• About us
  • Contact us
  • Disclaimer
Thursday, March 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಸನಬ್ಬ ಚಾರ್ಮಾಡಿ ಅವರಿಂದ ಶೀಘ್ರ ಉಚಿತ ಆಂಬುಲೆನ್ಸ್ ಸೇವೆ

Coastal Times by Coastal Times
November 30, 2023
in ಕರಾವಳಿ
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಸನಬ್ಬ ಚಾರ್ಮಾಡಿ ಅವರಿಂದ ಶೀಘ್ರ ಉಚಿತ ಆಂಬುಲೆನ್ಸ್ ಸೇವೆ
15
VIEWS
WhatsappTelegramShare on FacebookShare on Twitter

ಮಂಗಳೂರು : ಚಾರ್ಮಾಡಿ ಘಾಟ್‌ನಲ್ಲಿ ಈಗ ರಸ್ತೆ ಅಭಿವೃದ್ಧಿಯಿಂದಾಗಿ ಅಪಘಾತಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಆದರೂ ತುರ್ತು ಸಂದರ್ಭಗಳಲ್ಲಿ ಆಂಬುಲೆನ್ಸ್ ಸೇವೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಚಾರ್ಮಾಡಿಯ ಸುತ್ತಲಿನ 50 ಕಿ.ಮೀ. ವ್ಯಾಪ್ತಿಯೊಳಗೆ ಉಚಿತ ಆಂಬುಲೆನ್ಸ್ ಸೇವೆ ಶೀಘ್ರ ಆರಂಭಿಸಲಿದ್ದೇನೆ ಎಂದು ಸಮಾಜ ಸೇವಕ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ತಿಳಿಸಿದರು.
ಮಂಗಳೂರು ಪ್ರೆಸ್‌ಕ್ಲಬ್ ಬುಧವಾರ ಏರ್ಪಡಿಸಿದ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ‘ರಾಜ್ಯೋತ್ಸವ ಪುರಸ್ಕಾರದಲ್ಲಿ ಸರ್ಕಾರ ನೀಡಿದ 5 ಲಕ್ಷ ರೂ.ಮೊತ್ತವನ್ನು ಆಂಬುಲೆನ್ಸ್ ಖರೀದಿಗೆ ಬಳಸುತ್ತಿದ್ದೇನೆ. ಉಳಿದ ಸುಮಾರು 3 ಲಕ್ಷ ರೂ.ಮೊತ್ತವನ್ನು ನಾವೇ ಕುಟುಂಬಸ್ಥರು ಟ್ರಸ್ಟ್ ರಚಿಸಿ ಬ್ಯಾಂಕ್ ಸಾಲ ಪಡೆದು ಭರಿಸುತ್ತೇವೆ ಎಂದರು.

ಈಗ ಟ್ರಸ್ಟ್ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಆಂಬುಲೆನ್ಸ್ ವಾಹನ ಕೆಲವೇ ದಿನಗಳಲ್ಲಿ ಸೇವೆಗೆ ಲಭ್ಯವಾಗಲಿದೆ. ಚಾರ್ಮಾಡಿ ಆಸುಪಾಸಿನಲ್ಲಿ ಯಾರು, ಯಾವುದೇ ಸಮಯದಲ್ಲಿ ಕರೆ ಮಾಡಿದರೂ ನಮ್ಮ ಆಂಬುಲೆನ್ಸ್ ಉಚಿತ ಸೇವೆ ನೀಡಲಿದೆ ಎಂದು ಹಸನಬ್ಬ ಹೇಳಿದರು. ಹಣ, ಆಸ್ತಿ, ಅಂತಸ್ತು ಇದ್ದರೆ ಸಾಲದು. ಮನುಷ್ಯನಿಗೆ ಮಾನವೀಯತೆ ಮುಖ್ಯ. ಅಪಘಾತ ಸಂಭವಿಸಿದಾಗ ಮೊದಲು ಗಾಯಾಳುವನ್ನು ಉಪಚರಿಸಬೇಕು. ಅಪಘಾತದ ಫೋಟೋ ತೆಗೆಯುವುದು, ಅಪಘಾತಕ್ಕೆ ಕಾರಣರಾದವರೊಂದಿಗೆ ಜಗಳ ಕಾಯುವುದು ಸರಿಯಲ್ಲ. ಪ್ರಥಮವಾಗಿ ಜೀವ ಉಳಿಸುವ ಕೆಲಸಕ್ಕೆ ಆದ್ಯತೆ ನೀಡಬೇಕು,ಉಳಿದೆಲ್ಲವೂ ನಂತರ. ಅಪಘಾತ ವೇಳೆ ಪೊಲೀಸ್ ಕೇಸು, ಸಾಕ್ಷೃಕ್ಕೆ ಹೆದರಿ ಗಾಯಾಳುಗಳನ್ನು ಉಪಚರಿಸಲು ಹಿಂದೇಟು ಹಾಕಬಾರದು ಎಂದು ಅವರು ಹೇಳಿದರು.

V4 ನ್ಯೂಸ್‌ನ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣ್ ಕುಂದರ್ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ,ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. , ಪ್ರೆಸ್ ಕ್ಲಬ್ ಉಪಾಧ್ಯಕ್ಷ ಮಹಮ್ಮದ್ ಆರಿಫ್ , ಕಾರ್ಯಕಾರಿ ಸಮಿತಿ ಸದಸ್ಯರಾದ ಆತ್ಮಭೂಷಣ ಭಟ್, ದಯಾ ಕುಕ್ಕಾಜೆ ಉಪಸ್ಥಿತರಿದ್ದರು. ಪ್ರೆಸ್ ಕ್ಲಬ್ ಕಾರ್ಯದರ್ಶಿ ಬಿ.ಎನ್.ಪುಷ್ಪರಾಜ್ ಸ್ವಾಗತಿಸಿ , ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಸತೀಶ್ ಇರಾ ಕಾರ್ಯಕ್ರಮ ಸಂಯೋಜಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಅಸ್ಮಿತಾಯ್ ಆಯ್ಕೆ

Next Post

240 ವರ್ಷಗಳ ಹಿಂದೆ ಟಿಪ್ಪುವಿನ ದಾಳಿಯಿಂದ ರಕ್ಷಿಸಿದ ಬಂಟರಿಗೆ ಇಂದಿಗೂ ಕ್ರೈಸ್ತರಿಂದ ಗೌರವ: ಇಲ್ಲಿದೆ ಇಂಟ್ರಸ್ಟಿಂಗ್‌ ಸ್ಟೋರಿ

Related Posts

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್
ಕರಾವಳಿ

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
10
2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
ಕರಾವಳಿ

2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

March 8, 2026
35
Next Post
240 ವರ್ಷಗಳ ಹಿಂದೆ ಟಿಪ್ಪುವಿನ ದಾಳಿಯಿಂದ ರಕ್ಷಿಸಿದ ಬಂಟರಿಗೆ ಇಂದಿಗೂ ಕ್ರೈಸ್ತರಿಂದ ಗೌರವ: ಇಲ್ಲಿದೆ ಇಂಟ್ರಸ್ಟಿಂಗ್‌ ಸ್ಟೋರಿ

240 ವರ್ಷಗಳ ಹಿಂದೆ ಟಿಪ್ಪುವಿನ ದಾಳಿಯಿಂದ ರಕ್ಷಿಸಿದ ಬಂಟರಿಗೆ ಇಂದಿಗೂ ಕ್ರೈಸ್ತರಿಂದ ಗೌರವ: ಇಲ್ಲಿದೆ ಇಂಟ್ರಸ್ಟಿಂಗ್‌ ಸ್ಟೋರಿ

Discussion about this post

Recent News

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
25
ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d