ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನವು ನಗರದ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ 2023ರ ಜ.3 ರಂದು ಬೆಳಗ್ಗೆ 9. 30ರಿಂದ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾಹಿತಿ ನೀಡಿದ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ‘ಸಮ್ಮೇಳನವನ್ನು ಎಂಆರ್‌ಜಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಪ್ರಕಾಶ್ ಶೆಟ್ಟಿ ಉದ್ಘಾಟಿಸುವರು. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಅಧ್ಯಕ್ಷತೆ ವಹಿಸುವರು’ ಎಂದು ತಿಳಿಸಿದರು.
‘ಕಡಲ ಕಿನಾರೆಯ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಪ್ರಮಾಣಪತ್ರ ವಿತರಿಸುವರು. ‘ಪತ್ರಕರ್ತರ ಕ್ಷೇಮನಿಧಿ’ಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಲೋಕಾರ್ಪಣೆಗೊಳಿಸುವರು. ಪರಿಸರಸ್ನೇಹಿ ಯೋಜನೆಗೆ ಎಸ್‍ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಚಾಲನೆ ನೀಡುವರು. ಪತ್ರಕರ್ತ ಮನೋಹರ್ ಪ್ರಸಾದ್ ಅವರ `ಭಾವಚಿತ್ರ ಯಾನ -2′ ಕೃತಿಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಹಾಗೂ ಪತ್ರಕರ್ತ ವಿಕ್ರಂ ಕಾಂತಿಕೆರೆ ಅವರ ‘ಕಾವೇರಿ ತೀರದ ಪಯಣ’ ಕೃತಿಯನ್ನು ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹಾಗೂ ವಿಶೇಷ ಸಂಚಿಕೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಬಿಡುಗಡೆ ಮಾಡುವರು’ ಎಂದರು.
‘ಶಾಸಕ ವೇದವ್ಯಾಸ್ ಕಾಮತ್ ಕಿಟ್ ವಿತರಿಸುವರು.ಶಾಸಕ ಭರತ್ ಶೆಟ್ಟಿ ಹಣ್ಣಿನ ಗಿಡಗಳನ್ನು ವಿತರಿಸುವರು. ಛಾಯಾಚಿತ್ರ ಪ್ರದರ್ಶನವನ್ನು ಶಾಸಕ ಯು. ಟಿ .ಖಾದರ್ ಉದ್ಘಾಟಿಸುವರು. ವೆನ್ಲಾಕ್ ಆಸ್ಪತ್ರೆಯ ವಾಚನಾಲಯಕ್ಕೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಪುಸ್ತಕ ಹಸ್ತಾಂತರಿಸುವರು. ಬಿಜೈ- ಕಾಪಿಕಾಡ್ ಅಂಗನವಾಡಿ ಮಕ್ಕಳಿಗೆ ಕ್ರೀಡಾ ಪರಿಕರಗಳನ್ನು ಶಾಸಕ ಹರೀಶ್ ಪೂಂಜಾ ಹಸ್ತಾಂತರಿಸುವರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಪಟ್ಲ ಪೌಂಡೇಷನ್ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಉದ್ಘಾಟಿಸುವರು’ ಎಂದು ಅವರು ಮಾಹಿತಿ ನೀಡಿದರು.
‘ಕರಾವಳಿ ಅಭಿವೃದ್ಧಿ ಮತ್ತು ಪತ್ರಿಕೋದ್ಯಮ ಕುರಿತು ಬೆಳಗ್ಗೆ 11.30ರಿಂದ ವಿಚಾರಗೋಷ್ಠಿ, ಮಧ್ಯಾಹ್ನ 2ರಿಂದ ಮ್ಯಾಜಿಕ್ ಶೋ, 2.30 ರಿಂದ ತಾಲೂಕುಗಳ ಪತ್ರಕರ್ತರ ಸಂಘದವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ 3.30ಕ್ಕೆ ನಡೆಯುವ ಸಮಾರೋಪದಲ್ಲಿ ಸಚಿವರಾದ ಎಸ್.ಅಂಗಾರ, ವಿ.ಸುನಿಲ್ ಕುಮಾರ್, ಅದಾನಿ ಸಮೂಹ ಸಂಸ್ಥೆ ದಕ್ಷಿಣ ಭಾರತ ವಿಭಾಗದ ಮುಖ್ಯಸ್ಥ ಕಿಶೋರ್ ಆಳ್ವ ಹಾಗೂ ಕ್ಯಾ.ಗಣೇಶ್ ಕಾರ್ಣಿಕ್ ಭಾಗವಹಿಸಲಿದ್ದಾರೆ’ ಎಂದರು.
ಐಎಫ್‍ಡಬ್ಲ್ಯುಜೆ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ಅವರು ಆಹ್ವನ ಪತ್ರಿಕೆ ಬಿಡುಗಡೆ ಮಾಡಿದರು. ಸದಸ್ಯ ಪಿ.ಬಿ. ಹರೀಶ್ ರೈ, ಮಂಗಳೂರು ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಆರ್. ರಾಮಕೃಷ್ಣ, ಪ್ರೆಸ್‍ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಮಾಧ್ಯಮ ಅಕಾಡೆಮಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಸಂಘದ ಖಜಾಂಚಿ ಪುಷ್ಪರಾಜ್ ಬಿ.ಎನ್., ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಇದ್ದರು.
Discover more from Coastal Times Kannada
Subscribe to get the latest posts sent to your email.







Discussion about this post