ಮಂಗಳೂರು: ನಗರದ ಮೇರಿಹಿಲ್ ವಿಕಾಸ್ ಕಾಲೇಜಿನ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರರಿಬ್ಬರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಮೃತರನ್ನು ಸ್ಥಳೀಯ ನಿವಾಸಿಗಳಾದ ಪವನ್ ( 16) ಹಾಗೂ ಚಿರಾಗ್ ( 15) ಎಂದು ಗುರುತಿಸಲಾಗಿದೆ.
ಅಪಘಾತದಿಂದ ಒಬ್ಬ ಬಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ. ಗಾಯಗೊಂಡ ಇನ್ನೊಬ್ಬ ಬಾಲಕನನ್ನು ರಾಜಲಕ್ಷ್ಮೀ ಬಸ್ಸಿನಲ್ಲಿ ತಕ್ಷಣವೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆ ತಲುಪುವಷ್ಟರಲ್ಲಿ ಆತನೂ ಮೃತಪಟ್ಟಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ .

ರಾತ್ರಿ 9 ಗಂಟೆ ಸುಮಾರಿಗೆ ಏರ್ಪೋರ್ಟ್ ರಸ್ತೆಯಲ್ಲಿ ಇವರು ಕೆಪಿಟಿ ಕಡೆಯಿಂದ ಪದವಿನಂಗಡಿ ಕಡೆಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದರು. ಅತಿವೇಗದ ಚಾಲನೆಯಿಂದಾಗಿ ಸ್ಕೂಟರ್ ಮೇರಿಹಿಲ್ ನಲ್ಲಿರುವ ವಿಕಾಸ್ ಕಾಲೇಜು ಮುಂಭಾಗದಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿದ್ದು ರಸ್ತೆ ಮಧ್ಯದ ವಿದ್ಯುತ್ ಲೈಟ್ ಕಂಬಕ್ಕೆ ಇಬ್ಬರು ಸವಾರರು ಕೂಡ ಬಡಿದು ರಸ್ತೆಗೆ ಬಿದ್ದಿದ್ದಾರೆ. ಅತಿವೇಗದ ಚಾಲನೆಯಿಂದಾಗಿ ಅಪಘಾತ ಸಂಭವಿಸಿದೆ ಎನ್ನುತ್ತಿದ್ದಾರೆ.
ರಸ್ತೆಯಲ್ಲಿ ಬಿದ್ದಿದ್ದ ಒಬ್ಬನನ್ನು ಅದೇ ಸಂದರ್ಭದಲ್ಲಿ ಬಂದ ಇನೋವಾ ವಾಹನದಲ್ಲಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಇನ್ಬೊಬ್ಬನನ್ನು ರೂಟ್ ಮುಗಿಸಿ ಕರ್ತವ್ಯದಿಂದ ಮರಳುತ್ತಿದ್ದ ಬಸ್ ಒಂದರಲ್ಲಿ ಎಜೆ ಆಸ್ಪತ್ರೆಗೆ ಒಯ್ಯಲಾಗಿತ್ತು. ಓರ್ವ ಆಸ್ಪತ್ರೆಗೆ ಸಾಗಿಸುತ್ತಿದ್ದಾಗಲೇ ಮೃತಪಟ್ಟಿದ್ದಾನೆ. ಮತ್ತೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಮೃತ ಚಿರಾಗ್ ಬೋಂದೆಲ್ ಚರ್ಚ್ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದರೆ, ಪವನ್ ಕೆನರಾ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಮಾಡುತ್ತಿದ್ದ. ಅಪಘಾತಕ್ಕೀಡಾದ ವಾಹನವು ಬೋಂದೆಲ್ ಪದವಿನಂಗಡಿಯ ಕುಶಾಲ್ ಕುಮಾರ್ ಅವರ ಹೆಸರಿನಲ್ಲಿದೆ ಎಂದು ತಿಳಿದುಬಂದಿದೆ.
Discover more from Coastal Times Kannada
Subscribe to get the latest posts sent to your email.








Discussion about this post