ಬೆಂಗಳೂರು: ‘ಎರಡು ಮಕ್ಕಳಿದ್ದವರಿಗೆ ಮಾತ್ರ ಸರ್ಕಾರದ ಸೌಲಭ್ಯಗಳನ್ನು ನೀಡುವ ಬಗ್ಗೆ ರಾಜ್ಯ ಸರ್ಕಾರ ಅಗತ್ಯ ನಿಯಮಗಳನ್ನು ರೂಪಿಸಬೇಕು ಎಂದು ಬಿಜೆಪಿ ಸದಸ್ಯ ಭಾರತಿ ಶೆಟ್ಟಿ ಆಗ್ರಹಿಸಿದ್ದಾರೆ.
ವಿಧಾನಪರಿಷತ್‌ನಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ‘ಸರ್ಕಾರಿ ಸವಲತ್ತುಗಳು ಮತ್ತು ಸಬ್ಸಿಡಿಗಳನ್ನು ಪಡೆದುಕೊಳ್ಳಲುಜನಸಂಖ್ಯೆ ಮಿತಿ ಹೇರುವುದು ಅಗತ್ಯವಿದೆ. ಉತ್ತರ ಪ್ರದೇಶ ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ’ ಎಂದರು.
2 ಮಕ್ಕಳು ಇರುವವರಿಗೆ ಸರ್ಕಾರಿ ಸೌಲಭ್ಯ ಕೊಡಿ
ಕೇವಲ 2 ಮಕ್ಕಳನ್ನು ಹೊಂದಿದವರಿಗೆ ಮಾತ್ರ ಸರ್ಕಾರಿ ಸವಲತ್ತು ನೀಡುವ ಬಗ್ಗೆ ಪರಿಶೀಲಿಸಬೇಕು. ಈಗಾಗಲೇ ಉತ್ತರಪ್ರದೇಶದಲ್ಲಿ ಇಂತಹ ಪದ್ಧತಿ ಇರುವ ಕುರಿತು ಮಾಹಿತಿ ಇದೆ. ಇಲ್ಲಿಯೂ ಅಂತಹ ಪದ್ದತಿ ಜಾರಿಗೆ ಮುಂದಾಗಬೇಕು ಎಂದರು. ಭಾರತಿಶೆಟ್ಟಿ ಅವರ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಉತ್ತರ ಕೊಡಿಸುವುದಾಗಿ ಸರ್ಕಾರದ ಪರವಾಗಿ ಸಚಿವ ಭೈರತಿ ಬಸವರಾಜ ಭರವಸೆ ನೀಡಿದರು.
Discover more from Coastal Times Kannada
Subscribe to get the latest posts sent to your email.
Discussion about this post