ಬೆಂಗಳೂರು, ಅ.28 : ರಾಜ್ಯ ಪೊಲೀಸ್ ಸಿಬ್ಬಂದಿಗೆ ದೇವರಾಜ ಅರಸು ಕಾಲದಲ್ಲಿ ನೀಡಲಾಗಿದ್ದ ಸ್ಲೋಚ್ ಮಾದರಿ ಕ್ಯಾಪ್ ಗಳನ್ನು ಬದಲಿಸಲಾಗಿದ್ದು ತೆಲಂಗಾಣ ಮಾದರಿಯಲ್ಲಿ ಬ್ಲೂ ಕ್ಯಾಪ್ ಗಳನ್ನು ವಿತರಣೆ ನೀಡಲಾಗಿದೆ. ವಿಧಾನಸೌಧ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಹೊಸ ಕ್ಯಾಪ್‌ಗಳ ವಿತರಣೆ ಮಾಡಿದರು.
ಕಳೆದ ಜೂನ್ ತಿಂಗಳಲ್ಲಿ ಪೊಲೀಸ್ ಅಧಿಕಾರಿಗಳ ಸಮಾವೇಶ ನಡೆದಿತ್ತು. ಸಮಾವೇಶದಲ್ಲಿ ಹೊಸ ಕ್ಯಾಪ್ ವಿತರಣೆಗೆ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಬಳಿಕ ಹಲವು ರಾಜ್ಯಗಳಲ್ಲಿ ಪೊಲೀಸ್ ಸಿಬ್ಬಂದಿಗೆ ಇರುವ ಕ್ಯಾಪ್ ಪರಿಶೀಲನೆ ನಡೆಸಲಾಗಿತ್ತು. ಕೊನೆಗೆ ತೆಲಂಗಾಣ ಪೊಲೀಸರು ಧರಿಸುತ್ತಿರುವ ತೆಳುವಾದ ಬ್ಲೂ ಪೀಕ್ ಕ್ಯಾಪ್ ಅನ್ನು ಆಯ್ಕೆ ಮಾಡಿದ್ದು ಇದೀಗ ವಿತರಣೆ ಮಾಡಲಾಗಿದೆ.


“ಹಲವು ವರ್ಷಗಳಿಂದ ಕಾನ್ಸ್ಟೇಬಲ್ಗಳು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಬದಲು ಪಿ-ಕ್ಯಾಪ್(ಪೀಕ್ ಕ್ಯಾಪ್) ಆಯ್ಕೆ ಮಾಡಿದ್ದು ನಾನೇ. 1956ರಿಂದ ಚಾಲ್ತಿಯಲ್ಲಿದ್ದ ಕ್ಯಾಪನ್ನು ಬದಲಾವಣೆ ಮಾಡಿದ್ದೇನೆ. ಕ್ಯಾಪ್ ಬದಲಾವಣೆಯಷ್ಟೇ ಅಲ್ಲದೆ, ವೃತ್ತಿಯಲ್ಲಿಯೂ ದಕ್ಷತೆಯಿಂದ ಕಾರ್ಯನಿರ್ವಹಿಸುವ ರೀತಿಯಲ್ಲಿ ಬದಲಾವಣೆ ಕಾಣಬೇಕು” ಎಂದು ತಿಳಿಸಿದರು.
“ಇಂಡಿಯಾ ಜಸ್ಟೀಸ್ ವರದಿಯಂತೆ ನ್ಯಾಯ ವ್ಯವಸ್ಥೆಯಲ್ಲಿ ದೇಶದ ಇತರೆ ರಾಜ್ಯಗಳಿಗಿಂತ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಡ್ರಗ್ಸ್ ಮುಕ್ತ ರಾಜ್ಯ ಮಾಡಲು ಮಾದಕವಸ್ತುಗಳ ವಿರೋಧಿ ಕಾರ್ಯಪಡೆ ರಚಿಸಲಾಗಿದೆ. ಮಂಗಳೂರು ಗಲಭೆಪೀಡಿತ ಎಂದು ನಗರವಾಗಿತ್ತು. ಪೊಲೀಸ್ ಅಧಿಕಾರಿಗಳನ್ನು ಬದಲಾವಣೆ ಮಾಡಿದ್ದರಿಂದ ನಿಯಂತ್ರಣಕ್ಕೆ ಬಂದಿದೆ. ಅಪರಾಧಗಳನ್ನು ತಡೆಗಟ್ಟಿ, ಉತ್ತಮ ತನಿಖೆ ಮಾಡಿ ಶಿಕ್ಷೆ ಕೊಡಿಸುವ ಇಚ್ಛಾಶಕ್ತಿ ಹೊಂದಬೇಕು. ಪೊಲೀಸರು ಒಳ್ಳೆಯ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ” ಎಂದರು.
Discover more from Coastal Times Kannada
Subscribe to get the latest posts sent to your email.







Discussion about this post