ಮಂಗಳೂರು : ಕೆಜಿಎಫ್ ಸಿನಿಮಾದಲ್ಲಿ ‘ವೈಲೆನ್ಸ್ ವೈಲೆನ್ಸ್ ವೈಲೆನ್ಸ್..’ ಡೈಲಾಗ್ ಅಪಾರ ಜನಮೆಚ್ಚುಗೆ ಗಳಿಸಿದೆ. ಇದೇ ಡೈಲಾಗ್ ಅನ್ನು ಎಸ್ಡಿಪಿಐ ಸಮಾವೇಶದಲ್ಲಿ ಹೇಳುವ ಮೂಲಕ ಪಕ್ಷದ ನಾಯಕರೊಬ್ಬರು ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನ ಹೊರವಲಯದ ಅಡ್ಯಾರ್ ಕಣ್ಣೂರಿನಲ್ಲಿ ಶುಕ್ರವಾರ ಎಸ್ ಡಿಪಿಐ ‘ಜನಾಧಿಕಾರ’ ಸಮಾವೇಶ ನಡೆದಿತ್ತು. ಈ ಸಮಾವೇಶದಲ್ಲಿ ಪಕ್ಷದ ಜಿಲ್ಲಾ ಮುಖಂಡ ರಿಯಾಜ್ ಫರಂಗಿಪೇಟೆ ಭಾಷಣದ ವೇಳೆ ತಮ್ಮದೇ ಶೈಲಿಯಲ್ಲಿ ಕೆಜಿಎಫ್ ಡೈಲಾಗ್ ಹೊಡೆದಿದ್ದಾರೆ. ‘ವೈಲೆನ್ಸ್ ವೈಲೆನ್ಸ್ ವೈಲೆನ್ಸ್.. ವಿ ಡೋಂಟ್ ಲೈಕ್ ಇಟ್. ಬಟ್ ವೈಲೆನ್ಸ್ ಲೈಕ್ಸ್ ಅಸ್, ವಿ ಕಾಂಟ್ ಅವಾಯ್ಡ್’ ಎಂದಿರುವ ವಿಡಿಯೋ ವೈರಲ್ ಆಗಿದೆ.ಈ ಹಿಂದೆ ರಿಯಾಜ್ ಫರಂಗಿಪೇಟೆ, ತಾಂಟ್ರೆ ಬಾ ತಾಂಟ್ ಎಂದು ಭಾಷಣದಲ್ಲಿ ಹೇಳಿದ ಡೈಲಾಗ್ ಭಾರಿ ವೈರಲ್ ಆಗಿತ್ತು.
ಕಾರ್ಯಕ್ರಮದಲ್ಲಿ ಪಕ್ಷದ ಕೇರಳ ರಾಜ್ಯಾಧ್ಯಕ್ಷ ಅಶ್ರಫ್ ಮೌಲವಿ ಮುವಾಟ್ಟುಪುಝ, ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ , ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸೋ ಫ್ರಾಂಕೋ, SDPI ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಆರ್. ಭಾಸ್ಕರ್ ಪ್ರಸಾದ್ ನೆಲಮಂಗಲ. ಮುಖ್ಯ ಅತಿಥಿಗಳಾಗಿ ಪಕ್ಷದ ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ನಂಜಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್ ಲತೀಫ್ ಪುತ್ತೂರು, ಅಫ್ಸರ್ ಕೊಡ್ಲಿಪೇಟೆ, ಅಶ್ರಫ್ ಮಾಚಾರ್, ವುಮೆನ್ ಇಂಡಿಯಾ ಮೂವ್ ಮೆಂಟ್ ರಾಜ್ಯಾಧ್ಯಕ್ಷೆ ಶಾಹಿದಾ ತಸ್ನೀಮ್, ಆಯಿಶಾ ಬಜ್ಪೆ, ಕ್ಯಾಂಪಸ್ ಫ್ರಂಟ್ ರಾಜ್ಯಾಧ್ಯಕ್ಷ ಅಥಾವುಲ್ಲಾ ಪೂಂಜಾಲಕಟ್ಟೆ, ನ್ಯಾಷನಲ್ ವಿಮೆನ್ಸ್ ಫ್ರಂಟ್ ರಾಜ್ಯಾಧ್ಯಕ್ಷೆ ಫರ್ಝಾನಾ ಮಹಮ್ಮದ್ , ಮತ್ತಿತರ ಗಣ್ಯರು ಪಾಲ್ಗೊಂಡಿದ್ದಾರೆ.