• About us
  • Contact us
  • Disclaimer
Wednesday, July 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!

Coastal Times by Coastal Times
July 29, 2026
in ಕ್ರೈಮ್ ನ್ಯೂಸ್
ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!
49
VIEWS
WhatsappTelegramShare on FacebookShare on Twitter

ಮಂಗಳೂರು: ಮಾದಕ ದ್ರವ್ಯ ಮುಕ್ತ ಮಂಗಳೂರು ನಿರ್ಮಾಣದ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವತಿಯಿಂದ ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ಸುಮಾರು ರೂ 82 ಕೋಟಿ ಮೌಲ್ಯದ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿಯೊಂದಿಗೆ ಬುಧವಾರ ವೈಜ್ಞಾನಿಕವಾಗಿ ನಾಶಪಡಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್​ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಬುಧವಾರ ಬೆಳಗ್ಗೆ 11 ಗಂಟೆಗೆ ಮಂಗಳೂರು ನಗರದ ಮುಲ್ಕಿ ಬಳಿಯ ಕೊಳ್ನಾಡು ಇಂಡಸ್ಟ್ರಿಯಲ್ ಪ್ರದೇಶದಲ್ಲಿರುವ ‘ರಾಮ್ಕಿ ಎನರ್ಜಿ ಅಂಡ್ ಎನ್ವಿರಾನ್‌ಮೆಂಟ್ ಲಿಮಿಟೆಡ್’ ಸಂಸ್ಥೆಯ ಘಟಕದಲ್ಲಿ ‘ಡ್ರಗ್ ಡಿಸ್ಪೋಸಲ್ ಕಮಿಟಿ’ ಸಮಕ್ಷಮ ಪರಿಸರ ಸ್ನೇಹಿ ಹಾಗೂ ವೈಜ್ಞಾನಿಕ ವಿಧಾನದಲ್ಲಿ ಈ ವಿಲೇವಾರಿ ಪ್ರಕ್ರಿಯೆ ನೆರವೇರಿತು.

2026ನೇ ಸಾಲಿನಲ್ಲಿ ಇದುವರೆಗೆ 87 ಎನ್ಡಿಪಿಎಸ್ ಪ್ರಕರಣಗಳನ್ನು ದಾಖಲಿಸಿ 157 ಪೆಡ್ಲರ್ ಆರೋಪಿಗಳನ್ನು ಬಂಧಿಸಲಾಗಿದೆ. ಈ ಕಾರ್ಯಾಚರಣೆಗಳಲ್ಲಿ 8,18,30,130 ರೂ. ಮೌಲ್ಯದ 148 ಕೆ.ಜಿ. 615 ಗ್ರಾಂ ಗಾಂಜಾ, 7 ಕೆ.ಜಿ. 165 ಗ್ರಾಂ ಎಂ.ಡಿ.ಎಂ.ಎ., 1 ಕೆ.ಜಿ. 705 ಗ್ರಾಂ ಹೈಡ್ರೋ ವೀಡ್ ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ಅವಧಿಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ 463 ಮಂದಿಯ ವಿರುದ್ಧ 356 ಪ್ರಕರಣಗಳನ್ನು ದಾಖಲಿಸಲಾಗಿದೆ.

ಮಂಗಳೂರು ನಗರದ ಮುಲ್ಕಿಯ ಕೊಲ್ನಾಡು ಇಂಡಸ್ಟ್ರಿಯಲ್ ಪ್ರದೇಶದಲ್ಲಿರುವ Ramky Energy and Environment Ltd. (Re Sustainability Healthcare Solutions Ltd.) ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ 16 ಪೊಲೀಸ್ ಠಾಣೆಗಳ 59 ಎನ್ಡಿಪಿಎಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ವಶಪಡಿಸಿಕೊಂಡಿದ್ದ ಮಾದಕ ವಸ್ತುಗಳನ್ನು ಡ್ರಗ್ ಡಿಸ್ಪೋಸಲ್ ಕಮಿಟಿ ಸಮಕ್ಷಮ ನಾಶಪಡಿಸಲಾಯಿತು.

ನಾಶಪಡಿಸಲಾದ ಮಾದಕ ವಸ್ತುಗಳಲ್ಲಿ 450 ಕೆ.ಜಿ. ಗಾಂಜಾ, 43 ಕೆ.ಜಿ. 260 ಗ್ರಾಂ ಎಂ.ಡಿ.ಎಂ.ಎ., 80 ಗ್ರಾಂ ಚರಸ್, 880 ಗ್ರಾಂ ಹೈಡ್ರೋ ವೀಡ್ ಗಾಂಜಾ ಹಾಗೂ 1 ಕೆ.ಜಿ. 200 ಗ್ರಾಂ ಭಾಂಗ್ ಸೇರಿದ್ದು, ಒಟ್ಟಾರೆ ಸುಮಾರು 82 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಸುಟ್ಟು ವಿಲೇವಾರಿ ಮಾಡಲಾಯಿತು.

ನಾಶಪಡಿಸಲಾದ ಮಾದಕ ವಸ್ತುಗಳಲ್ಲಿ ಪ್ರಮುಖವಾಗಿ 2024ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಸುಮಾರು 75 ಕೋಟಿ ರೂ. ಮೌಲ್ಯದ 37 ಕೆ.ಜಿ. ಎಂ.ಡಿ.ಎಂ.ಎ., 2025ರಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಅಂದಾಜು 4.47 ಕೋಟಿ ರೂ. ಮೌಲ್ಯದ ಸುಮಾರು 4 ಕೆ.ಜಿ. ಎಂ.ಡಿ.ಎಂ.ಎ., ಕೊಣಾಜೆ ಪೊಲೀಸ್ ಠಾಣೆಯ ಸುಮಾರು 20 ಲಕ್ಷ ರೂ. ಮೌಲ್ಯದ 106 ಕೆ.ಜಿ. ಗಾಂಜಾ ಹಾಗೂ ಮೂಡಬಿದ್ರೆ ಪೊಲೀಸ್ ಠಾಣೆಯ ಸುಮಾರು 36 ಲಕ್ಷ ರೂ ಮೌಲ್ಯದ 111 ಕೆ.ಜಿ. ಗಾಂಜಾ ಸೇರಿವೆ.

ಮಾದಕ ದ್ರವ್ಯ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯವಿದ್ದು, ಮಾದಕ ವಸ್ತು ಮಾರಾಟ ಅಥವಾ ಸೇವನೆಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ದೊರೆತಲ್ಲಿ ತಕ್ಷಣವೇ ಪೊಲೀಸ್ ಇಲಾಖೆ ಸೃಜಿಸಿರುವ ಕ್ಯೂಆರ್ ಕೋಡ್ ಮೂಲಕ ಅಥವಾ ಪೊಲೀಸ್ ಕಂಟ್ರೋಲ್ ರೂಮ್ 112 / 9480802321 ಸಂಖ್ಯೆಗೆ ಮಾಹಿತಿ ನೀಡುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬಂಟ್ವಾಳ: ಚಿನ್ನದಾಸೆಗೆ ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆ ಪ್ರಕರಣ; ಮೂವರಿಗೆ ಜೀವಾವಧಿ ಶಿಕ್ಷೆ

Related Posts

ಬಂಟ್ವಾಳ: ಚಿನ್ನದಾಸೆಗೆ ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆ ಪ್ರಕರಣ; ಮೂವರಿಗೆ ಜೀವಾವಧಿ ಶಿಕ್ಷೆ
ಕ್ರೈಮ್ ನ್ಯೂಸ್

ಬಂಟ್ವಾಳ: ಚಿನ್ನದಾಸೆಗೆ ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆ ಪ್ರಕರಣ; ಮೂವರಿಗೆ ಜೀವಾವಧಿ ಶಿಕ್ಷೆ

July 29, 2026
26
ಬಂಟ್ವಾಳ ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಪೊಲೀಸ್ ಬಲೆಗೆ; ಸಿಕ್ಕಿಬೀಳುವ ಭೀತಿಯಲ್ಲಿ ಇಲಿ ಪಾಷಾಣ ಸೇವಿಸಿ ಆಸ್ಪತ್ರೆ ಪಾಲು!
ಕ್ರೈಮ್ ನ್ಯೂಸ್

ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಚೇತನ್ 11 ದಿನಗಳ ಚಿಕಿತ್ಸೆಯ ಬಳಿಕ ಪೊಲೀಸ್ ವಶಕ್ಕೆ

July 28, 2026
33

Discussion about this post

Recent News

ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!

ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!

July 29, 2026
49
ಬಂಟ್ವಾಳ: ಚಿನ್ನದಾಸೆಗೆ ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆ ಪ್ರಕರಣ; ಮೂವರಿಗೆ ಜೀವಾವಧಿ ಶಿಕ್ಷೆ

ಬಂಟ್ವಾಳ: ಚಿನ್ನದಾಸೆಗೆ ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆ ಪ್ರಕರಣ; ಮೂವರಿಗೆ ಜೀವಾವಧಿ ಶಿಕ್ಷೆ

July 29, 2026
26
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!

ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!

July 29, 2026
ಬಂಟ್ವಾಳ: ಚಿನ್ನದಾಸೆಗೆ ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆ ಪ್ರಕರಣ; ಮೂವರಿಗೆ ಜೀವಾವಧಿ ಶಿಕ್ಷೆ

ಬಂಟ್ವಾಳ: ಚಿನ್ನದಾಸೆಗೆ ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆ ಪ್ರಕರಣ; ಮೂವರಿಗೆ ಜೀವಾವಧಿ ಶಿಕ್ಷೆ

July 29, 2026
ಉಳ್ಳಾಲದಲ್ಲಿ ಪೊಲೀಸರಿಂದ ಕಾಲೇಜು ವಿದ್ಯಾರ್ಥಿಗಳ ದಿಢೀರ್ ಡ್ರಗ್ಸ್‌ ತಪಾಸಣೆ: 159 ಮಂದಿಯಲ್ಲಿ ಒಬ್ಬನಿಗೆ ‘ಪಾಸಿಟಿವ್’

ಉಳ್ಳಾಲದಲ್ಲಿ ಪೊಲೀಸರಿಂದ ಕಾಲೇಜು ವಿದ್ಯಾರ್ಥಿಗಳ ದಿಢೀರ್ ಡ್ರಗ್ಸ್‌ ತಪಾಸಣೆ: 159 ಮಂದಿಯಲ್ಲಿ ಒಬ್ಬನಿಗೆ ‘ಪಾಸಿಟಿವ್’

July 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d