ಮಂಗಳೂರು, ಮೇ 29: ರಚನಾ, ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಇದರ ವತಿಯಿಂದ ಮಂಗಳೂರು ಕ್ಲಬ್‌ನಲ್ಲಿ 28 ಮೇ 2023ರಂದು ಸಂಜೆ 7 ಗಂಟೆಗೆ ಸದಸ್ಯರ ಸಭೆಯನ್ನು ನಡೆಸಲಾಯಿತು. ಎನ್‌ಆರ್‌ಐ ಉದ್ಯಮಿ ಶ್ರೀ ಮೈಕೆಲ್ ಡಿಸೋಜಾ ಮುಖ್ಯ ಅತಿಥಿ ಮತ್ತು ಪ್ರಮುಖ ಭಾಷಣಕಾರರಾಗಿದ್ದರು.
ಶ್ರೀ ಮೈಕಲ್ ಡಿಸೋಜರವರು ಪರಿಶ್ರಮದ ಶಕ್ತಿ ಮತ್ತು ವ್ಯವಹಾರದ ಮೂಲಕ ವಿಪತ್ತುಗಳನ್ನು ನಿವಾರಿಸುವ ಬಗ್ಗೆ, ಪುತ್ತೂರಿನ ಪುಟ್ಟ ಊರಿನಿಂದ ಬಂದ ತಮ್ಮ ಜೀವನ ಪಯಣದ ಬಗ್ಗೆ ಮಾತನಾಡಿದರು. ಇವರು ತಮ್ಮ ಸಣ್ಣ ವಯಸ್ಸಿನಲ್ಲಿ ತಮ್ಮ ವ್ಯಾಪಾರವನ್ನು ಪ್ರಾರಂಭಿಸಿದರು. ನಂತರ ಯುಎಇಯಲ್ಲಿನ ವ್ಯಾಪಾರ ಸಾಮರ್ಥ್ಯದ ಬಗ್ಗೆ ಮಾರುಕಟ್ಟೆ ಅಧ್ಯಯನವನ್ನು ನಡೆಸಿ, ಸ್ಥಳೀಯರ ಸಹಾಯದಿಂದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಸ್ವಂತ ವ್ಯವಹಾರವನ್ನು ಪ್ರಾರಂಭಿಸಿ, ವ್ಯಾಪಾರದಲ್ಲಿ ಹೂಡಿಕೆ ಮಾಡಿದರು. ನಂಬಿಗಸ್ತ ಜನರು ದೊಡ್ಡ ಪ್ರಮಾಣದಲ್ಲಿ ವಂಚಿಸಿದಾಗ ಧೈರ್ಯಗುಂದದೆ, ವ್ಯಾಪಾರವನ್ನು ಪುನರಾಂಭಿಸಿದರು. ಅವರ ಧರ್ಮಪತ್ನಿ ಶ್ರೀಮತಿ ಪ್ಲೇವಿಯವರ ಸಹಾಯದಿಂದ ಮುನ್ನಡೆದುದರ ಮಾತನಾಡಿದರು. ಸಭಿಕರಲ್ಲಿ ನೆರೆದಿದ್ದ ಯುವ ಉದ್ಯಮಿಗಳಿಗೆ ನಿಮ್ಮ ವ್ಯವಹಾರವು ಆರ್ಥಿಕ ಪಾರದರ್ಶಕತೆಯನ್ನು ಹೊಂದಿರಬೇಕು. ಕಠಿಣ ಪರಿಶ್ರಮ, ನಿಮ್ಮ ಕೆಲಸದ ಬಗ್ಗೆ ಜ್ಞಾನ ಮತ್ತು ಹಣಕಾಸಿನ ಸರಿಯಾದ ನಿರ್ವಹಣೆ ವ್ಯವಹಾರದಲ್ಲಿ ಯಶಸ್ಸಿಗೆ ಪ್ರಮುಖವಾಗಿದೆ. ನಿಮ್ಮ ವ್ಯವಹಾರ ವಿಫಲವಾದರೂ ನಿಮ್ಮ ಹೆಸರು ಖ್ಯಾತಿಯಲ್ಲಿರಬೇಕು’ ಎಂಬ ಸಲಹೆ ನೀಡಿದರು.
ರಚನಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿನ್ಸೆಂಟ್ ಕುಟಿನ್ಹಾ ಸ್ವಾಗತಿಸಿ ಉಪಾಧ್ಯಕ್ಷ ಸಿಎ ರುಡಾಲ್ಫ್ ರೋಡ್ರಿಗಸ್ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಆಡಳಿತ ಮಂಡಳಿ ಸದಸ್ಯರಾದ ಶ್ರೀ ಲೆಸ್ಲಿ ರೇಗೊ ಕಾರ್ಯಕ್ರಮ ನಿರೂಪಿಸಿ, ಕೋಶಾಧಿಕಾರಿ ಶ್ರೀಮತಿ ಯುಲಾಲಿಯಾ ಡಿಸೋಜಾ ವಂದಿಸಿದರು. ಭೋಜನದೊಂದಿಗೆ ಸಭೆ ಮುಕ್ತಾಯವಾಯಿತು.
Discover more from Coastal Times Kannada
Subscribe to get the latest posts sent to your email.
Discussion about this post