ಹೀಗೆ ಮದ್ಯ ಕುಡಿದು ಮಲಗಿರುವ ದೃಶ್ಯವನ್ನು ಸ್ಥಳೀಯರೊಬ್ಬರು ಚಿತ್ರೀಕರಿಸಿಕೊಂಡಿದ್ದಲ್ಲದೆ, ಸಾಮಾಜಿಕ ಜಾಲತಾಣದಲ್ಲಿಯೂ ಹರಿಬಿಟ್ಟಿದ್ದಾರೆ. ಈ ವಿಡಿಯೊ ಈಗ ವೈರಲ್ ಆಗಿದೆ. ಮಕ್ಕಳ ಭವಿಷ್ಯ ರೂಪಿಸಬೇಕಾದ ಶಿಕ್ಷಕ ಶಾಲಾ ಅವಧಿಯಲ್ಲಿಯೇ ಕುಡಿದು, ಶಾಲಾ ಆವರಣದಲ್ಲಿಯೇ ಮಲಗಿರುವುದು ಸ್ಥಳೀಯರು ಸೇರಿದಂತೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಶಿಕ್ಷಕನನ್ನು ಕೂಡಲೇ ಅಮಾನತು ಮಾಡುವಂತೆ ಪೆರ್ಡೂರು ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು, ಸಾಮಾಜಿಕ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿ ಮನವಿ ಸಲ್ಲಿಸಲಾಗಿದೆ.
Discover more from Coastal Times Kannada
Subscribe to get the latest posts sent to your email.







Discussion about this post