ಬೆಂಗಳೂರು, ಜ 30: ಬೆಂಗಳೂರು ನಗರ ಪೊಲೀಸರು ಡ್ರಗ್ಸ್ ಪೆಡ್ಲರ್ಗಳ ವಿರುದ್ಧ ಸಮರ ಸಾರಿದ್ದಾರೆ. ಡ್ರಗ್ಸ್ ಮುಕ್ತ ನಗರವನ್ನಾಗಿ ಮಾಡಲು ಪಣ ತೊಟ್ಟಿದ್ದಾರೆ. ಅದರಂತೆ ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳು ನಗರದಲ್ಲಿ ಒಂದು ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ಏಳು ಜನ ಡ್ರಗ್ಸ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ಪುಲಿಕೇಶಿನಗರ, ಬಾಣಸವಾಡಿ, ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿ ಸೇರಿದಂತೆ ನಗರದ ಹಲವೆಡೆ ಆರೋಪಿಗಳು ಡ್ರಗ್ಸ್ ಮಾರುತ್ತಿದ್ದರು. 219 ಎಕ್ಸ್ಟೆಸಿ ಪಿಲ್ಸ್, 505 ಗ್ರಾಂ ಎಂಡಿಎಂಎ ಕ್ರಿಸ್ಟಲ್, 130 ಗ್ರಾಂ ತೂಕದ ಚರಸ್, ಕೊಕೇನ್ ಒಟ್ಟು 1 ಕೋಟಿ 52 ಲಕ್ಷದ 50 ಸಾವಿರ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.
Discussion about this post