ಮಂಗಳೂರು: ನಗರದ ಹಂಪನಕಟ್ಟೆ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ, ಕಾರು, ಬೈಕ್‌ಗೆ ಢಿಕ್ಕಿ ಹೊಡೆದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಇದರಿಂದ ಜಪ್ಪು ಬಪ್ಪಾಲ್‌ನ ನಿವಾಸಿಗಳಾದ ಉಸ್ಮಾನ್ ಮತ್ತವರ ಪತ್ನಿ ರಮ್ಲಾ ಹಾಗೂ ಪುತ್ರ ಮುಹಮ್ಮದ್ ನಝಲ್ ಗಾಯಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಸ್ಟೇಟ್ ಬ್ಯಾಂಕ್ – ಅಡ್ಯಾರ್ ಮಧ್ಯೆ ಸಂಚರಿಸುವ ಪಿಟಿಸಿ ಹೆಸರಿನ ಖಾಸಗಿ ಬಸ್ ಇದಾಗಿದ್ದು ಗುರುವಾರ ಮಧ್ಯಾಹ್ನ ಸ್ಟೇಟ್ ಬ್ಯಾಂಕ್ ನಿಂದ ಅಡ್ಯಾರ್ ಹೋಗುತ್ತಿದ್ದಾಗ ಚಾಲಕ ಪೌಲ್ ಕಿರಣ್ ಲೋಬೊ(46) ದೇಹದಲ್ಲಿ ಸಕ್ಕರೆ ಪ್ರಮಾಣ ಕಡಿಮೆಯಾದ ಕಾರಣಕ್ಕೆ ಕುಸಿದು ಬಿದ್ದಿದ್ದಾರೆ. ಬಸ್ ಮಿಲಾಗ್ರಿಸ್ ಸ್ಟಾಪ್ ನಲ್ಲಿ ನಿಂತು ಹೊರಡುತ್ತಿದ್ದಾಗಲೇ ಘಟನೆ ನಡೆದಿದ್ದು, ಬಸ್ ನಿಧಾನ ಗತಿಯಲ್ಲಿತ್ತು. ಈ ವೇಳೆ, ಹಿಂದಕ್ಕೆ ತೆಗೆಯುತ್ತಿದ್ದ ಆಟೋ ಮತ್ತು ಕಾರಿಗೆ ಬಸ್ ಡಿಕ್ಕಿಯಾಗಿದೆ. ಎರಡರ ಮಧ್ಯೆ ಆಟೋ ಸಿಕ್ಕಿಕೊಂಡಿದ್ದರಿಂದ ಅಪ್ಪಚ್ಚಿಯಾಗಿದೆ. ಆದರೆ ಅದರಲ್ಲಿದ್ದ ಚಾಲಕ ಉಸ್ಮಾನ್ ಮತ್ತು ಆತನ ಪತ್ನಿ, ಮಗು ಹೆಚ್ಚಿನ ಅಪಾಯಗಳಿಲ್ಲದೆ ಪಾರಾಗಿದ್ದಾರೆ.
ಘಟನೆಯಲ್ಲಿ ಕಾರು ಮತ್ತು ಇನ್ನೊಂದು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದೆ. ಕೂಡಲೇ ಬಸ್ಸಿನ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾರೆ. ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post