ಮಂಗಳೂರು: ಪುತ್ತೂರಿನಲ್ಲಿ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಕೃಷ್ಣ ಜೆ ರಾವ್ ಮೋಸ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಆತನ ತಂದೆ ಬಿಜೆಪಿಯ ನಾಯಕ ಜಗನ್ನಿವಾಸ ರಾವ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಸ್ಪಷ್ಟನೆ ನೀಡಿದ್ದಾರೆ.
ಜಗನ್ನಿವಾಸ ರಾವ್ ಪುತ್ರನ ವಂಚನೆ ಪ್ರಕರಣ ಬೆಳಕಿಗೆ ಬಂದ ತಕ್ಷಣ ಅವರಿಗೆ ನೋಟಿಸ್ ನೀಡಿ ಅವರನ್ನು ಪಕ್ಷದಿಂದ ದೂರ ಇಟ್ಟಿದ್ದೆವು. ಆಗ ಅವರು ಕಾನೂನಾತ್ಮವಾಗಿ, ಡಿಎನ್‌ಎ ಪರೀಕ್ಷೆಯಲ್ಲಿ ಸಾಬೀತಾದರೆ ತೊಂದರೆಗೊಳಗಾದ ಯುವತಿಯೊಂದಿಗೆ ಮಗನ ಮದುವೆ ಮಾಡಿಸುವುದಾಗಿ ಜಗನ್ನಿವಾಸ ರಾವ್ ನಮ್ಮಲ್ಲಿ ಹೇಳಿದ್ದರು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಲ್ಲೂ ಭರವಸೆ ನೀಡಿದ್ದರು. ಆದರೆ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಹೀಗಾಗಿ ಜಗನ್ನಿವಾಸ ರಾವ್ ಅವರನ್ನು ಪಕ್ಷದಿಂದ ಹೊರ ಹಾಕಲಾಗಿದೆ. ಯುವತಿಗೆ ನ್ಯಾಯ ದೊರಕಿಸಿಕೊಡುವ ತನಕ ಪ್ರಯತ್ನ ಮುಂದುವರಿಸುವುದಾಗಿ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಪದ್ಮಪ್ರಸಾದ್ ಹೆಗ್ಡೆ, ಅರುಣ್ ಶೇಟ್ ಮತ್ತಿತರರಿದ್ದರು.
Discover more from Coastal Times Kannada
Subscribe to get the latest posts sent to your email.








Discussion about this post