ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿದೆ. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಆರೆಂಜ್ – ಅಲರ್ಟ್ ಘೋಷಣೆಯಾಗಿದೆ.
ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಮೇ 30ರ ಶುಕ್ರವಾರ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಹೆಚ್ಚಿನ ಮಳೆ ಆಗುತ್ತಿರುವ ಹಿನ್ನೆಲೆ 1-10 ನೇ ತರಗತಿವರೆಗೆ ಮೇ 30ರ ಶುಕ್ರವಾರ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post