times
November 28, 2022
in ಕರಾವಳಿ
ಮಂಗಳೂರು: ಭಯೋತ್ಪಾದನೆ ವಿರುದ್ಧ ಏಳು ಕಡೆಗಳಲ್ಲಿ ಜನಜಾಗೃತಿ ಅಭಿಯಾನ
52
VIEWS
WhatsappTelegramShare on FacebookShare on Twitter

ಮಂಗಳೂರು: ನಗರದ ಗರೋಡಿ ಬಳಿ ಈಚೆಗೆ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟವನ್ನು ಖಂಡಿಸಿ ಹಾಗೂ ಕರಾವಳಿಯ ಭದ್ರತೆಗೆ ಸವಾಲೊಡ್ದುವ ಭಯೋತ್ಪಾದನೆ ಚಟುವಟಿಕೆ ಮಟ್ಟಹಾಕುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ), ಬಜರಂಗದಳ ಹಾಗೂ ದುರ್ಗಾವಾಹಿನಿ ಸಂಘಟನೆಗಳ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಏಳು ಕಡೆ ಸೋಮವಾರ ಏಕಕಾಲದಲ್ಲಿ ಜನಜಾಗೃತಿ ಕಾರ್ಯಕ್ರಮ ನಡೆದವು.

ನಗರದ ಅಂಬೇಡ್ಕರ್‌ ವೃತ್ತ, ಉರ್ವಸ್ಟೋರ್ ಜಂಕ್ಷನ್‌, ತೊಕ್ಕೊಟ್ಟು ಜಂಕ್ಷನ್, ಕಾವೂರು ಜಂಕ್ಷನ್‌, ಗುರುಪುರ ಕೈಕಂಬ, ಸುರತ್ಕಲ್ ಮತ್ತು ಮೂಡುಬಿದಿರೆಯಲ್ಲಿ ಈ ಸಂಘಟನೆಗಳ ಕಾರ್ಯಕರ್ತರು ರಸ್ತೆಯ ಬದಿ ಸಾಲಾಗಿ ನಿಂತು ಭಿತ್ತಿಪತ್ರ ಪ್ರದರ್ಶನ ಮಾಡುವ ಮೂಲಕ ಸಾರ್ವಜನಿಕರ ಗಮನ ಸೆಳೆದರು. ಬೆಳಿಗ್ಗೆ 9ರಿಂದ 10 ಗಂಟೆವರೆಗೆ ನಡೆದ ಈ ಜನಜಾಗೃತಿ ಜಾಥಾದಲ್ಲಿ ಈ ಸಂಘಟನೆಗಳ ಪ್ರಮುಖರು  ಭಯೋತ್ಪಾದನೆ ಚಟುವಟಿಕೆ ವಿರುದ್ಧ ಘೋಷಣೆ ಕೂಗಿದರು. ಭಯೋತ್ಪಾದನಾ ಕೃತ್ಯದಲ್ಲಿ ತೊಡಗಿರುವವರನ್ನು ಹಾಗೂ ಅವರಿಗೆ ಬೆಂಬಲ ನೀಡುವವರನ್ನು ಬಂಧಿಸಬೇಕು. ಈ ಪಿಡುಗನ್ನು  ಬುಡಸಮೇತ ಮಟ್ಟಹಾಕಬೇಕು ಎಂದು ಒತ್ತಾಯಿಸಿದರು.

ನಗರದ ಅಂಬೇಡ್ಕರ್‌ ವೃತ್ತದ ಬಳಿ ನಡೆದ ಜನ ಜಾಗೃತಿ ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯ ದಿವಾಕರ ಪಾಂಡೇಶ್ವರ, ಬಿಜೆಪಿ ಮಂಗಳೂರು ದಕ್ಷಿಣ ಕ್ಷೇತ್ರ ಘಟಕದ ಅಧ್ಯಕ್ಷ ವಿಜಯ್‌ ಕುಮಾರ್‌ ಶೆಟ್ಟಿ, ವಿಶ್ವ ಹಿಂದೂ ಪರಿಷತ್‌ನ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಶರಣ್‌ ಪಂಪ್‌ವೆಲ್‌, ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್‌,  ಬಜರಂಗ ದಳದ ವಿಭಾಗ ಸಂಚಾಲಕ ಭುಜಂಗ ಕುಲಾಲ್‌ ಹಾಗೂ ಜಿಲ್ಲಾ ಸಂಚಾಲಕ ಪುನೀತ್‌ ಅತ್ತಾವರ ಹಾಗೂ ಇತರರು ಭಾಗವಹಿಸಿದರು.

ಉರ್ವಸ್ಟೋರ್‌ ಜಂಕ್ಷನ್‌ನಲ್ಲಿ ನಡೆದ ಜನಜಾಗೃತಿ ಸಭೆಯಲ್ಲಿ ಮಾತನಾಡಿದ ಅಖಿಲ ಭಾರತೀಯ ಸಂತ ಸಮಿತಿಯ ಕರ್ನಾಟಕ ಪ್ರದೇಶ ಪ್ರಮುಖ್ ವಿದ್ಯಾನಂದ ಸರಸ್ವತಿ ಸ್ವಾಮೀಜಿ, ‘ದೇಶವನ್ನು 2047ರೊಳಗೆ ಮುಸ್ಲಿಂ ರಾಷ್ಟ್ರವನ್ನಾಗಿ ಪರಿವರ್ತಿಸುವ ಹುನ್ನಾರ ನಡೆದಿದೆ. ಇದಕ್ಕೆ ಹೊಸ ಹೊಸ ರೀತಿಯಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಯುವತಿಯರನ್ನು ಗುರಿಯನ್ನಾಗಿಸಿ ಮತಾಂತರ ಮಾಡಲು ಯತ್ನಿಸುತ್ತಿದ್ದಾರೆ. ಇದರಿಂದ ಒಂದು ತಲೆಮಾರನ್ನೇ ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂಬ ತಂತ್ರ ಅವರದು. ಬಾಂಬ್‌ ಸ್ಫೋಟ, ಮಾದನ ವಸ್ತುಗಳ ನಶೆಗೆ ಯುವಜನರು ಬಲಿಯಾಗುವಂತೆ ಮಾಡುವತಂತ್ರಗಳನ್ನೂ ಅನುಸರಿಸುತ್ತಿದ್ದಾರೆ. ಇದರ ವಿರುದ್ಧ ಜನ ಎಚ್ಚೆತ್ತುಕೊಳ್ಳಬೇಕು’

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

‘ನಿಮ್ಮ ಮಗನನ್ನು ಸಹ ಟೆರರಿಸ್ಟ್ ಎಂದು ಕರೆಯುತ್ತೀರಾ’..? ಪ್ರೊಫೆಸರ್​ಗೆ ಚಳಿ ಬಿಡಿಸಿದ ವಿದ್ಯಾರ್ಥಿ, ಪ್ರೊಫೆಸರ್ ಅಮಾನತು

Next Post

ಮಾಲ್ಟಾದಿಂದ ನವಮಂಗಳೂರು ಬಂದರಿಗೆ ಬಂದ ಐಷಾರಾಮಿ ಪ್ರವಾಸಿ ಹಡಗು

Related Posts

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
110
ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ
ಕರಾವಳಿ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
29
Next Post
ಮಾಲ್ಟಾದಿಂದ ನವಮಂಗಳೂರು ಬಂದರಿಗೆ ಬಂದ ಐಷಾರಾಮಿ ಪ್ರವಾಸಿ ಹಡಗು

ಮಾಲ್ಟಾದಿಂದ ನವಮಂಗಳೂರು ಬಂದರಿಗೆ ಬಂದ ಐಷಾರಾಮಿ ಪ್ರವಾಸಿ ಹಡಗು

Discussion about this post

Recent News

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
23
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
110
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d