• About us
  • Contact us
  • Disclaimer
Thursday, August 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಮೂವರ ಬಂಧನ, ಉಳಿದವರ ಪತ್ತೆಗೆ ಬಲೆ ಬೀಸಿದ ಪೊಲೀಸರು

Coastal Times by Coastal Times
May 29, 2025
in ಕರಾವಳಿ
ಬಂಟ್ವಾಳ ; ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳಿಂದ ಹಾಡಹಗಲೇ ಪಿಕಪ್ ಚಾಲಕನ ಬರ್ಬರ ಹತ್ಯೆ
112
VIEWS
WhatsappTelegramShare on FacebookShare on Twitter

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ 27ರಂದು ಅಬ್ದುಲ್ ರಹಿಮಾನ್ ಕೊಲೆ ಮತ್ತು ಜೊತೆಯಿದ್ದ ಕಲಂದರ್ ಶಾಫಿ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸತ್ತಿದ್ದಾರೆ.

ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರು ಪ್ರಕಟಣೆ ಹೊರಡಿಸಿದ್ದು, ಬಂಟ್ವಾಳ ತಾಲೂಕು ಕುರಿಯಾಳ ಗ್ರಾಮದ ಮುಂಡರಕೋಡಿಯ ದೀಪಕ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರದ ಪ್ರಥ್ವಿರಾಜ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರದ ಚಿಂತನ್ (19) ವಶಕ್ಕೆ ಪಡೆಯಲಾಗಿರುವ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಟ್ವಾಳ ಪೊಲೀಸ್ ಉಪಾಧೀಕ್ಷಕ ವಿಜಯಪ್ರಸಾದ್ ಅವರು ತನಿಖಾಧಿಕಾರಿಯಾಗಿದ್ದು, ಐದು ತನಿಖಾ ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆ ಕಾರ್ಯ ನಡೆಸಲಾಗಿದೆ. ತನಿಖಾ ತಂಡವು 29ರಂದು ಬಂಟ್ವಾಳ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಉಳಿದ ಆರೋಪಿಗಳ ಪತ್ತೆ ಕಾರ್ಯವು ಪ್ರಗತಿಯಲ್ಲಿದೆ ಎಂದು ಪೊಲೀಸರು  ತಿಳಿಸಿದ್ದಾರೆ. ರಹಿಮಾನ್ ಕೊಲೆ ಮತ್ತು ಶಾಫಿ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಈಗಾಗಲೇ ದಾಖಲಾಗಿದೆ.

ಟೆಂಪೊ ಚಾಲಕ ರಹಿಮಾನ್ ಎಲ್ಲರಿಗೂ ಬೇಕಾದ ವ್ಯಕ್ತಿ. ಮರಳು ಬೇಕು ಎಂದು ಕರೆ ಬಂದರೆ ಸಾಕು, ಜಾಗ ಎಲ್ಲಿ ಎಂದು ಕೇಳಿ ಹೊರಟುಬಿಡುತ್ತಾರೆ. ಯಾವುದೇ ಧರ್ಮ, ಜಾತಿ ನೋಡಿದವರಲ್ಲ. ಅವರ ಗ್ರಾಹಕರಲ್ಲಿ ಎಲ್ಲ ಧರ್ಮದವರೂ ಇದ್ದರು. ಮೇ 27ರಂದು ಮಧ್ಯಾಹ್ನ ಅವರಿಗೆ ಕರೆ ಬಂದಿತ್ತು. ಕೂಡಲೇ ಹೊರಟ ರಹಿಮಾನ್, 3 ರಿಂದ 3.30ರ ಅವಧಿಯಲ್ಲಿ ಕಲಂದರ್ ಶಾಫಿಯನ್ನು ಕರೆದುಕೊಂಡು ಹೊಳೆ ಬದಿಯಿಂದ ಮರಳು ಲೋಡ್ ಮಾಡಿ, ಕುರಿಯಾಳ ಗ್ರಾಮದ ಇರಾಕೋಡಿ ರಾಜೀವಿ ಎಂಬವರ ಮನೆ ಬಳಿ ಇಳಿಸಲು ಬಂದಿದ್ದರು.

ಈ ವೇಳೆ ಸುಮಾರು 15 ಜನರ ಗುಂಪು ಸುತ್ತುವರಿದು ಚಾಲಕನ ಸೀಟಿನಲ್ಲಿದ್ದ ರಹಿಮಾನ್ ಅವರನ್ನು ಹೊರಕ್ಕೆಳೆದು ತಲ್ವಾರಿನಿಂದ ದಾಳಿ ನಡೆಸಿದ್ದರು. ತಡೆಯಲು ಹೋದ ಶಾಫಿ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ರಹಿಮಾನ್ ಅವರನ್ನು ಆ ಜಾಗಕ್ಕೆ ಕರೆಸಿ ಕೊಲೆ ಮಾಡಲಾಯಿತೇ ಅಥವಾ ಅವರು ಅಲ್ಲಿಗೆ ಬರುವುದು ಗೊತ್ತಿದ್ದು ಕೊಲೆ ಮಾಡಲಾಯಿತೇ ಎಂಬ ಪ್ರಶ್ನೆ ಮೂಡಿದೆ. ಆರೋಪಿಗಳು ಪರಿಚಿತರೇ ಆಗಿದ್ದು ಹಳೆ ದ್ವೇಷವೇ ಅಥವಾ ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರಕ್ಕಾಗಿ ಕೊಲೆ ಮಾಡಿದ್ದಾರೆಯೇ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇತರ ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕರಾವಳಿ ಕೋಮುಗಲಭೆ ವಿರುದ್ಧ ಮುಲಾಜಿಲ್ಲದೇ ಕ್ರಮ : ಗೃಹ ಸಚಿವ ಪರಮೇಶ್ವರ್​

Next Post

ದ.ಕ ಜಿಲ್ಲೆಯಲ್ಲಿ ಸರಣಿ ಕೊಲೆ: ಕಾಂಗ್ರೆಸ್​ಗೆ ಮುಸ್ಲಿಂ ನಾಯಕರ ಸಾಮೂಹಿಕ ರಾಜೀನಾಮೆ ಘೋಷಣೆ, ಸಭೆಯಲ್ಲಿ ಭಾರಿ ಗದ್ದಲ

Related Posts

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ
ಕರಾವಳಿ

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

August 13, 2026
14
ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್
ಕರಾವಳಿ

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

August 11, 2026
20
Next Post
ದ.ಕ ಜಿಲ್ಲೆಯಲ್ಲಿ ಸರಣಿ ಕೊಲೆ: ಕಾಂಗ್ರೆಸ್​ಗೆ ಮುಸ್ಲಿಂ ನಾಯಕರ ಸಾಮೂಹಿಕ ರಾಜೀನಾಮೆ ಘೋಷಣೆ, ಸಭೆಯಲ್ಲಿ ಭಾರಿ ಗದ್ದಲ

ದ.ಕ ಜಿಲ್ಲೆಯಲ್ಲಿ ಸರಣಿ ಕೊಲೆ: ಕಾಂಗ್ರೆಸ್​ಗೆ ಮುಸ್ಲಿಂ ನಾಯಕರ ಸಾಮೂಹಿಕ ರಾಜೀನಾಮೆ ಘೋಷಣೆ, ಸಭೆಯಲ್ಲಿ ಭಾರಿ ಗದ್ದಲ

Discussion about this post

Recent News

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

August 13, 2026
14
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
37
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

August 13, 2026
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

August 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d