ಮಂಗಳೂರು, ಮೇ 29: ಮಂಗಳೂರು ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ದ.ಕ.ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದ ಸಮರ್ಪಕ ನಿರ್ವಹಣೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಮುಂಗಾರು ಪೂರ್ವ ಸಿದ್ಧತಾ ಕ್ರಮಗಳ ಬಗ್ಗೆ ಉನ್ನತ ಮಟ್ಟದ ಅಧಿಕಾರಿಗಳ ಸಭೆಯ ಬಳಿಕ ಅವರು ಮಾತನಾಡಿ, ಮಳೆಗಾಲದಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪದ ಸಮರ್ಪಕ ನಿರ್ವಹಣೆಗೆ ಎಲ್ಲಾ ಇಲಾಖೆಗಳು ಸರ್ವ ಸನ್ನದ್ಧವಾಗಬೇಕೆಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದೇನೆಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.
ಮುಳುಗಡೆ ಹಾಗೂಗುಡ್ಡ ಪ್ರದೇಶಗಳನ್ನು ಗುರುತಿಸಿ ಅಧಿಕಾರಿಗಳನ್ನು ಸನ್ನದ್ಧವಾರಬೇಕು. ಕಂಟ್ರೋಲ್ ರೂಂಗಳನ್ನು ತೆರೆಯಬೇಕು. ಅಲ್ಲದೆ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರ ಪಡೆಯಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.. ಪೃಕೃತಿ ವಿಕೋಪದಿಂದ ತೊಂದರೆಯಾಗದಂತೆ ಸಭೆಯನ್ನು ಕರೆದಿದ್ದೇವೆ. ಮುಳುಗಡೆ ಪ್ರದೇಶ,ಗುಡ್ಡ ಪ್ರದೇಶವನ್ನು ಗುರುತಿಸಿ ಅಧಿಕಾರಿಗಳನ್ನು ಸನ್ನದ್ಧವಾಗಿರುವಂತೆ ಸೂಚಿಸಲಾಗಿದೆ. ಕಂಟ್ರೋಲ್ ರೂಂಗಳನ್ನು ತೆರೆಯಲು ಸೂಚನೆ ನೀಡಲಾಗಿದೆ. ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರ ಪಡೆಯಲು ಸೂಚನೆ ನೀಡಲಾಗಿದೆ. ಮೀನುಗಾರರ ಜೊತೆ ಚರ್ಚೆ ಮಾಡಿ ಬೋಟ್‌ಗಳನ್ನು ಪಡೆಯಲು ಸೂಚನೆ ನೀಡಲಾಗಿದೆ. ಪಶುಸಂಗೋಪನೆ ಇಲಾಖೆಗೆ ಅಗತ್ಯ ಸಲಕರಣೆ, ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದರು.
ಮೆಸ್ಕಾಂ ಸಬ್ ಸ್ಟೇಷನ್ ವ್ಯಾಪ್ತಿಯಲ್ಲಿ ಹೆಚ್ಚುವರಿ ವಾಹನ ಮತ್ತು ಸಿಬ್ಬಂದಿಯನ್ನು ನಿಗದಿಪಡಿಸಲಾಗುತ್ತದೆ. ಅಲ್ಲದೆ ಅರಣ್ಯ ಮತ್ತು ಮೆಸ್ಕಾಂ ಜಂಟಿಯಾಗಿ ಕೆಲಸ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ ಎಂದರು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಜೀವಹಾನಿಯಾದರೆ ಅರಣ್ಯ ಮತ್ತು ಮೆಸ್ಕಾಂ ಅಧಿಕಾರಿಗಳನ್ನೇ ಹೊಣೆ ಮಾಡಲಾಗುತ್ತದೆ. ಮನೆಗಳಿಗೆ ಹಾನಿಯಾದ ಸಂದರ್ಭ ತುರ್ತು ಪರಿಹಾರ ವಾಗಿ 10,000 ರೂ. ತಕ್ಷಣ ನೀಡಬೇಕು ಎಂದು ಯುಟಿ ಖಾದರ್ ಹೇಳಿದರು.
ಇನ್ನು ಸಭಾಪತಿಯವರ ತವರು ಕ್ಷೇತ್ರದಲ್ಲಿ ಕಡಲ್ಕೊರೆತ ಸಮಸ್ಯೆಗೆ ತೀವ್ರವಾಗಿರುವ ಕುರಿತು ಪ್ರಶ್ನೆಗೆ ಉತ್ತರಿಸಿದ ಖಾದರ್, ಕಡಲ್ಕೊರೆತ ನಿರ್ವಹಣೆ ಅಸಮರ್ಪಕವಾಗಿರೋದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ಸೋಮೇಶ್ವರ ಉಚ್ಚಿಲ ಭಾಗದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಹೀಗಾಗಿ ಆ ಭಾಗ ಡೇಂಜರ್ ಸ್ಥಿತಿಯನ್ನು ತಲುಪಿದೆ. ಶಾಶ್ವತವಾಗಿ ಈ ಸಮಸ್ಯೆ ನಿರ್ವಹಣೆಗೆ ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.
Discover more from Coastal Times Kannada
Subscribe to get the latest posts sent to your email.
Discussion about this post