ಮಂಗಳೂರು: ಪತ್ರಕರ್ತರು ಸಾಮಾಜಿಕ ಹೊಣೆಗಾರಿಕೆಯನ್ನು ಅರಿತು ಕಾರ್ಯ ನಿರ್ವಹಿಸಿದರೆ ಸಮಾಜಕ್ಕೆ ಸಿಗುವ ಫಲಿತಾಂಶ ಉತ್ತಮ ವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮಂಗಳೂರು ಪುರಭವನದಲ್ಲಿ ಮಂಗಳವಾರ ನಡೆದ ಪತ್ರಕರ್ತರ ಜಿಲ್ಲಾ ಸಮ್ಮೇಳನದಲ್ಲಿ ‘ಮಾಧ್ಯಮ-ಸಾಮಾಜಿಕ ಹೊಣೆಗಾರಿಕೆ’ ಎಂಬ ವಿಷಯದಲ್ಲಿ ನಡೆದ ಗೋಷ್ಠಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಂಗಳವಾರ ಜರಗಿದ ಜಿಲ್ಲಾ ಪತ್ರಕರ್ತರ ಸಮ್ಮೇಳನದ ಸಮಾರೋಪ ದಲ್ಲಿ ಮುಖ್ಯ ಅತಿಥಿಯಾಗಿದ್ದ ಅವರು, ಮಾಧ್ಯಮವು ಆಡಳಿತ ವ್ಯವಸ್ಥೆಯ ಕಣ್ಣು ಹಾಗೂ ಕಿವಿಯಾಗಿದ್ದು ಜನಪರ ಆಡಳಿತದಲ್ಲಿ ಅದು ನಿರ್ವಹಿಸುವ ಪಾತ್ರ ಮಹತ್ತರವಾದುದು. ಮಾಧ್ಯ ಮಗಳ ಮೇಲೆ ಜನತೆ ಹೊಂದಿರುವ ನಂಬಿಕೆಯನ್ನು ಪತ್ರಕರ್ತರು ಉಳಿಸಿ ಕೊಳ್ಳಬೇಕು ಎಂದರು.
ಜಿಲ್ಲಾ ಎಸ್ ಪಿ ಹೃಷಿಕೇಶ್ ಸೋನಾವಣೆ ಮಾತನಾಡಿ, ಪತ್ರ ಕರ್ತರು ವೃತ್ತಿಯಲ್ಲಿ ಕ್ರಿಯಾಶೀಲತೆ ಜತೆಗೆ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.
ನಗರ ಪೊಲೀಸ್ ಉಪ ಆಯುಕ್ತ ಹರಿರಾಂ ಶಂಕರ್, ಅದಾನಿ ಸಂಸ್ಥೆಯ ಅಧ್ಯಕ್ಷ ಕಿಶೋರ್ ಆಳ್ವ, ಕೆನರಾ ಬ್ಯಾಂಕಿನ ಮಂಗಳೂರು ವೃತ್ತಕಚೇರಿಯ ಜಿಎಂ ಯೋಗೀಶ್ ಆಚಾರ್ಯ ಮಾತನಾಡಿದರು.
ಸಮ್ಮೇಳನ ಸರ್ವಾಧ್ಯಕ್ಷ, ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರ ಭಾವಚಿತ್ರ ಯಾನ ಕೃತಿಯನ್ನು ಬಿಡುಗಡೆಗೊಳಿಸಲಾಯಿತು.
ಮನೋಹರ್ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಸುದ್ದಿ ಬಿಡುಗಡೆಯ ಡಾ.ಯು.ಪಿ ಶಿವಾನಂದ, ಹೊಸದಿಗಂತದ ಪ್ರಕಾಶ್ ಇಳಂತಿಲ, ಕನ್ನಡಪ್ರಭದ ರಾಘವೇಂದ್ರ ಅಗ್ನಿಹೋತ್ರಿ, ಉದಯವಾಣಿಯ ಸುರೇಶ್ ಪುದುವೆಟ್ಟು, ವಾರ್ತಾಭಾರತಿಯ ಪುಷ್ಪರಾಜ್ ಬಿ.ಎನ್., ವಿಶ್ವವಾಣಿಯ ಜಿತೇಂದ್ರ ಕುಂದೇಶ್ವರ, ಡೆಕ್ಕನ್ ಹೆರಾಲ್ಡ್‌ನ ಹರ್ಷ, ನಮ್ಮಕುಡ್ಲದ ಲೀಲಾಕ್ಷ ಕರ್ಕೇರ ಮುಂತಾದವರು ಸಂವಾದದಲ್ಲಿ ಭಾಗವಹಿಸಿದರು. ನವೀನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.