• About us
  • Contact us
  • Disclaimer
Monday, April 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಜನಾಡಿ ಗ್ಯಾಸ್ ಸಿಲಿಂಡರ್ ಸ್ಫೋಟ ; ಮತ್ತೋರ್ವ ಬಾಲಕಿಯೂ ಸಾವು, ಮೃತರ ಸಂಖ್ಯೆ ಮೂರಕ್ಕೆ ಏರಿಕೆ

Coastal Times by Coastal Times
December 29, 2024
in ಕರಾವಳಿ
ಮಂಜನಾಡಿ :ಮಧ್ಯರಾತ್ರಿ ಮನೆಯೊಳಗಡೆ ಗ್ಯಾಸ್ ಸ್ಫೋಟ; ತಾಯಿ, ಮಕ್ಕಳಿಗೆ ಗಂಭೀರ ಗಾಯ
44
VIEWS
WhatsappTelegramShare on FacebookShare on Twitter

ಉಳ್ಳಾಲ, ಡಿ.29: ಮಂಜನಾಡಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ ಘಟನೆಯಲ್ಲಿ ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫಾತಿಮತ್ ಮಾಯಿಝ (9) ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಂಜೆ ಮೃತಪಟ್ಟಿದ್ದು, ದುರಂತದಲ್ಲಿ ತಾಯಿ, ಇಬ್ಬರು ಪುತ್ರಿಯರು ದಾರುಣ ಮೃತಪಟ್ಟಿದ್ದಾರೆ.

ಡಿಸೆಂಬರ್ 8ರಂದು ಮಂಜನಾಡಿ ಗ್ರಾಮದ ಖಂಡಿಕ ನಿವಾಸಿಯಾಗಿದ್ದ ಮುತ್ತಲಿಬ್ ಅವರ ಮನೆಯಲ್ಲಿ ತಡರಾತ್ರಿ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿತ್ತು. ಈ ಸಂದರ್ಭ ಮುತ್ತಲಿಬ್ ಅವರ ಪತ್ನಿ ಖುಬ್ರಾ ಮತ್ತು ಮಕ್ಕಳಾದ ಝುಲೈಕ ಮೆಅದಿಯಾ, ಮಾಝಿಯಾ ಮತ್ತು ಮಾಯಿದಾ ಕೊಠಡಿಯಲ್ಲಿ ಮಲಗಿದ್ದರು. ಸ್ಫೋಟದ ಪರಿಣಾಮ ಮನೆಯ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿತ್ತು. ಘಟನೆಯಲ್ಲಿ ನಾಲ್ವರೂ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮುತ್ತಲಿಬ್ ಅವರ ಪತ್ನಿ ಖುಬ್ರಾ ಅವರು ಚಿಕಿತ್ಸೆ ಫಲಕಾರಿಯಾಗದೆ ಡಿ.13ರಂದು ಮೃತಪಟ್ಟಿದ್ದರು. ಕಳೆದ ಗುರುವಾರ ಖುಬ್ರಾ ಅವರ ಹಿರಿಯ ಮಗಳು ಝುಲೇಕ ಮೆಅದಿಯ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಳು. ತ್ತೋರ್ವ ಮಗಳು ಮಾಯಿದಾ ಚಿಕಿತ್ಸೆಗೆ ಸ್ಪಂದಿಸಿ ಗುರುವಾರ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದರು. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ಮಗಳು ಫಾತಿಮತ್ ಮಾಯಿಝ ಶನಿವಾರ ಮೃತಪಟ್ಟಿದ್ದಾಳೆ. ಮೃತಳು ಮೊಂಟೆಪದವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಮುತ್ತಲೀಬ್ ಅವರ ಏಕೈಕ ಪುತ್ರಿ ಮಾಯಿದಾ ಬದುಕುಳಿದಿದ್ದು, ಆಕೆ ಆಸ್ಪತ್ರೆಯಿಂದ ಬಿಡುಗಡೆ ಆಗಿ ಅಜ್ಜಿ ಜೊತೆ ಆಶ್ರಯ ಪಡೆದಿದ್ದಾಳೆ.

ಘಟನಾ ಸ್ಥಳಕ್ಕೆ ಶನಿವಾರ ಬೆಳಗ್ಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬಳಿಕ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದಾರೆ. ಗ್ಯಾಸ್ ಸೋರಿಕೆಯಿಂದ ಘಟನೆ ನಡೆದಿರುವ ಹಿನ್ನೆಲೆಯಲ್ಲಿ ಪರಿಹಾರಕ್ಕೆ ಸಂಬಂಧಿಸಿ ಶಿಷ್ಟಾಚಾರ ಪ್ರಕಾರ ದಾಖಲೆ ಸಹಿತ ವರದಿ ನೀಡಬೇಕು ಎಂದು ಎಚ್.ಪಿ ಗ್ಯಾಸ್ ನ ವಲಯ ಮಾರುಕಟ್ಟೆ ಸಿಬ್ಬಂದಿ ರಾಹುಲ್ ಗೆ ಖಾದರ್ ಸೂಚನೆ ನೀಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಆರ್‌ಪಿಸಿ ಆನ್‌ಲೈನ್ ವಂಚನೆಗೆ ಮಂಗಳೂರಿನ 24 ವರ್ಷದ ಯುವಕ ಸಾವಿಗೆ ಶರಣು

Next Post

ಮಂಗಳೂರಿನ ಬಿಕರ್ನಕಟ್ಟೆಯ ಅಹ್ಸನುಲ್ ಮಸೀದಿಯ ಖಬರಸ್ತಾನದ ಭೂಮಿ ಕಬಳಿಕೆ ಆರೋಪ: ಆಡಳಿತ ಮಂಡಳಿಯಿಂದ ಪ್ರತಿಭಟನೆ

Related Posts

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ
ಕರಾವಳಿ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
3
ಈ ವಿಶ್ವ  ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್
ಕರಾವಳಿ

ಈ ವಿಶ್ವ ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್

April 11, 2026
25
Next Post
ಮಂಗಳೂರಿನ ಬಿಕರ್ನಕಟ್ಟೆಯ ಅಹ್ಸನುಲ್ ಮಸೀದಿಯ ಖಬರಸ್ತಾನದ ಭೂಮಿ ಕಬಳಿಕೆ ಆರೋಪ: ಆಡಳಿತ ಮಂಡಳಿಯಿಂದ ಪ್ರತಿಭಟನೆ

ಮಂಗಳೂರಿನ ಬಿಕರ್ನಕಟ್ಟೆಯ ಅಹ್ಸನುಲ್ ಮಸೀದಿಯ ಖಬರಸ್ತಾನದ ಭೂಮಿ ಕಬಳಿಕೆ ಆರೋಪ: ಆಡಳಿತ ಮಂಡಳಿಯಿಂದ ಪ್ರತಿಭಟನೆ

Discussion about this post

Recent News

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
0
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d