ಪುತ್ತೂರು: ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಜ. 22 ರಂದು ನಡೆಯಲಿರುವ ಶ್ರೀ ರಾಮನ ಪ್ರತಿಷ್ಠಾಪನೆ ಮಹೋತ್ಸವದ ಹಿನ್ನೆಲೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ದೇಶಾದ್ಯಂತ ಏಕಕಾಲದಲ್ಲಿ ನಡೆಯುತ್ತಿರುವ ಅಕ್ಷತೆ ವಿತರಣೆ ಕಾರ್ಯಕ್ರಮದ ಭಾಗವಾಗಿ ಅಯೋಧ್ಯೆಯಿಂದ ಅಕ್ಷತೆ ಹೊತ್ತ ರಥ ಇಂದು ಪುತ್ತೂರನ್ನು ಪ್ರವೇಶಿಸಿದೆ.
ಅಕ್ಷತೆಯನ್ನು ಪ್ರತೀ ಮನೆಗಳಿಗೆ ತಲುಪಿಸುವ ನಿಟ್ಟಿನಲ್ಲಿ ಮನೆ ಮನೆ ಸಂಪರ್ಕ ಅಭಿಯಾನ ಜ.1 ರಿಂದ 15 ರ ತನಕ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬ ಹಿಂದೂವಿನ ಮನೆಗೆ ಈ ಅಕ್ಷತೆಯನ್ನು ಸಂಪರ್ಕ ಅಭಿಯಾನದ ಮೂಲಕ ತಲುಪಿಸಲಾಗುತ್ತದೆ. ಜ.7 ರಂದು ಸಂಪರ್ಕ ಅಭಿಯಾನಕ್ಕೆ ವೇಗ ನೀಡುವ ನಿಟ್ಟಿನಲ್ಲಿ ಮಹಾಸಂಪರ್ಕ ಅಭಿಯಾನ ನಡೆಯಲಿದೆ. ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸಮಿತಿ ಸದಸ್ಯರು, ಮಾಜಿ ಶಾಸಕ ಸಂಜೀವ ಮಠಂದೂರು, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಜಿಲ್ಲಾ ಸಮಿತಿ ಸಂಯೋಜಕ ರವೀಂದ್ರ ಪಿ., ಸಂಚಾಲಕ ಡಾ. ಕೃಷ್ಣ ಪ್ರಸನ್ನ ಸೇರಿದಂತೆ ಮತ್ತಿತರ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post