ಮಂಗಳೂರು: ದೆಹಲಿ ನೋಂದಣಿಯ ಬಿಎಂಡಬ್ಲ್ಯೂ ಕಾರೊಂದು ಸಂಚರಿಸುತ್ತಿರುವಾಗಲೇ ಏಕಾಏಕಿ ಬೆಂಕಿ ಕಾಣಿಸಿಕೊಂಡು ರಸ್ತೆಯಲ್ಲೇ ಧಗಧಗನೇ ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಅಡ್ಯಾರ್ನ ಸಹ್ಯಾದ್ರಿ ಕಾಲೇಜು ಬಳಿ ಶನಿವಾರ ಸಂಭವಿಸಿದೆ. ಸ್ಥಳದಲ್ಲಿದ್ದವರು ಬಿಎಂಡಬ್ಲ್ಯು ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಕಂಡು, ನಂದಿಸಲು ಯತ್ನಿಸಿದ್ದಾರೆ. ಆದರೆ, ಸಾಧ್ಯವಾಗಲಿಲ್ಲ. ಕೆಲ ಹೊತ್ತಲ್ಲೇ ಬೆಂಕಿ ಆವರಿಸಿಕೊಂಡು, ಐಷಾರಾಮಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಬರುವ ವೇಳೆಗಾಗಲೇ ಸಂಪೂರ್ಣ ಕಾರು ಬೆಂಕಿಗೆ ಆಹುತಿಯಾಗಿದೆ.
ರಸ್ತೆಯಲ್ಲೇ ಕಾರಿಗೆ ಬೆಂಕಿ ಹೊತ್ತಿ ಉರಿಯುತ್ತಿದ್ದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಬೆಂಕಿ ತಗುಲಿರುವುದು ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ನಿಂತು ಜನರು ವೀಕ್ಷಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. 2011-12ರ ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಅರ್ಧಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಸಂಪೂರ್ಣ ಭಸ್ಮವಾಗಿದೆ. ಆದರೆ ಈ ವರೆಗೂ ಸ್ಥಳಕ್ಕೆ ಯಾವುದೇ ಅಗ್ನಿಶಾಮಕ ದಳದವರು ಆಗಮಿಸಿಲ್ಲ ಎನ್ನಲಾಗಿದೆ. ಕಾರಿನಲ್ಲಿದ್ದ ಚಾಲಕ ಬಿ.ಸಿ. ರೋಡ್ನ ಗುರುದೀಪ್ ಬೆಂಕಿ ಹಾಣಿಸಿಕೊಂಡ ಬೆನ್ನಲ್ಲೇ ಕೆಳಗಿಳಿದಿದ್ದು, ಅವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ಮಂಗಳೂರು ನಗರ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post