ಬೆಂಗಳೂರು: ಲಾರಿ ಮತ್ತು ಕಾರು ನಡುವೆ ಢಿಕ್ಕಿ ಸಂಭವಿಸಿ ಮಕ್ಕಳು ಸೇರಿ ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ರವಿವಾರ ವರದಿಯಾಗಿದೆ. ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತರನ್ನು ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ, ರಶ್ಮಿಕಾ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಕಾರಿನಲ್ಲಿ ವಿಜಯಪುರಿಂದ ಬೆಂಗಳೂರಿಗೆ ಹೊರಟಿದ್ದರು.
ಈ ವೇಳೆ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕಾರಿನ ಟೈರ್ ಸ್ಫೋಟಿಸಿದೆ. ಪರಿಣಾಮ ಇನ್ನೊಂದು ಬದಿಯ ರಸ್ತೆಗೆ ಬಂದು ಲಾರಿಗೆ ಕಾರು ಢಿಕ್ಕಿ ಹೊಡೆದಿದೆ. ಲಾರಿ ವೇಗವಾಗಿ ಚಲಿಸುತ್ತಿದ್ದರಿಂದ ಕಾರು ಸಂಪೂರ್ಣ ಲಾರಿಯ ಕೆಳಗಡೆ ನುಸುಳಿದೆ. ಕಾರಿನಿಂದ ಮೃತದೇಹಗಳನ್ನು ಹೊರಗಡೆ ತೆಗೆಯಲು ಸ್ಥಳಿಯರು ಹರಸಾಹಸ ಪಡಬೇಕಾಯಿತು. ಅಲ್ಲದೇ, ವಿಷಯ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಹಿರಿಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ವ್ಯಾಪ್ತಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯ ಕಲಕೇರಿ ಬಳಿ ಭಾನುವಾರ ಸಂಜೆ ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಲಾ ರೂ.2ಲಕ್ಷ ಪರಿಹಾರ ಘೋಷಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಳೆಯ ಮಕ್ಕಳು ಸೇರಿದಂತೆ 6 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಎದೆ ನಲುಗಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ.
ಮೃತ ದುರ್ದೈವಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು.
ಅತಿಯಾದ ವೇಗ, ಅಜಾಗರೂಕತೆಗಳೆ ಇಂಥ ಅಪಘಾತಗಳಿಗೆ ಕಾರಣ,…
— CM of Karnataka (@CMofKarnataka) May 28, 2023
Discover more from Coastal Times Kannada
Subscribe to get the latest posts sent to your email.
Discussion about this post