ಸುಬ್ರಹ್ಮಣ್ಯ: ತೆಲುಗು ನಟ, ರಾಜಕಾರಣಿ ಪವನ್ ಕಲ್ಯಾಣ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ, ಕ್ಷೇತ್ರದಲ್ಲಿ ಆಶ್ಲೇಷ ಬಲಿ ಪೂಜೆ, ಆದಿ ಸುಬ್ರಹ್ಮಣ್ಯದ ಹುತ್ತಕ್ಕೆ ವಸ್ತ್ರ ಸಮರ್ಪಿಸಿದರು.
ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ನಟ ಪವನ್ ಕಲ್ಯಾಣ್ ಅವರನ್ನು ಸನ್ಮಾನಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿಅವರು ಸನ್ಮಾನಿಸಿದರು.
ನಟ ಪವನ್ ಕಲ್ಯಾಣ್ ಅಭಿನಯದ ‘ಭೀಮ್ಲಾ ನಾಯಕ್’ ಸಿನಿಮಾ ಇತ್ತೀಚೆಗೆ ತೆರೆಕಂಡು ಯಶಸ್ವಿಯಾಗಿತ್ತು. ಈ ಸಿನಿಮಾ ಈಗ ಒಟಿಟಿಯಲ್ಲೂ ಪ್ರಸಾರಕಂಡು ಮೆಚ್ಚುಗೆ ಪಡೆದುಕೊಂಡಿದೆ. ಪವನ್ ಕಲ್ಯಾಣ್ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು. ‘ಭೀಮ್ಲಾ ನಾಯಕ್’ ಸಿನಿಮಾದಲ್ಲಿ ಪವನ್ ಕಲ್ಯಾಣ್ಗೆ ಜತೆಯಾಗಿ ನಿತ್ಯಾ ಮೆನನ್ ಕಾಣಿಸಿಕೊಂಡಿದ್ದರು.ರಾಣಾ ಕೂಡ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.
ಪ್ರತೀ ಏಕಾದಶಿಯಂದು ದೇವಸ್ಥಾನದಲ್ಲಿ ನಡೆಸುವ ಸ್ವಚ್ಛತಾ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಎಲ್ಲಾ ದೇವಸ್ಥಾನಗಳೂ ಕುಕ್ಕೆ ಸುಬ್ರಹ್ಮಣ್ಯವನ್ನು ಅನುಸರಿಸರಿಸುವಂತೆ ಆಗಬೇಕು. ಇದರಿಂದ ಪರಿಸರ ಸ್ವಚ್ಛತಾ ಜಾಗೃತಿ ಸಾಧ್ಯ ಎಂದರು.
Discover more from Coastal Times Kannada
Subscribe to get the latest posts sent to your email.
Discussion about this post