• About us
  • Contact us
  • Disclaimer
Wednesday, July 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಖಾಸಗಿ ಗೋದಾಮಿನಲ್ಲಿ 500 ಕ್ವಿಂಟಾಲ್ ಅಕ್ರಮ ದಾಸ್ತಾನು ಪತ್ತೆ, ಅನ್ಯಭಾಗ್ಯ ಅಕ್ಕಿ ಪಾಲಿಶ್ ಮಾಡಿ ಬೇರೆ ಬ್ರ್ಯಾಂಡ್​ಗಳ ಹೆಸರಿನಲ್ಲಿ ಮಾರಾಟ ಶಂಕೆ

Coastal Times by Coastal Times
April 30, 2025
in ಕರಾವಳಿ
ಮಂಗಳೂರು: ಖಾಸಗಿ ಗೋದಾಮಿನಲ್ಲಿ 500 ಕ್ವಿಂಟಾಲ್ ಅಕ್ರಮ ದಾಸ್ತಾನು ಪತ್ತೆ, ಅನ್ಯಭಾಗ್ಯ ಅಕ್ಕಿ ಪಾಲಿಶ್ ಮಾಡಿ ಬೇರೆ ಬ್ರ್ಯಾಂಡ್​ಗಳ ಹೆಸರಿನಲ್ಲಿ ಮಾರಾಟ ಶಂಕೆ
32
VIEWS
WhatsappTelegramShare on FacebookShare on Twitter

ಮಂಗಳೂರು, ಏ 30: ಬಡವರು ಮೂರು ಹೊತ್ತು ಉಪವಾಸ ಕೂರಬಾರದೆಂದು ಕರ್ನಾಟಕ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿದೆ. ಆದರೆ ಈ ಯೋಜನೆ ಮೂಲಕ ಸಿಗುವ ಅಕ್ಕಿ ಅನ್ಯರ ಪಾಲಾಗುತ್ತಿದೆ. ಇದಕ್ಕೆ ಸಾಕ್ಷಿಯೆನ್ನುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಗೋಡೌನ್ ಒಂದರಲ್ಲಿ ನೂರಾರು ಮೂಟೆಗಳಲ್ಲಿ ರೇಷನ್ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿರುವುದು ಬೆಳಕಿಗೆ ಬಂದಿದೆ. ಮಂಗಳೂರು ನಗರದ ಬಂದರು ಸಮೀಪದ ಅಕ್ಕಿ ದಾಸ್ತಾನು ಗೋಡೌನ್​​ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿನಲ್ ಸೂಚನೆಯಂತೆ ಸಹಾಯಕ ಆಯುಕ್ತ ಹರ್ಷವರ್ಧನ್ ಹಾಗೂ ಆಹಾರ ಇಲಾಖೆಯ ಉಪನಿರ್ದೇಶಕರು ದಾಳಿ ನಡೆಸಿದಾಗ ಈ ಅಕ್ರಮ ಬೆಳಕಿಗೆ ಬಂದಿದೆ.

ಉತ್ತರ ಕರ್ನಾಟಕ ಭಾಗದಿಂದ ಅನ್ನಭಾಗ್ಯದ ಅಕ್ಕಿ ತಂದು ಅಕ್ರಮವಾಗಿ ದಾಸ್ತಾನು ಇರಿಸಿರುವ ಆರೋಪ ಕೇಳಿಬಂದಿದ್ದು, ದಾಳಿ ಸಂದರ್ಭದಲ್ಲಿ ಗೋದಾಮಿನಲ್ಲಿ ನಾನಾ ಬ್ರ್ಯಾಂಡ್ ಹಾಗೂ ಬ್ರ್ಯಾಂಡ್ ಇಲ್ಲದ ಗೋಣಿಗಳಲ್ಲಿ ಅಕ್ಕಿಯನ್ನು ಮೂಟೆಗಟ್ಟಲೆ ರಾಶಿ ಮಾಡಿರುವುದು ಪತ್ತೆಯಾಗಿದೆ. ಕೆಂಪಕ್ಕಿ, ಬಾಸ್ಮತಿ, ಜೀರಾ, ಸೋನಾ ಮಸೂರಿ, ಕುಚ್ಚಲಕ್ಕಿ ಚೀಲಗಳು ಪತ್ತೆಯಾಗಿವೆ. ಯಾವುದೇ ಬ್ರ್ಯಾಂಡ್ ಇಲ್ಲದ ಗೋಣಿ ಚೀಲಗಳಲ್ಲಿ ಅನ್ನಭಾಗ್ಯ ಮಾದರಿಯ ಅಕ್ಕಿಯನ್ನು ಸಂಗ್ರಹಿಸಿಡಲಾಗಿದೆ. ಇದು ಪಡಿತರ ಅಕ್ಕಿಯಾಗಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಗೋದಾಮಿನಲ್ಲಿದ್ದ ಎಲ್ಲ ಅಕ್ಕಿ ಚೀಲಗಳನ್ನು ಮಹಜರು ಮಾಡಿ ವಶಕ್ಕೆ ಪಡೆಯಲಾಗಿದೆ. ಮಹಜರು ಮಾಡಿ, ಅಗತ್ಯ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಇಲಾಖೆ ಉಪ ನಿರ್ದೇಶಕಿ ಅನಿತಾ ಮದ್ಲೂರು ತಿಳಿಸಿದ್ದಾರೆ.

ಹೊರ ಜಿಲ್ಲೆಗಳಿಂದ ಅನ್ನಭಾಗ್ಯದ ಅಕ್ಕಿಯನ್ನು ತರಿಸಿಕೊಂಡು ಇಲ್ಲಿ ಪಾಲಿಶ್ ಮಾಡಿ ಬೇರೆ ಬೇರೆ ಬ್ರ್ಯಾಂಡ್ ನಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಂತಹ ದೂರು ಬಂದಿದ್ದು, ಪರಿಶೀಲನೆ ನಡೆಸಲಾಗುವುದು. ಬ್ರ್ಯಾಂಡ್ ಇಲ್ಲದ ಗೋಣಿ ಚೀಲಗಳಲ್ಲಿ ಅಕ್ಕಿ ಕಂಡುಬಂದಿರುವುದರಿಂದ ಪಡಿತರ ಅಕ್ಕಿಯೇ ಎಂಬ ಬಗ್ಗೆ ತನಿಖೆ ನಡೆಸಲಾಗುವುದು. ಸದ್ಯಕ್ಕೆ 500 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.

ಅನುಗ್ರಹ ಎಂಟರ್ ಪ್ರೈಸಸ್ ಹೆಸರಲ್ಲಿದ್ದ ಗೋದಾಮಿನಲ್ಲಿ ಅಕ್ರಮ ಅಕ್ಕಿ ದಾಸ್ತಾನು ಪತ್ತೆಯಾಗಿದ್ದು, ಇದು ಮಂಗಳೂರಿನ ಸದಾಶಿವ ಕಾಮತ್ ಎಂಬವರಿಗೆ ಸೇರಿದ್ದಾಗಿದೆ. ದಲ್ಲಾಳಿಗಳ ಮೂಲಕ ಅಕ್ರಮವಾಗಿ ಅಕ್ಕಿಯನ್ನು ಖರೀದಿಸಿ ತಂದು ರೈಸ್ ಮಿಲ್ ಗಳಲ್ಲಿ ಪಾಲಿಶ್ ಮಾಡಿ ಬೇರೆ ಬೇರೆ ಬ್ರ್ಯಾಂಡ್ ಹೆಸರಿನಲ್ಲಿ ಮಾರಾಟ ಮಾಡುತ್ತಿರುವ ಅಂಶ ಪತ್ತೆಯಾಗಿದೆ. ಇದೇ ವ್ಯಕ್ತಿಗೆ ಮಂಗಳೂರಿನಲ್ಲಿ ಮೂರು ಕಡೆ ದಾಸ್ತಾನು ಕೇಂದ್ರ ಇದೆ ಎನ್ನಲಾಗುತ್ತಿದ್ದು, ದೊಡ್ಡ ಮಟ್ಟದಲ್ಲಿ ಅಕ್ರಮ ಇರುವ ಸಂಶಯ ವ್ಯಕ್ತವಾಗಿದೆ. ಸದ್ಯಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆಯಂತೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಾಲಿಶ್ ಅಕ್ಕಿಯನ್ನು ಪರಿಶೀಲಿಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಖಾಸಗಿ ಗೋದಾಮಿನಲ್ಲಿ ಅಕ್ಕಿ ದಾಸ್ತಾನು ಮಾಡಲು ಅವಕಾಶ ಇದೆಯೇ ಎಂಬ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಪುಕ್ಕಟೆ ಸಿಗುವ ಪಡಿತರ ಅಕ್ಕಿಯನ್ನು ಜನರಿಂದ ಕಡಿಮೆ ದರಕ್ಕೆ ಜನರಿಂದ ಖರೀದಿಸಿ ಉದ್ಯಮಿಗಳು ಮತ್ತೆ ಲಕ್ಷದ್ವೀಪ ಇನ್ನಿತರ ಪ್ರದೇಶಗಳ ಮಾರುಕಟ್ಟೆಗೆ ರವಾನಿಸುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಆಯ್ಕೆ: ಮೇ 22 ಕ್ಕೆ ಪ್ರಶಸ್ತಿ ಪ್ರದಾನ

Next Post

ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ನಡು ರಸ್ತೆಯಲ್ಲೇ ರೌಡಿಶೀಟರ್ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ

Related Posts

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ
ಕರಾವಳಿ

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

July 13, 2026
30
“Mangalore IAS – A School for Civil Services” ಸಂಸ್ಥೆ ಉದ್ಘಾಟನೆ
ಕರಾವಳಿ

“Mangalore IAS – A School for Civil Services” ಸಂಸ್ಥೆ ಉದ್ಘಾಟನೆ

July 12, 2026
47
Next Post
ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ನಡು ರಸ್ತೆಯಲ್ಲೇ ರೌಡಿಶೀಟರ್ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ

ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ನಡು ರಸ್ತೆಯಲ್ಲೇ ರೌಡಿಶೀಟರ್ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ

Discussion about this post

Recent News

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

July 15, 2026
29
ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

July 15, 2026
14
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

July 15, 2026
ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

July 15, 2026
ಸುರತ್ಕಲ್​ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಸುರತ್ಕಲ್​ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

July 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d