ಮಂಗಳೂರು, ನ 28 : ಭಿನ್ನ ಕೋಮಿನ ಯುವಕ-ಯುವತಿ ಕೆಲಸ ಬಿಟ್ಟು ಜತೆಯಾಗಿ ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ಹಿಂಬಾಲಿಸಿ ತಡೆದು ತರಾಟೆಗೆ ತೆಗೆದುಕೊಂಡು ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕ್ಕಲ್ ಎಂದು ಗುರುತಿಸಲಾಗಿದೆ.
ಸೋಮವಾರ ರಾತ್ರಿ ಸುಮಾರು 8 ಗಂಟೆಗೆ ನಗರದ ಮುಳಿಹಿತ್ಲು ಎಂಬಲ್ಲಿನ ಎಂಎಸ್ ಸ್ಪೋರ್ಟ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನೂರುಲ್ಲಾ ಅಮೀನ್ ಮತ್ತು ಸೌಜನ್ಯಾ ಎಂಬವರು ಮೊಬೈಲ್ ರಿಪೇರ್ ಮಾಡಿಸಿಕೊಂಡು ನಗರದ ಮಿಲಾಗ್ರಿಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜದ ಕಡೆಗೆ ಬೈಕ್ ನಲ್ಲಿ ತೆರಳುವಾಗ ಈ ಇಬ್ಬರು ಆರೋಪಿಗಳು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದು ತಡೆದು ತರಾಟೆಗೆ ತೆಗೆದುಕೊಂಡಿತ್ತು. ಸ್ವಲ್ಪ ಹೊತ್ತಿನಲ್ಲಿ 2 ಕೋಮಿನ ಯುವಕರು ಜಮಾಯಿಸಿದ್ದಾರೆ. ಸ್ಥಳದಲ್ಲಿ ಮಾತಿನ ಚಕಮಕಿ ನಡೆದಿದೆ. ಬಳಿಕ ಹೊಯ್ಸಳ ವಾಹನ ಪೊಲೀಸರು ಸ್ಥಳಕ್ಕೆ ಆಗಮಿಸಿ ಜೋಡಿಯನ್ನ ವಶಕ್ಕೆ ತೆಗೆದುಕೊಂಡು ಪಾಂಡೇಶ್ವರ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಈ ಬಗ್ಗೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 354 ರ ಅಡಿ ಪ್ರಕರಣ ದಾಖಲಿಸಲಾಗಿದೆ
Discover more from Coastal Times Kannada
Subscribe to get the latest posts sent to your email.
Discussion about this post