ಬಂಟ್ವಾಳ ಜುಲೈ 30: ಮನೆಯಿಂದ ನಾಪತ್ತೆಯಾಗಿದ್ದ ಯುವಕ ರೈಲ್ವೆ ಹಳ್ಳಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಬಂಟ್ವಾಳ ಠಾಣಾ ವ್ಯಾಪ್ತಿಯಿಂದ ವರದಿಯಾಗಿದೆ.
ಕಳ್ಳಿಗೆ ಗ್ರಾಮದ ಲಕ್ಷಣ ಎಂಬವರ ಪುತ್ರ ಕಾರ್ತಿಕ್ (25) ಮೃತ ದುರ್ಧೈವಿ. ಈತ ಜುಲೈ 29ರ ಸಂಜೆ ಮನೆಯಿಂದ ಹೊರ ಹೋಗಿದ್ದು ರಾತ್ರಿ 11 ಗಂಟೆಯಾದರೂ ಮನೆಗೆ ಬಾರದೇ ನಾಪತ್ತೆಯಾಗಿದ್ದ. ಈ ಹಿನ್ನೆಲೆಯಲ್ಲಿ ಮನೆಯವರು ಆತನ ಹುಡುಕಾಟ ಆರಂಭಿಸಿದ್ದು, ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಕಾರ್ತಿಕ್ ನ ಮೃತ ದೇಹ ಛಿದ್ರಗೊಂಡ ಸ್ಥಿತಿಯಲ್ಲಿ ಬಂಟ್ವಾಳ ತಾಲೂಕಿನ ದೇವಂದಬೆಟ್ಟು ಎಂಬಲ್ಲಿ ರೈಲ್ವೆ ಹಳಿಯ ಮೇಲೆ ಪತ್ತೆಯಾಗಿದೆ.
ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಉನ್ನತ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.