• About us
  • Contact us
  • Disclaimer
Friday, June 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಮಿಷನರ್ ಅನುಪಮ್ ಅಗರ್ವಾಲ್ ಎತ್ತಂಗಡಿ ; ಮಂಗಳೂರು ನೂತನ ಕಮಿಷನರ್ ಹುದ್ದೆಗೆ ಸುಧೀರ್ ಕುಮಾರ್ ರೆಡ್ಡಿ ನೇಮಕ

Coastal Times by Coastal Times
May 29, 2025
in ಕರಾವಳಿ
ಕಮಿಷನರ್ ಅನುಪಮ್ ಅಗರ್ವಾಲ್ ಎತ್ತಂಗಡಿ ; ಮಂಗಳೂರು ನೂತನ ಕಮಿಷನರ್ ಹುದ್ದೆಗೆ ಸುಧೀರ್ ಕುಮಾರ್ ರೆಡ್ಡಿ ನೇಮಕ
75
VIEWS
WhatsappTelegramShare on FacebookShare on Twitter

ಬೆಂಗಳೂರು, ಮೇ 29: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಒಂದಾದ ಮೇಲೊಂದು ಎನ್ನುವಂತೆ ಹಿಂದೂ-,ಮುಸ್ಲಿಮರು ಹತ್ಯೆಗಳು ಆಗುತ್ತಿದ್ದು, ಕಾನೂನು ವ್ಯವಸ್ಥೆ ಕಾಪಾಡುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದೀಗ ಬಂಟ್ವಾಳದಲ್ಲಿ ಅಬ್ದುಲ್ ರಹಿಮ್ ಹತ್ಯೆ ಬೆನ್ನಲ್ಲೇ  ದಕ್ಷಿಣ ಕನ್ನಡ ಜಿಲ್ಲೆಯ ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ಎತ್ತಂಗಡಿ ಮಾಡಿದೆ. ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್‌ ಹಾಗೂ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್ ಅವರನ್ನು ವರ್ಗಾವಣೆ ಇಂದು(ಮೇ 29) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಂಗಳೂರು ಪೊಲೀಸ್ ಆಯುಕ್ತ ಅನುಪಮ ಅಗರವಾಲ ಅವರನ್ನು ಕ್ರಿಮಿನಲ್ ಇನ್ವೆ,ಸ್ಟಿಗೇಶನ್ ಡಿಪಾರ್ಟ್ ಮೆಂಟ್ ಗೆ ವರ್ಗಾಯಿಸಲಾಗಿದೆ. ಇನ್ನು ಮಂಗಳೂರು ಪೊಲೀಸ್ ನೂತನ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನ ನೇಮಕ ಮಾಡಲಾಗಿದೆ. ಇನ್ನು ಉಡುಪಿ ಎಸ್ಪಿಯಾಗಿದ್ದ ಅರುಣ್.ಕೆ ಅವರನ್ನು ದಕ್ಷಿಣ ಕನ್ನಡ ಪೊಲಿಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ. ಇನ್ನೊಂದೆಡೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹರಿರಾಮ್ ಶಂಕರ್ ಅವರನ್ನ ನೇಮಕ ಮಾಡಲಾಗಿದೆ.

ಈ ವರ್ಗಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಈ ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ಗೃಹ ಸಚಿವ ಪರಮೇಶ್ವರ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭಾಗಿಯಾಗಿದ್ದರು. ಈ ಸಭೆಯಲ್ಲಿ ಮಂಗಳೂರಿನಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳ ಬಗ್ಗೆ ಸುದೀರ್ಘಟವಾಗಿ ಚರ್ಚೆ ಮಾಡಿದ್ದು, ಜಿಲ್ಲೆಯಲ್ಲಿ ಕಾನುನು ಸುವ್ಯವಸ್ಥೆ ಬಿಗಿಗೊಳಿಸುವ ಸಂಬಂಧ ಮಹತ್ವದ ಮಾತುಕತೆಯಾಗಿದೆ.

ಸುಧೀರ್‌ ಕುಮಾರ್‌ ರೆಡ್ಡಿ: ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ನರಸಾರಾವ್‌ ಪೇಟೆಯವರಾದ ಸುಧೀರ್ ಕುಮಾರ್ ರೆಡ್ಡಿ 2010 ರ ಬ್ಯಾಚ್ ಐಪಿಎಸ್ ಅಧಿಕಾರಿ. ಅವರು ಪುದುಚೇರಿ ಇಂಜಿನಿಯರಿಂಗ್ ಕಾಲೇಜಿನಿಂದ ಬಿಟೆಕ್ ಪದವಿ ಪಡೆದಿದ್ದಾರೆ. ಅವರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮತ್ತು ಹಿಂದೆ ಬೀದರ್ ಮತ್ತು ಚಿಕ್ಕಬಳ್ಳಾಪುರ, ಬೆಳಗಾವಿ ಜಿಲ್ಲೆಗಳ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದಾರೆ. ಆ ಬಳಿಕ ಕರ್ನಾಟಕ ಕೇಡರ್ ನಿಂದ ಆಂಧ್ರಪ್ರದೇಶ ಕೇಡರ್ ಗೆ ಡೆಪ್ಟೇಷನ್ ಮೇಲೆ ತೆರಳಿದ್ದ ಅವರು ಮೊದಲು ವಿಜಯವಾಡ, ನಂತರ ಕರ್ನೂಲ್ ಎಸ್‌ಪಿಯಾಗಿ ಸೇವೆ ಸಲ್ಲಿಸಿದರು. ಆ ಬಳಿಕ ಡಾ. ಬಿ.ಆರ್. ಅಂಬೇಡ್ಕರ್ ಕೊನಸೀಮಾ ಜಿಲ್ಲೆಯ ಎಸ್‌ಪಿಯಾಗಿ, ನಂತರ ಪೂರ್ವ ಗೋದಾವರಿ ಜಿಲ್ಲೆ ಉಸ್ತುವಾರಿ, ಬಳಿಕ ಪೂರ್ಣಾವಧಿ ಎಸ್‌ಪಿಯಾಗಿ ಕೆಲಸ ಮಾಡಿದ್ದರು.

ಡಾ.ಅರುಣ್ ಕೆ: ತಮಿಳುನಾಡಿನ 2014 ರ ಐಪಿಎಸ್ ಬ್ಯಾಚ್‌ ನ ಅಧಿಕಾರಿಯಾದ ಡಾ. ಅರುಣ್, ಪುದುಚೇರಿ ಮೆಡಿಕಲ್ ಸೈನ್ಸ್ ಕಾಲೇಜಿನಿಂದ ಎಂಬಿಬಿಎಸ್ ಪದವಿ ಪಡೆದಿದ್ದಾರೆ. ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ, ಉಡುಪಿ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಸಿಐಡಿ ಸೈಬರ್ ಅಪರಾಧ ವಿಭಾಗದ ಡಿಐಜಿ ಬೋರಸೆ ಭೂಷಣ್ ಗುಲಾಬ್ ರಾವ್ ಅವರನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಗುಪ್ತಚರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ದ.ಕ ಜಿಲ್ಲೆಯಲ್ಲಿ ಸರಣಿ ಕೊಲೆ: ಕಾಂಗ್ರೆಸ್​ಗೆ ಮುಸ್ಲಿಂ ನಾಯಕರ ಸಾಮೂಹಿಕ ರಾಜೀನಾಮೆ ಘೋಷಣೆ, ಸಭೆಯಲ್ಲಿ ಭಾರಿ ಗದ್ದಲ

Next Post

ಭಾರೀ ಮಳೆ ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆ

Related Posts

ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.
ಕರಾವಳಿ

ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.

June 18, 2026
12
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026
ಕರಾವಳಿ

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
9
Next Post
ಭಾರೀ ಮಳೆ ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆ

ಭಾರೀ ಮಳೆ ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆ

Discussion about this post

Recent News

ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

June 19, 2026
16
ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.

ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.

June 18, 2026
12
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

June 19, 2026
ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.

ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.

June 18, 2026
ಸೆನೆಗಲ್ ತಂಡವನ್ನು 3-1 ಗೋಲುಗಳಿಂದ ಸೋಲಿಸುವ ಮೂಲಕ ಹೊಸ ದಾಖಲೆ ಬರೆದ ಫ್ರಾನ್ಸ್​ ಫುಟ್ಬಾಲ್​ ಸ್ಟಾರ್​ ಎಂಬಪ್ಪೆ!

ಸೆನೆಗಲ್ ತಂಡವನ್ನು 3-1 ಗೋಲುಗಳಿಂದ ಸೋಲಿಸುವ ಮೂಲಕ ಹೊಸ ದಾಖಲೆ ಬರೆದ ಫ್ರಾನ್ಸ್​ ಫುಟ್ಬಾಲ್​ ಸ್ಟಾರ್​ ಎಂಬಪ್ಪೆ!

June 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d