ಉತ್ತರ ಕನ್ನಡ, ಡಿ 28: ಹಾಳಾಗಿ ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಬಂದು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ, ಟೈರ್ ಪಂಚರ್ ದುರಸ್ತಿಗೆ ತೊಡಗಿದ್ದ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಮಾತ್ರವಲ್ಲ, ಆತನ ದೇಹ ಛಿದ್ರಗೊಂಡಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ರಸ್ತೆ ಬದಿ ಲಾರಿಯ ಟೈರ್ ಪಂಚರ್ ತೆಗೆಯುತ್ತಿದ್ದ ಚಾಲಕನಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ದುಂಡಕುಳಿ ಗ್ರಾಮದಲ್ಲಿ ನಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಚಾಲಕನ ದೇಹ ಛಿದ್ರವಾಗಿತ್ತು. ವೇಗವಾಗಿ ಬಂದ ಸರಕು ಸಾಗಣೆ ಲಾರಿಯು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Discover more from Coastal Times Kannada
Subscribe to get the latest posts sent to your email.







Discussion about this post