ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವನ್ನು ಖಂಡಿಸಿ, ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಮಾಜಿ ಸಚಿವ ಹೆಚ್. ಎಂ. ರೇವಣ್ಣ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಕೆಪಿಎಂಸಿ ಅಧ್ಯಕ್ಷೆ ಡಾ. ಪುಷ್ಪಾ ಅಮರ್ ನಾಥ್ ಮತ್ತಿತರರು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹೆಣ್ಣು ಮಕ್ಕಳಿಗೆ ಯಾವ ರಕ್ಷಣೆಯೂ ಇಲ್ಲವಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು,ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.
ಅಸಮರ್ಥ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಹೆಣ್ಣು ಮಕ್ಕಳು ಹೊರಹೋಗಬಾರದು ಎಂಬ ತಾಲಿಬಾನ್ ಮಾದರಿಯ ಫಾರ್ಮಾನುಗಳು ಹೊರಡುತ್ತಿವೆ. ಹಾಗಾದರೆ ಸರ್ಕಾರ, ಗೃಹ ಇಲಾಖೆ, ಸಚಿವರು, ಪೊಲೀಸರು ಇರುವುದೇಕೆ? ಜನರು ತೆರಿಗೆ ಪಾವತಿಸುವುದೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದ್ದು, ಜನರಿಗೆ ಸುರಕ್ಷಿತ ವಾತಾವರಣ ನಿರ್ಮಿಸಲಾಗದ ಬಿಜೆಪಿಗೆ ಅಧಿಕಾರವೇಕೆ ಎಂದು ಟೀಕಿಸಿದೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಖಂಡಿಸಿ, ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹಿಸಿ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.
ಮಾಜಿ ಸಚಿವ @HMRevanna, ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಕೆಪಿಎಂಸಿ ಅಧ್ಯಕ್ಷೆ @DrPushpaAmarnat ಸೇರಿ ಹಲವರು ಉಪಸ್ಥಿತರಿದ್ದರು. pic.twitter.com/9BFckFpPES— Karnataka Congress (@INCKarnataka) August 28, 2021