ಮಂಗಳೂರು: ನಗರದ ಕೆಎಸ್ ರಾವ್ ರಸ್ತೆಯ ಕರುಣಾ ಲಾಡ್ಜ್‌ನಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ನಗರದ ಕೆಎಸ್ ರಾವ್ ರಸ್ತೆಯ ಕರುಣಾ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಕುಟುಂಬವು ಮೈಸೂರು ಮೂಲದವರು ಎಂದು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಮಾಹಿತಿ ನೀಡಿದ್ದಾರೆ.

ಮೈಸೂರು ವಿಜಯ ನಗರದ ದೇವೇಂದ್ರ (46) ಮತ್ತು ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆರ್ಥಿಕ ಸಮಸ್ಯೆಯಿಂದ ತತ್ತರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರ ಮೃತದೇಹ ವಿಷ ಪದಾರ್ಥ ಸೇವಿಸಿದ ಮತ್ತು ಒಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾ.27ಕ್ಕೆ ಕುಟುಂಬ ಹೊಟೇಲ್ ನಲ್ಲಿ ರೂಂ ಪಡೆದಿದ್ದು ನಿನ್ನೆ ಸಂಜೆ ತೆರಳಬೇಕಿತ್ತು. ಆದರೆ ತೆರಳಿರಲಿಲ್ಲ. ಇಂದು ಬೆಳಗ್ಗೆ ಹೊಟೇಲ್ ಸಿಬಂದಿ ನೋಡಿದಾಗ ಸಾವನ್ನಪ್ಪಿರುವುದು ಕಂಡುಬಂದಿದೆ. ಮೃತರನ್ನು ದೇವೇಂದ್ರ(48), ಪತ್ನಿ ನಿರ್ಮಲಾ (45), ಅವಳಿ ಹೆಣ್ಮಕ್ಕಳಾದ ಚೈತ್ರಾ ಮತ್ತು ಚೈತನ್ಯ ಮೃತರು ಎಂದು ಗುರುತಿಸಲಾಗಿದೆ.
ಸಾಲ ಇರುವುದರಿಂದ ಮನ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿದ್ದಾರೆ. ಸ್ಥಳಕ್ಕೆ ಮಂಗಳೂರು ಕಮಿಷನರ್ ಕುಲದೀಪ್ ಜೈನ್ ಬಂದಿದ್ದು ಪರಿಶೀಲನೆ ನಡೆಸಿದ್ದಾರೆ. ಬಂದರು ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Discover more from Coastal Times Kannada
Subscribe to get the latest posts sent to your email.








Discussion about this post