ಉಡುಪಿ: ಮಣಿಪಾಲ ಮಾಹೆ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗೆ ಟೆರರಿಸ್ಟ್ ಎಂದು ನಿಂದಿಸಿದ ಆರೋಪದ ವಿಡಿಯೋವೊಂದು ವೈರಲ್ ಆಗಿದೆ. ವಿಶ್ವವಿದ್ಯಾಲಯದ ಎಂಐಟಿ ಕಾಲೇಜಿನಲ್ಲಿ ಘಟನೆ ನಡೆದಿದೆ ಎನ್ನಲಾದ ವಿಡಿಯೋ ಟ್ವಿಟರ್ನಲ್ಲಿ ವೈರಲ್ ಆಗಿದ್ದು, ಈ ಸಂಬಂಧ ವಿವಿ ಆಡಳಿತ ಮಂಡಳಿಯು ಆರೋಪಿ ಪ್ರೊಫೆಸರ್ ಅವರನ್ನು ಅಮಾನತು ಮಾಡಿದೆ.

ವಿದ್ಯಾರ್ಥಿಗಳೊಂದಿಗೆ ಮಾತನಾಡುವಾಗ ಓರ್ವ ವಿದ್ಯಾರ್ಥಿಗೆ ಟೆರರಿಸ್ಟ್ ಎಂಬ ಅರ್ಥದಲ್ಲಿ ಪ್ರೊಫೆಸರ್ ಮಾತನಾಡಿದ್ದಾರೆ ಹಾಗೂ ಈ ಘಟನೆ ನವೆಂಬರ್ 26ರಂದು ನಡೆದಿದೆ ಎನ್ನಲಾಗ್ತಿದೆ. ಈ ಮಾತಿಗೆ ತರಗತಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿ ‘ನನ್ನನ್ನು ಟೆರರಿಸ್ಟ್ ಎಂದು ಕರೆಯಬೇಡಿ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಅನಗತ್ಯವಾಗಿ ತಮಾಷೆಯಲ್ಲಿ ಈ ರೀತಿ ಮಾತನಾಡಬೇಡಿ. ಅಲ್ಲದೆ, ತಮಾಷೆಯಾಗಿ ನಿಮ್ಮ ಮಗನನ್ನು ಹೀಗೆ ಕರೆಯುತ್ತೀರಾ ಎಂದು ವಿದ್ಯಾರ್ಥಿ ಪ್ರಶ್ನಿಸಿದ್ದಾನೆ. ಆಗ ಪ್ರೊಫೆಸರ್ ಸ್ಥಳದಲ್ಲೇ ಕ್ಷಮೆ ಕೇಳಿದ್ದಾರೆ. ನೀವು ಕ್ಷಮೆ ಕೇಳಿದ ತಕ್ಷಣ ಮಾಡಿರುವ ಆರೋಪ ಬದಲಾಗಲ್ಲ, ಎಂದು ವಿದ್ಯಾರ್ಥಿ ಆಕ್ಷೇಪ ಎತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
https://twitter.com/ashoswai/status/1597000265672314880?ref_src=twsrc%5Etfw%7Ctwcamp%5Etweetembed%7Ctwterm%5E1597000265672314880%7Ctwgr%5E525ec5380870bb30ef432d3348a335262a57fb8c%7Ctwcon%5Es1_c10&ref_url=https%3A%2F%2Fwww.etvbharat.com%2Fkannada%2Fkarnataka%2Fstate%2Fudupi%2Fprofessor-allegedly-calls-student-terrorist-in-classroom-video-viral%2Fka20221128193321490490015

ವಿಡಿಯೋ ವೈರಲ್ ಆಗುತ್ತಿದ್ದಂತೆ ಉಪನ್ಯಾಸಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಉಪನ್ಯಾಸಕನನ್ನು ಅಮಾನತುಗೊಳಿಸಿ ಆಂತರಿಕ ತನಿಖೆಗೆ ನಿರ್ಧರಿಸಿರುವ ಮಾಹೆ ವಿವಿ, ವಿದ್ಯಾರ್ಥಿಗೆ ಕೌನ್ಸಿಲಿಂಗ್ ಮೂಲಕ ಸಾಂತ್ವನ ಹೇಳಿದೆ.

Discover more from Coastal Times Kannada
Subscribe to get the latest posts sent to your email.








Discussion about this post