ಮಂಗಳೂರು: ಸುರತ್ಕಲ್ ನ ಕಾಟಿಪಳ್ಳದಲ್ಲಿ ಮೂರು ವರ್ಷದ ಹಿಂದೆ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತ ದೀಪಕ್ ರಾವ್ ಕೊಲೆ ಪ್ರಕರಣದ ಮೂರನೇ ಆರೋಪಿಯನ್ನು ಪೊಕ್ಸೋ ಪ್ರಕರಣದಲ್ಲಿ ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಮಹಮ್ಮದ್ ನೌಶದ್ ವಿರುದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈತ ಮೂರು ವರ್ಷಗಳ ಹಿಂದೆ 2018 ರಲ್ಲಿ ಜ.3 ರಂದು ಮಂಗಳೂರಿನ ಕಾಟಿಪಳ್ಳದಲ್ಲಿ ಹಾಡಹಗಲೇ ನಡೆದ ದೀಪಕ್ ರಾವ್ ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ.
Discover more from Coastal Times Kannada
Subscribe to get the latest posts sent to your email.
Discussion about this post