• About us
  • Contact us
  • Disclaimer
Friday, July 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಇಂಗ್ಲೆಂಡಿನಲ್ಲಿ ಉದ್ಯೋಗ ಕೊಡಿಸುವುದಾಗಿ ಮಂಗಳೂರು, ಉಡುಪಿ ಜಿಲ್ಲೆಯ ಹಲವಾರು ಮಂದಿಗೆ ವಂಚನೆ, ಆರೋಪಿ ದಂಪತಿ ಬಂಧನ, 24 ಪಾಸ್ಪೋರ್ಟ್ ವಶಕ್ಕೆ

Coastal Times by Coastal Times
October 30, 2025
in ಕ್ರೈಮ್ ನ್ಯೂಸ್
ಇಂಗ್ಲೆಂಡಿನಲ್ಲಿ ಉದ್ಯೋಗ ಕೊಡಿಸುವುದಾಗಿ ಮಂಗಳೂರು, ಉಡುಪಿ ಜಿಲ್ಲೆಯ ಹಲವಾರು ಮಂದಿಗೆ ವಂಚನೆ, ಆರೋಪಿ ದಂಪತಿ ಬಂಧನ, 24 ಪಾಸ್ಪೋರ್ಟ್ ವಶಕ್ಕೆ
79
VIEWS
WhatsappTelegramShare on FacebookShare on Twitter

ಮಂಗಳೂರು, ಅ.29 : ಇಂಗ್ಲೆಂಡಿನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಂಗಳೂರು, ಉಡುಪಿ ಜಿಲ್ಲೆಯ ಹಲವಾರು ಮಂದಿಯಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಬೆಂಗಳೂರಿನ ದಂಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಆನೇಕಲ್ ತಾಲೂಕಿನ ವೀವರ್ಸ್ ಕಾಲೊನಿ ನಿವಾಸಿ ಪ್ರಕೃತಿ ಯು. (34) ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿ ಚರ್ಚ್ ರೋಡ್ ನಿವಾಸಿ ಆಲ್ಬನ್ ರೆಬೇರೊ(42) ಬಂಧಿತರು. ಇವರು ಪ್ರೀತಿಸಿ ಮದುವೆಯಾಗಿದ್ದು ಬೆಂಗಳೂರಿನ ಆನೆಕಲ್ ನಲ್ಲಿಯೇ ನೆಲೆಸಿದ್ದರು.  ಆನ್ಲೈನ್ ಮತ್ತು ಒಬ್ಬರಿಂದ ಒಬ್ಬರಿಗೆ ಪರಿಚಯವಾಗಿ ವಿದೇಶದಲ್ಲಿ ಕೆಲಸ ಮಾಡಿಸಿಕೊಡುತ್ತಾರೆಂಬ ನಂಬಿಕೆಯಲ್ಲಿ ನೂರಾರು ಮಂದಿ ಹಣ ಕೊಟ್ಟು ಮೋಸ ಹೋಗಿದ್ದಾರೆ.

ಪ್ರತಿ ವ್ಯಕ್ತಿಯಿಂದಲೂ 3ರಿಂದ 4 ಲಕ್ಷ ರೂಪಾಯಿ ಹಣ ಪಡೆದಿದ್ದು, ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರುವ ಆರೋಪಗಳಿವೆ. ಕಾವೂರು ಠಾಣೆಯಲ್ಲಿ 30ಕ್ಕೂ ಹೆಚ್ಚು ಮಂದಿ ದೂರು ನೀಡಿದ್ದು, ಇದರಂತೆ ಎಫ್ಐಆರ್ ದಾಖಲಾಗಿದೆ. ಹಣ ಕಳಕೊಂಡವರು ಹೆಚ್ಚಿನವರು ಕ್ರಿಶ್ಚಿಯನ್ನರೇ ಆಗಿದ್ದು, ಇಂಗ್ಲೆಂಡ್ ಸೇರಿದಂತೆ ಯುರೋಪ್ ರಾಷ್ಟ್ರಗಳಲ್ಲಿ ಉದ್ಯೋಗ ಸಿಗುತ್ತದೆ ಎಂಬ ನಂಬಿಕೆಯಲ್ಲಿ ಹಣ ಕಟ್ಟಿದ್ದರು.

ಬೆಂಗಳೂರಿನ ಆನೆಕಲ್ ನಲ್ಲಿ ಪಬ್ಲಿಕ್ ಸ್ಕೂಲ್ ಎಂಬ ಹೆಸರಲ್ಲಿ ಇವರು ಶಾಲೆ ನಡೆಸಿಕೊಂಡಿದ್ದಾರೆ. ಇವರ ಮನೆಗೆ ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಆರೋಪಿಗಳಿಂದ 24 ಪಾಸ್‌ಪೋರ್ಟ್‌ಗಳು, 43 ಗ್ರಾಂ ಬಂಗಾರ (ಅಂದಾಜು ಮೌಲ್ಯ 4,30,000 ರೂ.) ಮತ್ತು 2 ಮೊಬೈಲ್‌ಗಳನ್ನು ಬೆಂಗಳೂರಿನಲ್ಲಿ ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮಂಗಳೂರು ಉತ್ತರ ಉಪವಿಭಾಗದ ಎ.ಸಿ.ಪಿ. ಶ್ರೀಕಾಂತ್ ಕೆ. ಮಾರ್ಗದರ್ಶನದಲ್ಲಿ ಕಾವೂರು ಠಾಣೆಯ ಇನ್‌ಸ್ಪೆಕ್ಟರ್ ರಾಘವೇಂದ್ರ ಎಂ.ಬೈಂದೂರು, ಎಸ್ಸೈ ಮಲ್ಲಿಕಾರ್ಜುನ ಬಿರಾದಾರ, ಸಿಬ್ಬಂದಿಗಳಾದ ನಾಗರತ್ನ, ರಾಘವೇಂದ್ರ, ಪ್ರವೀಣ್, ರಿಯಾಝ್ ಕಾರ್ಯಾಚರಣೆ ನಡೆಸಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಪುತ್ತೂರು: ವಿಷನ್ ಇಂಡಿಯಾ ಹೆಸರಲ್ಲಿ ದುಬಾರಿ ಗಿಫ್ಟ್ ನಕಲಿ ಲಕ್ಕಿ ಸ್ಕೀಮ್ ಮಂಗಳೂರಿನ ಇಬ್ಬರ ವಿರುದ್ಧ ಕೇಸು ದಾಖಲು

Next Post

15 ದಿನದ ಒಳಗೆ ಏರ್‌ಪೋರ್ಟ್ ರಸ್ತೆ ದುರಸ್ತಿಯಾಗದಿದ್ದರೆ ತೀವ್ರ ಪ್ರತಿಭಟನೆ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ವಾಭಿಮಾನಿ ಪ್ರೊ.ಬಿ. ಕೃಷ್ಣಪ್ಪ ಬಣ

Related Posts

ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!
ಕ್ರೈಮ್ ನ್ಯೂಸ್

ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!

July 29, 2026
68
ಬಂಟ್ವಾಳ: ಚಿನ್ನದಾಸೆಗೆ ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆ ಪ್ರಕರಣ; ಮೂವರಿಗೆ ಜೀವಾವಧಿ ಶಿಕ್ಷೆ
ಕ್ರೈಮ್ ನ್ಯೂಸ್

ಬಂಟ್ವಾಳ: ಚಿನ್ನದಾಸೆಗೆ ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆ ಪ್ರಕರಣ; ಮೂವರಿಗೆ ಜೀವಾವಧಿ ಶಿಕ್ಷೆ

July 29, 2026
30
Next Post
15 ದಿನದ ಒಳಗೆ ಏರ್‌ಪೋರ್ಟ್ ರಸ್ತೆ ದುರಸ್ತಿಯಾಗದಿದ್ದರೆ ತೀವ್ರ ಪ್ರತಿಭಟನೆ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ವಾಭಿಮಾನಿ ಪ್ರೊ.ಬಿ. ಕೃಷ್ಣಪ್ಪ ಬಣ

15 ದಿನದ ಒಳಗೆ ಏರ್‌ಪೋರ್ಟ್ ರಸ್ತೆ ದುರಸ್ತಿಯಾಗದಿದ್ದರೆ ತೀವ್ರ ಪ್ರತಿಭಟನೆ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ವಾಭಿಮಾನಿ ಪ್ರೊ.ಬಿ. ಕೃಷ್ಣಪ್ಪ ಬಣ

Discussion about this post

Recent News

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

July 30, 2026
59
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

July 30, 2026
26
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

July 30, 2026
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

July 30, 2026
ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!

ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!

July 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d