ಚಿಕ್ಕಬಳ್ಳಾಪುರ: ಶೈಕ್ಷಣಿಕ ಅಧ್ಯಯನ ಪ್ರವಾಸಕ್ಕೆ ತೆರಳಿದ್ದ ವೇಳೆ ಶಾಲಾ ಮುಖ್ಯ ಶಿಕ್ಷಕಿಯೊಬ್ಬರು ತಮ್ಮ ಮಗನ ವಯಸ್ಸಿನ ಯುವಕನೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದೆ. ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಪುಷ್ಪಲತಾ ಅವರೇ ಈ ರೀತಿ ವರ್ತಿಸಿರುವ ಶಿಕ್ಷಕಿ.
ಹೌದು, SSLC ವಿದ್ಯಾಭ್ಯಾಸ ಮಾಡುತ್ತಿರುವ ಅಪ್ರಾಪ್ತ ಬಾಲಕನೊಂದಿಗೆ ಈ ಶಿಕ್ಷಕಿ ಅಸಭ್ಯವಾಗಿ ವರ್ತಿಸಿರುವುದಲ್ಲದೇ, ಆತನೊಂದಿಗೆ ರೊಮ್ಯಾಟಿಕ್ ಆಗಿ ವರ್ತಿಸಿರುವ ಚಿತ್ರಗಳನ್ನು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿರುವ ಘಟನೆ ನಡೆದಿದೆ. ಈ ಪೋಟೋಗಳು ಸೋರಿಕೆ ಆಗಿ ವಿದ್ಯಾರ್ಥಿ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಶಿಕ್ಷಕಿ ಪುಷ್ಪಲತಾ ಹೈಸ್ಕೂಲ್ ವಿದ್ಯಾರ್ಥಿ ಜೊತೆಗೆ ಮುದ್ದಾಡಿ, ರೋಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದಾರೆ.
ಇತ್ತೀಚೆಗೆ ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ವಿದ್ಯಾರ್ಥಿಯೊಂದಿಗೆ ಶಿಕ್ಷಕಿ ಪುಷ್ಪಲತಾ ಈ ರೀತಿ ವರ್ತಿಸಿದ್ದಾರೆ. ಇವರಿಬ್ಬರ ಪೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ. ಪುಪ್ಪಲತಾ ಅವರು ತಾವೊಬ್ಬ ಶಿಕ್ಷಕಿ ಎಂಬುದನ್ನೇ ಮರೆತು ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ವಿದ್ಯಾರ್ಥಿಯೊಂದಿಗೆ ಶಿಕ್ಷಕಿ ವಿವಿಧ ರೀತಿಯಲ್ಲಿ ಪೋಟೋ ತೆಗೆಸಿಕೊಂಡಿದ್ದಾಳೆ. ವಿದ್ಯಾರ್ಥಿ ಶಿಕ್ಷಕಿಗೆ ಮುತ್ತು ಕೊಡುವುದು, ಆಕೆಯನ್ನು ಎತ್ತಿ ಹಿಡಿದಿರುವುದು ಮತ್ತು ಸೀರೆ ಸೆರಗು ಎಳೆಯುವ ರೊಮ್ಯಾಂಟಿಕ್ ಫೋಟೋಗಳಿವೆ.
ಶಿಕ್ಷಕಿಯ ಈ ಅಸಭ್ಯ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ವಿದ್ಯಾರ್ಥಿಯ ಪೋಷಕರು ಸಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಶಾಲೆ ಬಳಿ ತೆರಳಿದ ವಿದ್ಯಾರ್ಥಿಯ ಪೋಷಕರು ಶಿಕ್ಷಕಿ ವಿರುದ್ಧ ಕಿಡಿಕಾರಿದ್ದಾರೆ. ಘಟನೆಯ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಗಮನಕ್ಕೆ ತಂದು ತನಿಖೆಗೆ ಆದೇಶಿಸಲಾಗಿತ್ತು.
ಈ ಬಗ್ಗೆ ಸುದ್ದಿಗಾರರ ಜೊತೆಗೆ ಮಾತನಾಡಿರುವ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ‘ಮುರುಗಮಲ್ಲ ಸರ್ಕಾರಿ ಶಾಲೆಯ ಶಿಕ್ಷಕರು ಡಿ.22 ರಿಂದ 25ರವರೆಗೂ ಶೈಕ್ಷಣಿಕ ಪ್ರವಾಸ ಹೋಗಲು ಅನುಮತಿ ಪಡೆದಿದ್ದರು. ಅದರಂತೆ ಬಾದಾಮಿ, ಧರ್ಮಸ್ಥಳ, ಯಾನಕ್ಕೆ ಪ್ರವಾಸ ಹೋಗಿದ್ದರು. ಈ ವೇಳೆ ಶಿಕ್ಷಕಿ ಪುಷ್ಪಲತಾ SSLC ಓದುತ್ತಿರುವ ಶಾಲೆಯ ವಿದ್ಯಾರ್ಥಿ ಜೊತೆ ಅಸಭ್ಯವಾಗಿ ವರ್ತಿಸಿರುವ ಫೋಟೋ ತೆಗೆಸಿಕೊಂಡಿರುವ ಬಗ್ಗೆ ಸ್ಥಳೀಯರು ನನಗೆ ದೂರು ನೀಡಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post