• About us
  • Contact us
  • Disclaimer
Sunday, November 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಿಂದ ಇಳಿದು ಲಾಡ್ಜ್‌ಗೆ ತೆರಳುತ್ತಿದ್ದ ವ್ಯಕ್ತಿಯನ್ನು ಕಾರಿನಲ್ಲಿ ಅಪಹರಿಸಿ 1.15 ಕೋಟಿ ನಗದು ಹಣದ ಬ್ಯಾಗ್ ಕಿತ್ತುಕೊಂಡು ಪರಾರಿ

Coastal Times by Coastal Times
October 30, 2026
in ಕ್ರೈಮ್ ನ್ಯೂಸ್
ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಿಂದ ಇಳಿದು ಲಾಡ್ಜ್‌ಗೆ ತೆರಳುತ್ತಿದ್ದ ವ್ಯಕ್ತಿಯನ್ನು ಕಾರಿನಲ್ಲಿ ಅಪಹರಿಸಿ 1.15 ಕೋಟಿ ನಗದು ಹಣದ ಬ್ಯಾಗ್ ಕಿತ್ತುಕೊಂಡು ಪರಾರಿ
136
VIEWS
WhatsappTelegramShare on FacebookShare on Twitter

ಮಂಗಳೂರು, ಅ.29 ಕೆಎಸ್‌ಆರ್‌ಟಿಸಿ ಬಸ್‌ನಿಂದ ಇಳಿದು ಲಾಡ್ಜ್‌ಗೆ ತೆರಳುತ್ತಿದ್ದ ವ್ಯಕ್ತಿಯನ್ನು ಕಾರಿನಲ್ಲಿ ಬಂದಿದ್ದ ದರೋಡೆಕೋರರು ಬಲವಂತವಾಗಿ ಅಪಹರಿಸಿ, ನಗರದಾದ್ಯಂತ ಸುತ್ತಾಡಿಸಿ ಬರೋಬ್ಬರಿ ರೂ.1.15 ಕೋಟಿ ನಗದು ಹಣ ಹಾಗೂ 2 ಮೊಬೈಲ್ ಫೋನ್‌ಗಳನ್ನು ದರೋಡೆ ಮಾಡಿ, ಕಾವೂರು ಬಳಿ ಬಿಟ್ಟು ಪರಾರಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ದಾವಣಗೆರೆಯಿಂದ ಮಂಗಳೂರಿಗೆ ಕೋಟ್ಯಂತರ ರೂಪಾಯಿ ಹಣದ ಬ್ಯಾಗ್ ಹೊತ್ತು ತಂದಿದ್ದ ಸತ್ಯನಾರಾಯಣ ಎಂಬವರು ನೀಡಿದ ದೂರಿನ ಮೇರೆಗೆ ಮಂಗಳೂರು ಪೊಲೀಸರು ಆರೋಪಿಗಳಿಗಾಗಿ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ. ದೂರುದಾರ ಸತ್ಯನಾರಾಯಣ ಅವರ ಮಾಲೀಕರಾದ ಶಿವಮೊಗ್ಗ ಗಾಂಧಿ ಬಜಾರ್ ನಿವಾಸಿ ನಾಗರಾಜ್ ಎಂಬವರು, ಅಕ್ಟೋಬರ್ 23ರಂದು ಸತ್ಯನಾರಾಯಣ ಅವರಿಗೆ ಬರೋಬ್ಬರಿ ರೂ.1 ಕೋಟಿ 15 ಲಕ್ಷ ನಗದು ಹಣವಿದ್ದ 2 ಬ್ಯಾಗ್‌ಗಳನ್ನು ನೀಡಿದ್ದರು. ಬ್ಯಾಗ್‌ಗಳನ್ನು ತೆಗೆದುಕೊಂಡು ಮಂಗಳೂರಿಗೆ ಹೋಗಿ ಕೆಎಸ್‌ಆರ್‌ಟಿಸಿ ಬಸ್ ಸ್ಟ್ಯಾಂಡ್ ಬಳಿಯ ಲಾಡ್ಜ್‌ನಲ್ಲಿ ಇರು, ನಾನು ಅಲ್ಲಿಗೆ ಬರುತ್ತೇನೆ” ಎಂದು ತಿಳಿಸಿದ್ದರು.

ಮಾಲೀಕರ ಸೂಚನೆಯಂತೆ ಸತ್ಯನಾರಾಯಣ ಅಕ್ಟೋಬರ್ 27 ರಂದು ರಾತ್ರಿ 10 ಗಂಟೆಗೆ ದಾವಣಗೆರೆಯಿಂದ ಕೆಎಸ್‌ಆರ್‌ಟಿಸಿ ಬಸ್ ಏರಿ, ಅಕ್ಟೋಬರ್ 28ರಂದು ಬೆಳಗ್ಗೆ 6 ಗಂಟೆಗೆ ಮಂಗಳೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದ ಲಾಲ್ ಬಾಗ್ ರಾಮಕೃಷ್ಣ ಹಾಸ್ಟೆಲ್ ಬಳಿ ಬಸ್ಸಿನಿಂದ ಇಳಿದಿದ್ದರು.

ಬಸ್ಸಿನಿಂದ ಇಳಿದ ಸತ್ಯನಾರಾಯಣ ಅವರು ಫುಟ್‌ಪಾತ್‌ನಲ್ಲಿ ತಿಂಡಿ ತಿನ್ನಲು ನಡೆದುಕೊಂಡು ಹೋಗುತ್ತಿದ್ದಾಗ, ಕಪ್ಪು ಬಣ್ಣದ ಕಾರಿನಲ್ಲಿ ಮುಖಕ್ಕೆ ಮಪ್ಲರ್ ಧರಿಸಿಕೊಂಡು ಬಂದ ಅಪರಿಚಿತ ನಾಲ್ವರು ದುಷ್ಕರ್ಮಿಗಳು, ಸತ್ಯನಾರಾಯಣ ಅವರನ್ನು ಬಲವಂತವಾಗಿ ಕಾರಿನೊಳಗೆ ಎಳೆದುಕೊಂಡು ಅಪಹರಿಸಿದ್ದಾರೆ. ನಂತರ ಮಂಗಳೂರು ನಗರದಾದ್ಯಂತ ಸುಮಾರು 2 ಗಂಟೆಗಳ ಕಾಲ ಕಾರಿನಲ್ಲಿ ಸುತ್ತಾಡಿಸಿದ್ದು ಸತ್ಯನಾರಾಯಣ ಅವರ ಬಳಿಯಿದ್ದ ರೂ.1.5 ಕೋಟಿ ಹಣವಿದ್ದ 2 ಬ್ಯಾಗ್‌ಗಳು ಹಾಗೂ 2 ಮೊಬೈಲ್ ಫೋನ್‌ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ದರೋಡೆ ನಡೆಸಿದ ಬಳಿಕ ಬೆಳಗ್ಗೆ 8 ಗಂಟೆಯ ಸುಮಾರಿಗೆ ಸತ್ಯನಾರಾಯಣ ಅವರನ್ನು ಕಾವೂರು ಬಸ್ ಸ್ಟ್ಯಾಂಡ್ ಸಮೀಪದ ನಿರ್ಜನ ಗುಡ್ಡದ ಮೇಲೆ ಕಾರಿನಿಂದ ಕೆಳಗೆ ತಳ್ಳಿದ್ದಾರೆ. “ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೆ ಜೀವಸಹಿತ ಬಿಡುವುದಿಲ್ಲ, ಕೊಂದೇ ಹಾಕುತ್ತೇವೆ” ಎಂದು ಜೀವ ಬೆದರಿಕೆ ಹಾಕಿ, ದರೋಡೆಕೋರರು ಕಾರಿನಲ್ಲಿ ಪರಾರಿಯಾಗಿದ್ದಾರೆ. ಕೃತ್ಯದಿಂದ ಚೇತರಿಸಿಕೊಂಡ ಸಂತ್ರಸ್ತ ಸತ್ಯನಾರಾಯಣ ಅವರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಸಂತ್ರಸ್ತ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಕಲಂಗಳಲ್ಲಿ (ಅಪಹರಣ, ದರೋಡೆ, ಜೀವ ಬೆದರಿಕೆ) ಪ್ರಕರಣ ದಾಖಲಿಸಿಕೊಂಡಿದ್ದಾರೆ. ದರೋಡೆಕೋರರು ಬಂದ ಕಪ್ಪು ಬಣ್ಣದ ಕಾರು ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ನಗರದ ಹಲವು ಭಾಗಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಬೃಹತ್ ಪ್ರಮಾಣದ ನಗದು ಹಣದ ಸಾಗಾಟದ ಬಗ್ಗೆ ದರೋಡೆಕೋರರಿಗೆ ಮುಂಚಿತವಾಗಿಯೇ ಮಾಹಿತಿ ಇತ್ತೇ ಎಂಬ ಆಯಾಮದಲ್ಲೂ ಪೊಲೀಸರು ವೈಜ್ಞಾನಿಕ ತನಿಖೆ ಮುಂದುವರಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಫರಂಗಿಪೇಟೆಯ ಸ್ಟುಡಿಯೋ ಮಾಲಕನ ಕೊಲೆ ಯತ್ನ ಪ್ರಕರಣ, ನಾಲ್ವರು ಆರೋಪಿಗಳಿಗೆ ತಲಾ 7 ವರ್ಷಗಳ ಜೈಲು ಶಿಕ್ಷೆ

Next Post

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್ ; ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಆರು ವರ್ಷ ಪಕ್ಷದಿಂದ ಉಚ್ಛಾಟಿಸಿ ರಾಜ್ಯ ಕಾಂಗ್ರೆಸ್ ಆದೇಶ

Related Posts

ಮಂಗಳೂರು: 2005ರ ಕೋಮು ಗಲಭೆ ಪ್ರಕರಣ; 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: 2005ರ ಕೋಮು ಗಲಭೆ ಪ್ರಕರಣ; 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

November 15, 2026
37
ಗೋವಾದಿಂದ ಮಂಗಳೂರಿಗೆ ಅಕ್ರಮ ಮದ್ಯ ಸಾಗಾಟ ಹೆಜಮಾಡಿ ಟೋಲ್ ಬಳಿ ನಾಲ್ವರು ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಗೋವಾದಿಂದ ಮಂಗಳೂರಿಗೆ ಅಕ್ರಮ ಮದ್ಯ ಸಾಗಾಟ ಹೆಜಮಾಡಿ ಟೋಲ್ ಬಳಿ ನಾಲ್ವರು ಆರೋಪಿಗಳ ಬಂಧನ

November 12, 2026
53
Next Post
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್ ; ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಆರು ವರ್ಷ ಪಕ್ಷದಿಂದ ಉಚ್ಛಾಟಿಸಿ ರಾಜ್ಯ ಕಾಂಗ್ರೆಸ್ ಆದೇಶ

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್ ; ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಆರು ವರ್ಷ ಪಕ್ಷದಿಂದ ಉಚ್ಛಾಟಿಸಿ ರಾಜ್ಯ ಕಾಂಗ್ರೆಸ್ ಆದೇಶ

Discussion about this post

Recent News

ನವೆಂಬರ್ 20ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ: ನಾಲ್ವರಿಗೆ ಸಹಕಾರಿ ರತ್ನ ಪ್ರಶಸ್ತಿ

ನವೆಂಬರ್ 20ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ: ನಾಲ್ವರಿಗೆ ಸಹಕಾರಿ ರತ್ನ ಪ್ರಶಸ್ತಿ

November 15, 2026
1
ಮಂಗಳೂರು: 2005ರ ಕೋಮು ಗಲಭೆ ಪ್ರಕರಣ; 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: 2005ರ ಕೋಮು ಗಲಭೆ ಪ್ರಕರಣ; 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

November 15, 2026
37
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನವೆಂಬರ್ 20ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ: ನಾಲ್ವರಿಗೆ ಸಹಕಾರಿ ರತ್ನ ಪ್ರಶಸ್ತಿ

ನವೆಂಬರ್ 20ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ: ನಾಲ್ವರಿಗೆ ಸಹಕಾರಿ ರತ್ನ ಪ್ರಶಸ್ತಿ

November 15, 2026
ಮಂಗಳೂರು: 2005ರ ಕೋಮು ಗಲಭೆ ಪ್ರಕರಣ; 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: 2005ರ ಕೋಮು ಗಲಭೆ ಪ್ರಕರಣ; 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

November 15, 2026
ಉಡುಪಿ ಮೂಲದ ಭೂಗತ ಪಾತಕಿ ರವಿ ಪೂಜಾರಿ ತಾಯಿ ನಿಧನ, ತಾಯಿಯ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಗ್ಯಾಂಗ್‌ಸ್ಟರ್

ಉಡುಪಿ ಮೂಲದ ಭೂಗತ ಪಾತಕಿ ರವಿ ಪೂಜಾರಿ ತಾಯಿ ನಿಧನ, ತಾಯಿಯ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಗ್ಯಾಂಗ್‌ಸ್ಟರ್

November 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d