ಮಂಗಳೂರು, ಜ.31 : ದೇವೇಗೌಡರ ಕುಟುಂಬದ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿರುದ್ಧ ದ.ಕ. ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ನೇತೃತ್ವದಲ್ಲಿ ನಗರದ ಸರ್ಕಿಟ್ ಹೌಸ್ ಬಳಿ ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಲಾಯಿತು.
ಈ ವೇಳೆ ಮಾತನಾಡಿದ ಅಕ್ಷಿತ್ ಸುವರ್ಣ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಹೆಸರು ಮಾಡಿರುವ ದೇವೆಗೌಡರ ಬಗ್ಗೆ ಕೀಳಾಗಿ ಮಾತನಾಡಿರುವ ನಳಿನ್ ವರ್ತನೆ ಖಂಡನೀಯ. ದೇಶದ ಪ್ರಧಾನಿಯಾಗಿ ದೇವೇಗೌಡರು ನೀಡಿರುವ ಕೊಡುಗೆಯನ್ನು ನಳಿನ್ ಮರೆತಿರಬಹುದು. ಆದರೆ ದೇಶದ ಜನರು ಮರೆತಿಲ್ಲ. ದೇವೆಗೌಡರ ಕುಟುಂಬ ಹಾಗೂ ಜೆಡಿಎಸ್ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಿರುವ ನಳಿನ್ ತಕ್ಷಣ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಳಿನ್ ಭಾಗವಹಿಸುವ ಎಲ್ಲಾ ಕಾರ್ಯಕ್ರಮದಲ್ಲೂ ಕಪ್ಪುಬಾವುಟ ಪ್ರದರ್ಶಿಸಲಾಗುವುದು ಎಂದು ಎಚ್ಚರಿಸಿದರು.
ಯುವ ಜನತಾದಳ (ಜಾ) ದ.ಕ. ಜಿಲ್ಲೆ ಇದರ ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ಹಾಗು ಜಿಲ್ಲಾ ಸಂಘಟನಾ ಉಸ್ತುವಾರಿಯಾದ ರತೀಶ್ ಕರ್ಕೇರ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಮೊಹಮ್ಮದ್ ಅಸಿಫ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿತೇಶ್ ರೈ, ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು ಹಾಗೂ ಯುವ ಪಧಾದಿಕಾರಿಗಳಾದ ನಿತೇಶ್ ಪೂಜಾರಿ, ವಿನಯ್, ಗೌತಮ್, ವಿನಿತ್, ರಿನಿತ್, ನಿಶಾಂತ್, ಗಣೇಶ್, ಪ್ರದೀಪ್ ಕೀರ್ತಿ, ಪವನ್, ಧನುಷ್, ಸುಶಾಂತ್, ವಿನಯ್, ಜಯದೀಪ್, ಧನುಷ್ ಪೂಜಾರಿ ಮುಂತಾದವರು ಪಾಲ್ಗೊಂಡಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post