• About us
  • Contact us
  • Disclaimer
Saturday, June 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಹತ್ಯೆ, ಕಣ್ಣೂರು ಕೇರಳ ಮೂಲದ ಪ್ರಿಯಕರನ ಬಂಧನ

Coastal Times by Coastal Times
November 30, 2024
in ಕ್ರೈಮ್ ನ್ಯೂಸ್
ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಹತ್ಯೆ, ಕಣ್ಣೂರು ಕೇರಳ ಮೂಲದ ಪ್ರಿಯಕರನ ಬಂಧನ
129
VIEWS
WhatsappTelegramShare on FacebookShare on Twitter

ಬೆಂಗಳೂರು : ಯುವತಿಯೊಬ್ಬಳನ್ನ ಹತ್ಯೆ ಮಾಡಿ ಪರಾರಿಯಾಗಿದ್ದ ಆಕೆಯ ಪ್ರಿಯಕರನನ್ನು ಇಂದಿರಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂನ ಗುವಾಹಟಿ ಮೂಲದ ಮಾಯಾ ಗೊಗೋಯ್ (19) ಎಂಬಾಕೆಯನ್ನ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದ ಆರವ್ ಹನೋಯ್ ಎಂಬಾತನನ್ನು ಬೆಂಗಳೂರು ಹೊರವಲಯದ ದೇವನಹಳ್ಳಿ ಬಳಿ ಬಂಧಿಸಲಾಗಿದೆ. ಇಂದಿರಾನಗರ 2ನೇ ಹಂತದಲ್ಲಿರುವ ದಿ ರಾಯಲ್ ಲಿವಿಂಗ್ ಅಪಾರ್ಟ್‌ಮೆಂಟ್‌ನಲ್ಲಿ ಮಾಯಾ ಗೊಗೋಯ್ ಎಂಬಾಕೆಯನ್ನ ಹತ್ಯೆ ಮಾಡಿರುವ ಘಟನೆ ನವೆಂಬರ್ 26ರಂದು ಬೆಳಕಿಗೆ ಬಂದಿತ್ತು.

ನವೆಂಬರ್ 23 ರಂದು ಇಂದಿರಾನಗರ 2ನೇ ಹಂತದಲ್ಲಿರುವ ದಿ ರಾಯಲ್ ಲಿವಿಂಗ್ ಅಪಾರ್ಟ್‌ಮೆಂಟ್‌ನಲ್ಲಿ ಮಾಯಾ ಗೊಗೋಯ್ ಹಾಗೂ ಆಕೆಯ ಸ್ನೇಹಿತ ಆರವ್ ಹನೋಯ್ ರೂಮ್ ಪಡೆದು ತಂಗಿದ್ದರು. ಆದರೆ ಮಾಯಾಳನ್ನ ಚಾಕುವಿನಿಂದ ಇರಿದು ಹತ್ಯೆಗೈದಿದ್ದ ಆರವ್ ಹನೋಯ್, ನವೆಂಬರ್ 26ರಂದು ಬೆಳಿಗ್ಗೆ ಕ್ಯಾಬ್ ಬುಕ್ ಮಾಡಿಕೊಂಡು ಅಪಾರ್ಟ್‌ಮೆಂಟ್‌ನಿಂದ ತೆರಳಿದ್ದಾನೆ. ಹೋಟೆಲ್ ಸಿಬ್ಬಂದಿ ರೂಮ್ ಗಮನಿಸಿದಾಗ ಮಾಯಾಳ ಹತ್ಯೆಯಾಗಿರುವ ವಿಚಾರ ಬಯಲಾಗಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದ ಇಂದಿರಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಸದ್ಯ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಕಸ್ಟಡಿಗೆ ಪಡೆಯಲು ಸಿದ್ಧತೆ ಮಾಡಿಕೊಳ್ಳುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಡಿಸಿಪಿ ಮಾಹಿತಿ: ”ಹತ್ಯೆಯಾದ ಮಾಯಾ ಗೊಗೋಯ್ ಜಯನಗರ ಹಾಗೂ ಹೆಚ್ಎಸ್ಆರ್ ಲೇಔಟ್‌ನಲ್ಲಿರುವ ಕೌನ್ಸೆಲಿಂಗ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಕೇರಳ ಮೂಲದ ಆರೋಪಿ ಆರವ್ ಹನೋಯ್ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಇಂಟರ್ನ್ ಆಗಿ ಕೆಲಸ ಮಾಡುತ್ತಿದ್ದ. ಡೇಟಿಂಗ್ ಆ್ಯಪ್‌ನ ಮೂಲಕ ಪರಿಚಯವಾಗಿತ್ತು. ನವೆಂಬರ್ 23ರಂದು ಮಾಯಾ ಹಾಗೂ ಆರವ್ ಇಂದಿರಾನಗರ 2ನೇ ಹಂತದಲ್ಲಿರುವ ದಿ ರಾಯಲ್ ಲಿವಿಂಗ್ ಅಪಾರ್ಟ್‌ಮೆಂಟ್‌ನಲ್ಲಿ ರೂಮ್ ಪಡೆದಿದ್ದರು. ನಂತರ ವೈಯಕ್ತಿಕ ಕಾರಣಗಳಿಂದ ಇಬ್ಬರ ನಡುವೆ ಗಲಾಟೆಯಾಗಿತ್ತು. ಆನ್‌ಲೈನ್‌ನಲ್ಲಿ ನೈಲಾನ್ ಹಗ್ಗ ಹಾಗೂ ಚಾಕು ತರಿಸಿಕೊಂಡಿದ್ದ ಆರೋಪಿ, ಮಾಯಾಳನ್ನು ಇರಿದು ಹತ್ಯೆಗೈದಿದ್ದ. ಬಳಿಕ ಮಾರನೆ ದಿನ ಬೆಳಿಗ್ಗೆ ಕ್ಯಾಬ್ ಬುಕ್ ಮಾಡಿಕೊಂಡು ಅಪಾರ್ಟ್‌ಮೆಂಟ್‌ನಿಂದ ತೆರಳಿದ್ದ” ಎಂದು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಡಿ.ದೇವರಾಜ್ ಮಾಹಿತಿ ನೀಡಿದ್ದಾರೆ.

”ಬಳಿಕ ರೈಲ್ವೆ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಮಧ್ಯಪ್ರದೇಶ, ಉತ್ತರ ಪ್ರದೇಶ, ವಾರಣಾಸಿಗೆ ತೆರಳಿ ಬಳಿಕ ಬೆಂಗಳೂರಿಗೆ ವಾಪಸಾಗಿದ್ದ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಹತ್ಯೆ ಪ್ರಕರಣ ವರದಿಯಾದ ಬಳಿಕ ಆರೋಪಿಯ ಪತ್ತೆಗಾಗಿ ನಾಲ್ಕು ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು. ಸದ್ಯ ಆರೋಪಿಯನ್ನ ಬಂಧಿಸಲಾಗಿದ್ದು, ಪ್ರಾಥಮಿಕ ವಿಚಾರಣೆ ನಡೆಸಲಾಗಿದೆ. ನಾಳೆ ಆರೋಪಿಯ ಬಂಧನ ಪ್ರಕ್ರಿಯೆ ಪೂರ್ಣಗೊಳಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿ ಬಳಿಕ ಕಸ್ಟಡಿಗೆ ಪಡೆಯಲಾಗುವುದು” ಎಂದು ಡಿಸಿಪಿ ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಪೊಲೀಸ್ ಕಮಿಷನರ್ ವರ್ಗಾವಣೆಗೆ ಒತ್ತಾಯಿಸಿ ಡಿವೈಎಫ್ಐ ರಸ್ತೆ ತಡೆ, 30ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ

Next Post

‘ಬ್ಯಾರಿ ಎಲ್ತ್‌ಗಾರ್ತಿಮಾರೊ ಕೂಟ’ದ ಎರಡನೇ ಬ್ಯಾರಿ ಬರಹಗಾರ್ತಿಯ ಬಳಗದ ಸಮ್ಮಿಲನ

Related Posts

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್
ಕ್ರೈಮ್ ನ್ಯೂಸ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
39
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!
ಕ್ರೈಮ್ ನ್ಯೂಸ್

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
79
Next Post
‘ಬ್ಯಾರಿ ಎಲ್ತ್‌ಗಾರ್ತಿಮಾರೊ ಕೂಟ’ದ ಎರಡನೇ ಬ್ಯಾರಿ ಬರಹಗಾರ್ತಿಯ ಬಳಗದ ಸಮ್ಮಿಲನ

'ಬ್ಯಾರಿ ಎಲ್ತ್‌ಗಾರ್ತಿಮಾರೊ ಕೂಟ'ದ ಎರಡನೇ ಬ್ಯಾರಿ ಬರಹಗಾರ್ತಿಯ ಬಳಗದ ಸಮ್ಮಿಲನ

Discussion about this post

Recent News

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
39
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
67
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d