• About us
  • Contact us
  • Disclaimer
Saturday, September 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಪ್ಪಿನಂಗಡಿ: ನೇತ್ರಾವತಿ ನದಿಗೆ ಹಾರಿ ಪ್ರಾಣ ಬಿಡಲು ಯತ್ನಿಸಿದ ಮಹಿಳೆಯೊಬ್ಬರನ್ನು ಸಾಕುನಾಯಿ ರಕ್ಷಿಸಿದ ಸಿನಿಮೀಯ ಘಟನೆ

Coastal Times by Coastal Times
June 29, 2024
in ಕರಾವಳಿ
ಉಪ್ಪಿನಂಗಡಿ: ನೇತ್ರಾವತಿ ನದಿಗೆ ಹಾರಿ ಪ್ರಾಣ ಬಿಡಲು ಯತ್ನಿಸಿದ ಮಹಿಳೆಯೊಬ್ಬರನ್ನು ಸಾಕುನಾಯಿ ರಕ್ಷಿಸಿದ ಸಿನಿಮೀಯ ಘಟನೆ
36
VIEWS
WhatsappTelegramShare on FacebookShare on Twitter

ಉಪ್ಪಿನಂಗಡಿ, ಜೂನ್ 29: ನೇತ್ರಾವತಿ ನದಿಗೆ ಹಾರಿ ಪ್ರಾಣ ಬಿಡಲು ಯತ್ನಿಸಿದ ಮಹಿಳೆಯೊಬ್ಬರನ್ನು ಸಾಕುನಾಯಿ ರಕ್ಷಿಸಿದ ಸಿನಿಮೀಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿ ಸಮೀಪದ ಪಿಲಿಗೂಡಿನ 36 ವರ್ಷದ ಮಹಿಳೆಯೊಬ್ಬರು ಇತ್ತೀಚೆಗೆ ಪತಿಯೊಂದಿಗೆ ಜಗಳವಾಡಿ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ನಾಲ್ಕು ಕಿಲೋ ಮೀಟರ್ ದೂರ ನಡೆದುಕೊಂಡು ಬಂದು ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಗೆ ಹಾರಲು ಮುಂದಾಗಿದ್ದರು. ಆದರೆ, ನಾಯಿಯಿಂದಾಗಿ ಅವರ ಜೀವ ಉಳಿದಿದೆ.

ನಾಲ್ಕು ಕಿಲೋಮೀಟರ್ ಹಿಂಬಾಲಿಸಿದ ನಾಯಿ : ಮಹಿಳೆ ಮತ್ತು ಆಕೆಯ ಪತಿಯ ನಡುವೆ ಗುರುವಾರ ರಾತ್ರಿ ತೀವ್ರ ಜಗಳವಾಗಿತ್ತು ಎನ್ನಲಾಗಿದೆ. ನಂತರ ಮಹಿಳೆ ಮನೆಯನ್ನು ತೊರೆದು ನೇತ್ರಾವತಿ ನದಿಯ ಕಡೆಗೆ ನಡೆದುಕೊಂಡು ಹೋಗಿದ್ದಾರೆ. ಈ ವೇಳೆ ಆಕೆಗೆ ತಿಳಿಯದಂತೆ ಮನೆಯ ಸಾಕು ನಾಯಿ ಅವಳನ್ನು ಹಿಂಬಾಲಿಸಿದೆ. ಮಹಿಳೆ ಇನ್ನೇನು ಸೇತುವೆಯ ಮೇಲಿನ ತಡೆ ಗೋಡೆಯನ್ನು ಹತ್ತಿ ನೇತ್ರಾವತಿ ನದಿಗೆ ಜಿಗಿಯಬೇಕು ಎನ್ನುವಷ್ಟರಲ್ಲಿ, ಶ್ವಾನವು ಆಕೆಯ ಚೂಡಿದಾರ್ ಅನ್ನು ಕಚ್ಚಿ ಎಳೆದಾಡಿದೆ. ಜತೆಗೆ ಜೋರಾಗಿ ಬೊಗಳಲು ಪ್ರಾರಂಭಿಸಿದೆ. ಇದು ಅಕ್ಕಪಕ್ಕದ ಜನರ ಗಮನ ಸೆಳೆಯಲು ಕಾರಣವಾಯಿತು.

ನಾಯಿಯ ನಿರಂತರ ಬೊಗಳುವಿಕೆ ಗಮನಿಸಿದ ದ್ವಿಚಕ್ರ ವಾಹನ ಸವಾರರಿಬ್ಬರು ಸ್ಥಳಕ್ಕೆ ಧಾವಿಸಿದರು. ಅವರು ಮಹಿಳೆಯನ್ನು ನದಿಗೆ ಹಾರುವುದರಿಂದ ತಪ್ಪಿಸುವಲ್ಲಿ ಯಶಸ್ವಿಯಾದರು. ಪರಿಣಾಮವಾಗಿ ದುರಂತವೊಂದು ತಪ್ಪಿಹೋಗಿದೆ. ಸದ್ಯ ಮಹಿಳೆ ಆಕೆಯ ಸ್ನೇಹಿತೆಯ ನಿವಾಸದಲ್ಲಿದ್ದಾರೆ. ಮಹಿಳೆ ಬೆಂಗಳೂರು ಮೂಲದವರಾಗಿದ್ದು, ಕೆಲವು ವರ್ಷಗಳ ಹಿಂದೆ ಪಿಲಿಗೂಡಿನ ಯುವಕನ ಜತೆ ಮದುವೆಯಾಗಿದ್ದರು. ಆಕೆಯ ಪತಿ ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದು, ದಂಪತಿ ಮಧ್ಯೆ ಪದೇ ಪದೇ ಜಗಳ ನಡೆಯುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಸಾಕು ನಾಯಿ ತನ್ನ ಯಜಮಾನಿಯನ್ನು ರಕ್ಷಿಸಿದ್ದಕ್ಕೆ ಇದೀಗ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು : ರಿಕ್ಷಾ ತೊಳೆಯುತ್ತಿದ್ದವರ ಮೇಲೆ ಬಿದ್ದ ವಿದ್ಯುತ್ ತಂತಿ ಇಬ್ಬರು ರಿಕ್ಷಾ ಚಾಲಕರು ಮೃತ್ಯು

Next Post

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ; ಏನು ಬದಲಾವಣೆ? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್

Related Posts

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ
ಕರಾವಳಿ

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

September 19, 2026
19
ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ
ಕರಾವಳಿ

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

September 18, 2026
30
Next Post
ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ; ಏನು ಬದಲಾವಣೆ? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ; ಏನು ಬದಲಾವಣೆ? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್

Discussion about this post

Recent News

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

September 19, 2026
19
ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

September 18, 2026
30
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

September 19, 2026
ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

September 18, 2026
ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ

ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ

September 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d