• About us
  • Contact us
  • Disclaimer
Wednesday, January 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಅಸ್ಮಿತಾಯ್ ಆಯ್ಕೆ

Coastal Times by Coastal Times
November 30, 2023
in ಸಿನಿಮಾ
ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಅಸ್ಮಿತಾಯ್ ಆಯ್ಕೆ
92
VIEWS
WhatsappTelegramShare on FacebookShare on Twitter

ಮಂಗಳೂರು,ನ.30: ಮಾಂಡ್ ಸೊಭಾಣ್ ನಿರ್ಮಾಣದ `ಅಸ್ಮಿತಾಯ್’ ಕೊಂಕಣಿ ಚಲನಚಿತ್ರವು ಅಮೇರಿಕಾದ ವಾಷಿಂಗ್ಟನ್ ಡಿಸಿಯಲ್ಲಿ ನಡೆಯುವ, ಡಿಸಿ ಸೌತ್ ಏಶಿಯನ್ ಫಿಲ್ಮ್ ಫೆಸ್ಟಿವಲಲ್ಲಿ, 2023 ಡಿಸೆಂಬರ್ 02 ರಂದು ಪೂರ್ವಾಹ್ನ 11.00 ಗಂಟೆಗೆ, ಎ ಎಮ್ ಸಿ ಥಿಯೆಟರ್ ನಲ್ಲಿ ಪ್ರದರ್ಶನಗೊಳ್ಳಲಿದೆ.

ಸೆಪ್ಟೆಂಬರ್ 15 ರಂದು ತೆರೆಗೆ ಬಂದ ಅಸ್ಮಿತಾಯ್ ಚಲನಚಿತ್ರದ 400ಕ್ಕೂ ಮಿಕ್ಕಿ ದೇಖಾವೆಗಳು ನಡೆದಿದ್ದು, ಇದುವರೆಗೆ ವಿಶ್ವದಾದ್ಯಂತ 13 ದೇಶಗಳಲ್ಲಿ ಪ್ರದರ್ಶನಗೊಂಡಿದೆ. ಕೊಂಕಣಿ ಚಲನಚಿತ್ರ ಕ್ಷೇತ್ರದಲ್ಲಿ ಇದೊಂದು ದಾಖಲೆಯೇ ಸರಿ. `ಚಲನಚಿತ್ರದಿಂದ ಚಳುವಳಿ’ ಎಂಬ ಧ್ಯೇಯದೊಡನೆ ಮಾಂಡ್ ಸೊಭಾಣ್ ಈ ಚಿತ್ರವನ್ನು ನಿರ್ಮಿಸಿದ್ದು ಇದುವರೆಗೆ 400ಕ್ಕೂ ಮಿಕ್ಕಿ ಪ್ರದರ್ಶನಗಳನ್ನು ಕಂಡಿದ್ದು, ಭಾರತ, ಯುಎಇ, ಕುವೇಯ್ಟ್, ಬಾಹ್ರೇಯ್ನ್, ಸೌದಿ, ಒಮಾನ್, ಕತಾರ್, ಇಂಗ್ಲಂಡ್, ಆಯರ್ಲಂಡ್, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಅಮೇರಿಕಾ ಮತ್ತು ಕೆನಡಾ ದಲ್ಲಿ ಪ್ರದರ್ಶನಗೊಂಡಿದೆ. ಇನ್ನೂ ಹಲವು ದೇಶಗಳಲ್ಲಿ, ಮುಂಬಯಿ, ಬೆಂಗಳೂರು ಮತ್ತಿತರ ಮಹಾನಗರಗಳಲ್ಲಿ ಸ್ಥಳೀಯ ಸಂಸ್ಥೆಗಳ ಸಹಕಾರದಲ್ಲಿ ಜನರ ವೀಕ್ಷಣೆಗೆ ಅನುವು ಮಾಡಿ ಕೊಡಲಾಗುತ್ತಿದೆ. ಮಂಗಳೂರಿನ ಭಾರತ್ ಸಿನೆಮಾದಲ್ಲಿ ಈ ಸಿನೆಮಾ ಹತ್ತನೇ ವಾರದಲ್ಲಿದ್ದು ದಿನಂಪ್ರತಿ ಸಂಜೆ 5.00 ಗಂಟೆಗೆ ಒಂದು ದೇಖಾವೆ ನಡೆಯುತ್ತಿದೆ.

ಕೊಂಕಣಿ ಜನರ ಅಸ್ಮಿತೆಯ ಹುಡುಕಾಟದ ಎಳೆಯೊಂದಿಗೆ ಸಾಗುವ ಕತೆಯು ಗೋವಾದಿಂದ ವಲಸೆ, ಕೊಂಕಣಿಯ ಶ್ರೀಮಂತ ಜನಪದ ಪರಂಪರೆಯ ದೃಶ್ಯ ವೈಭವವನ್ನು ನವಿರಾದ ಪ್ರೇಮಕತೆಯೊಂದಿಗೆ ತೋರಿಸುತ್ತದೆ. ಎರಿಕ್ ಒಝೇರಿಯೊ ಬರೆದ ಮೂಲಕತೆಗೆ ಜೊಯೆಲ್ ಪಿರೇರಾ ಚಿತ್ರಕತೆ ಮತ್ತು ಸಂಭಾಷಣೆ ರಚಿಸಿದ್ದು ಯುವ ನಿರ್ದೇಶಕ ವಿಲಾಸ್ ರತ್ನಾಕರ್ ಕ್ಷತ್ರಿಯ ನಿರ್ದೇಶನ ನೀಡಿದ್ದಾರೆ. ಬಾಲರಾಜ ಗೌಡ ಸುಂದರವಾಗಿ ಸೆರೆ ಹಿಡಿದ ಕರಾವಳಿ, ಮಲೆನಾಡು ಮತ್ತು ಗೋವಾದ ದೃಶ್ಯಗಳನ್ನು ಮೇವಿನ್ ಜೊಯೆಲ್ ಪಿಂಟೊ ಸಂಕಲನ ಮಾಡಿದ್ದಾರೆ. ಮಾಂಡ್ ಸೊಭಾಣ್ ಅಧ್ಯಕ್ಷ ಲುವಿ ಜೆ ಪಿಂಟೊ ನಿರ್ಮಾಣದ ಉಸ್ತುವಾರಿ ವಹಿಸಿದ್ದಾರೆ.

ಆರು ಹಾಡುಗಳಿಗೆ ಆಲ್ವಿನ್ ಫೆರ್ನಾಂಡಿಸ್, ಕ್ಯಾಜಿಟನ್ ಡಾಯಸ್, ಜೊಯೆಲ್ ಪಿರೇರಾ ಹಾಗೂ ಎರಿಕ್ ಒಝೇರಿಯೊ ಮುದಗೊಳಿಸುವ ಸಂಗೀತ ರಚಿಸಿದ್ದು, ಪ್ರಸಿದ್ಧ ಗಾಯಕ ನಿಹಾಲ್ ತಾವ್ರೊ ಹಾಗೂ ಇತರೆ ಗಾಯಕರು ದನಿಗೂಡಿಸಿದ್ದಾರೆ. ಡೆನಿಸ್ ಮೊಂತೇರೊ, ಅಶ್ವಿನ್ ಡಿಕೊಸ್ತಾ, ವೆನ್ಸಿಟಾ ಡಾಯಸ್, ಪ್ರಿನ್ಸ್ ಜೇಕಬ್, ಸಾಯಿಶ್ ಪನಂದಿಕರ್, ಗೌರೀಶ್ ವೆರ್ಣೆಕರ್, ಸ್ಟ್ಯಾನಿ ಆಲ್ವಾರಿಸ್, ನೆಲ್ಲು ಪೆರ್ಮನ್ನೂರ್, ಸುನೀಲ್ ಸಿದ್ದಿ, ಲುಲು ಫೊರ್ಟೆಸ್, ನವೀನ್ ಲೋಬೊ, ಆಲ್ವಿನ್ ವೇಗಸ್ ಹೀಗೆ ಗೋವಾ ಮತ್ತು ಮಂಗಳೂರಿನ ಖ್ಯಾತ ಕಲಾವಿದರು ಪ್ರಮುಖ ಭೂಮಿಕೆಯಲ್ಲಿದ್ದಾರೆ. ಇತರ ಸುಮಾರು 500 ಕ್ಕೂ ಮಿಕ್ಕಿ ಕಲಾವಿದರು ಪ್ರಥಮ ಬಾರಿಗೆ ಕ್ಯಾಮರಾ ಮುಂದೆ ಕಾಣಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನಲ್ಲಿ ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣ ಎನ್‌ಐಎ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

Next Post

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಸನಬ್ಬ ಚಾರ್ಮಾಡಿ ಅವರಿಂದ ಶೀಘ್ರ ಉಚಿತ ಆಂಬುಲೆನ್ಸ್ ಸೇವೆ

Related Posts

ಖ್ಯಾತ ಮಲಯಾಳಂ ಚಿತ್ರರಂಗದ ಹಿರಿಯ ನಟ ಶ್ರೀನಿವಾಸನ್ ಇನ್ನಿಲ್ಲ
ಸಿನಿಮಾ

ಖ್ಯಾತ ಮಲಯಾಳಂ ಚಿತ್ರರಂಗದ ಹಿರಿಯ ನಟ ಶ್ರೀನಿವಾಸನ್ ಇನ್ನಿಲ್ಲ

December 20, 2025
72
ಧುರಂಧರ್​ ಸಿನಿಮಾ ಪಾಕಿಸ್ತಾನದಲ್ಲಿ ನಿಷೇಧಿಸಿದ್ದರೂ 2 ಮಿಲಿಯನ್​ಗೂ ಹೆಚ್ಚು ಡೌನ್​ಲೋಡ್​
ಸಿನಿಮಾ

ಧುರಂಧರ್​ ಸಿನಿಮಾ ಪಾಕಿಸ್ತಾನದಲ್ಲಿ ನಿಷೇಧಿಸಿದ್ದರೂ 2 ಮಿಲಿಯನ್​ಗೂ ಹೆಚ್ಚು ಡೌನ್​ಲೋಡ್​

December 18, 2025
1
Next Post
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಸನಬ್ಬ ಚಾರ್ಮಾಡಿ ಅವರಿಂದ ಶೀಘ್ರ ಉಚಿತ ಆಂಬುಲೆನ್ಸ್ ಸೇವೆ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಸನಬ್ಬ ಚಾರ್ಮಾಡಿ ಅವರಿಂದ ಶೀಘ್ರ ಉಚಿತ ಆಂಬುಲೆನ್ಸ್ ಸೇವೆ

Discussion about this post

Recent News

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಹಬ್ಬಕ್ಕೆ ಹರಿದು ಬಂದ ಭಕ್ತಸಾಗರ

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಹಬ್ಬಕ್ಕೆ ಹರಿದು ಬಂದ ಭಕ್ತಸಾಗರ

January 14, 2026
10
ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

January 14, 2026
37
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಹಬ್ಬಕ್ಕೆ ಹರಿದು ಬಂದ ಭಕ್ತಸಾಗರ

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಹಬ್ಬಕ್ಕೆ ಹರಿದು ಬಂದ ಭಕ್ತಸಾಗರ

January 14, 2026
ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

January 14, 2026
ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

January 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d