• About us
  • Contact us
  • Disclaimer
Sunday, March 8, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ‘ಪ್ರಯಾಣಿಕಕರು ಫುಟ್ಬೋರ್ಡ್‌ನಲ್ಲಿ ನೇತಾಡಿದರೆ ವಾಹನಗಳ ಪರವಾನಿಗೆ ರದ್ದು’ -ಎಸ್ಪಿ ಋಷ್ಯಂತ್ ಎಚ್ಚರಿಕೆ

Coastal Times by Coastal Times
November 28, 2023
in ಕರಾವಳಿ
ಮಂಗಳೂರು: ‘ಪ್ರಯಾಣಿಕಕರು ಫುಟ್ಬೋರ್ಡ್‌ನಲ್ಲಿ ನೇತಾಡಿದರೆ ವಾಹನಗಳ ಪರವಾನಿಗೆ ರದ್ದು’ -ಎಸ್ಪಿ ಋಷ್ಯಂತ್ ಎಚ್ಚರಿಕೆ
13
VIEWS
WhatsappTelegramShare on FacebookShare on Twitter

ಮಂಗಳೂರು, ನ 28 : ಸರಕಾರಿ ಬಸ್ ಸೇರಿದಂತೆ, ಖಾಸಗಿ ಬಸ್ಸುಗಳ ಫುಟ್‌ಬೋರ್ಡ್‌ನಲ್ಲಿ ನೇತಾಡಿಕೊಂಡು ಪ್ರಯಾಣಿಸುವುದು, ಶಾಲಾ ವಾಹನಗಳು ಸೇರಿದಂತೆ ಖಾಸಗಿ ವಾಹನಗಳಲ್ಲಿ ಹೆಚ್ಚುವರಿ ಪ್ರಯಾಣಿಕರನ್ನು ತುಂಬಿಸಿ ಸಾಗಾಟ ಮಾಡುತ್ತಿದ್ದರೆ ಅಂತಹ ವಾಹನಗಳನ್ನು ವಶಕ್ಕೆ ಪಡೆದು, ಪರವಾನಿಗೆ ರದ್ದುಗೊಳಿಸಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ಋಷ್ಯಂತ್ ಎಚ್ಚರಿಕೆ ನೀಡಿದ್ದಾರೆ.

ದ.ಕ.ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಆಲಿಕೆ ಸಭೆಯಲ್ಲಿ ದಲಿತ ಮುಖಂಡರ ದೂರಿನ ಮೇರೆಗೆ ಈ ಪ್ರತಿಕ್ರಿಯೆ ನೀಡಿದರು. ದಲಿತ ನಾಯಕಿ ಈಶ್ವರಿ ಅವರು ವಿಷಯ ಪ್ರಸ್ತಾಪಿಸಿ, ಬೆಳ್ತಂಗಡಿ ಭಾಗದಲ್ಲಿ ಸರಕಾರಿ ಬಸ್ಸಿನಲ್ಲಿ ಫುಟ್‌ಬೋರ್ಡ್‌ನಲ್ಲಿ ಅಪಾಯಕಾರಿಯಾಗಿ ನೇತಾಡಿಕೊಂಡು ಪ್ರಯಾಣಿಸುವ ಪರಿಸ್ಥಿತಿ ಇದೆ. ಹೆಚ್ಚುವರಿ ಬಸ್ಸಿನ ವ್ಯವಸ್ಥೆ ಆಗಬೇಕು. ಈ ಬಗ್ಗೆ ಸಂಬಂಧಪಟ್ಟವರಿಗೆ ಪೊಲೀಸ್ ಇಲಾಖೆಯಿಂದ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದರು.

ಎಸ್ಪಿ ಋಷ್ಯಂತ್ ಮಾತನಾಡಿ, ‘ಇದು ನಾನೂ ಗಮನಸಿದ್ದೇನೆ. ವೀಡಿಯೋ ಕೂಡಾ ನಾನು ನೋಡಿದ್ದೇನೆ. ಇದು ಅತ್ಯಂತ ಗಂಭೀರ ಹಾಗೂ ಅಪಾಯಕಾರಿ. ತಿರುವುಗಳಲ್ಲಿ ಅತ್ಯಂತ ಅಪಾಯಕಾರಿ ರೀತಿಯಲ್ಲಿ ಸಂಚರಿಸುತ್ತಿರುವುದು ಕಂಡು ಬಂದಿದೆ. ಅಧಿಕಾರಿಗಳು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು’ ಎಂದರು.

ಬೆಳ್ತಂಗಡಿಯ ಶೇಖರ್ ಅವರು ಮಾತನಾಡಿ, ನಾರಾವಿಯಿಂದ ಬೆಳ್ತಂಗಡಿಗೆ ಒಂದು ಸರಕಾರಿ ಬಸ್ಸಿಗಾಗಿ ಸುಮಾರು 300ರಷ್ಟು ಪ್ರಯಾಣಿಕರು ಕಾಯಬೇಕಾದ ಪರಿಸ್ಥಿತಿ ಇದೆ. ಅಲ್ಲಿಗೆ ಹೆಚ್ಚುವರಿ ಸರಕಾರಿ ಬಸ್ಸುಗಳ ಅಗತ್ಯವಿದೆ ಎಂದು ಒತ್ತಾಯಿಸಿದರು.

ಶಾಲೆಗಳಿಗೆ ಮಕ್ಕಳನ್ನು ಒಯ್ಯುವ ಆಟೋಗಳಲ್ಲಿಯೂ 10ಕ್ಕೂ ಅಧಿಕ ಮಕ್ಕಳನ್ನು ಸಾಗಿಸಲಾಗುತ್ತಿದೆ ಎಂಬ ದೂರು ವ್ಯಕ್ತವಾದಾಗ ಎಲ್ಲಾ ಶಾಲೆಗಳಿಗೆ ಡಿಡಿಪಿಐ ಮೂಲಕ, ಮಕ್ಕಳ ಸಾಗಾಟದ ವಾಹನಗಳ ಬಗ್ಗೆ ಗಮನ ಹರಿಸುವಂತೆ ಸೂಚನೆ ನೀಡಬೇಕು. ಅಂತಹ ವಾಹನಗಳು ಕಂಡು ಬಂದರೆ ಸರ್ಕಲ್‌ಗಳಲ್ಲಿ ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆದು ಪ್ರಕರಣ ದಾಖಲಿಸಿ ದಂಡ ವಿಧಿಸಿ ಎಂದು ಎಸ್ಪಿ ನಿರ್ದೇಶಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕಾಂತಾರ -2 ಚಿತ್ರದ ಟೀಸರ್ ಬಿಡುಗಡೆ, ಉಗ್ರರೂಪ ತಾಳಿದ ರಿಷಬ್ ಶೆಟ್ಟಿ : ಫಸ್ಟ್ ಲುಕ್ ಟೀಸರ್ ದಾಖಲೆ

Next Post

ಆರು ವರ್ಷದ ಬಾಲಕಿ ಅಬಿಗೇಲ್ ಸಾರಾ ರೆಜಿಯನ್ನು ಅಪಹರಿಸಿದ 21 ಗಂಟೆಗಳ ಬಳಿಕ, ಬಾಲಕಿ ಆಶ್ರಮ ಮೈದಾನದಲ್ಲಿ ಪತ್ತೆ

Related Posts

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್
ಕರಾವಳಿ

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
7
2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
ಕರಾವಳಿ

2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

March 8, 2026
28
Next Post
ಆರು ವರ್ಷದ ಬಾಲಕಿ ಅಬಿಗೇಲ್ ಸಾರಾ ರೆಜಿಯನ್ನು ಅಪಹರಿಸಿದ 21 ಗಂಟೆಗಳ ಬಳಿಕ, ಬಾಲಕಿ ಆಶ್ರಮ ಮೈದಾನದಲ್ಲಿ ಪತ್ತೆ

ಆರು ವರ್ಷದ ಬಾಲಕಿ ಅಬಿಗೇಲ್ ಸಾರಾ ರೆಜಿಯನ್ನು ಅಪಹರಿಸಿದ 21 ಗಂಟೆಗಳ ಬಳಿಕ, ಬಾಲಕಿ ಆಶ್ರಮ ಮೈದಾನದಲ್ಲಿ ಪತ್ತೆ

Discussion about this post

Recent News

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
7
2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

March 8, 2026
28
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

March 8, 2026
ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 7 ರನ್​ಗಳಿಂದ ರೋಚಕ ಗೆಲುವು ಸತತ ಎರಡನೇ ಬಾರಿಗೆ ಫೈನಲ್​ಗೇರಿದ ಟೀಂ ಇಂಡಿಯಾ

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 7 ರನ್​ಗಳಿಂದ ರೋಚಕ ಗೆಲುವು ಸತತ ಎರಡನೇ ಬಾರಿಗೆ ಫೈನಲ್​ಗೇರಿದ ಟೀಂ ಇಂಡಿಯಾ

March 6, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d