• About us
  • Contact us
  • Disclaimer
Wednesday, March 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ (ನಿ) ಇದರ ರಜತ ಮಹೋತ್ಸವ

Coastal Times by Coastal Times
March 31, 2023
in ಕರಾವಳಿ
ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ (ನಿ) ಇದರ ರಜತ ಮಹೋತ್ಸವ
42
VIEWS
WhatsappTelegramShare on FacebookShare on Twitter

ಮಂಗಳೂರು: ಕಿರು ಕಸುಬುದಾರರಿಗೆ ಮತ್ತು ದುಡಿಯುವ ವರ್ಗಕ್ಕೆ ನೆರವಾಗುವ ಉದ್ದೇಶದಿಂದ 1997ರಲ್ಲಿ ನಿರ್ಮಿಸಲಾದ ಮಂಗಳೂರಿನ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘದ ಕಟ್ಟಡದ ಉದ್ಘಾಟನೆ ಮತ್ತು ಬೆಳ್ಳಿಹಬ್ಬದ ಸಂಭ್ರಮಾಚರಣೆ ಏ.2ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೃಷ್ಣ ಜೆ.ಪಾಲೇಮಾರ್ ತಿಳಿಸಿದರು.‌‌

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಘದ ರಜತಮಹೋತ್ಸವ ನೆನಪಿಗಾಗಿ ಮಂಗಳೂರಿನ ಜೆಪ್ಪು ಮೋರ್ಗನ್ಸ್‌ಗೇಟ್ ರಾಮಕ್ಷತ್ರಿಯ ಮಂದಿರದ ಬಳಿ ಸುಮಾರು ರೂ.8 ಕೋಟಿ ವೆಚ್ಚದಲ್ಲಿ ಸ್ವಂತ ಕಟ್ಟಡವನ್ನು ನಿರ್ಮಿಸಲಾಗಿದೆ. ಈ ಕಟ್ಟಡದಲ್ಲಿ ಹೊಸ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ. ಕಟ್ಟಡದಲ್ಲಿ ಗುರುವಾರ ಪೂಜಾವಿಧಿಗಳು ನಡೆದಿದ್ದು, ಏ.2ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟನೆ ನಡೆಯಲಿದೆ’ ಎಂದರು.‌

ಸಂಸದ ನಳಿನ್ ಕುಮಾರ್ ಕಟೀಲ್‌, ಶಾಸಕ ಡಿ.ವೇದವ್ಯಾಸ ಕಾಮತ್, ಮೇಯರ್‌ ಜಯಾನಂದ ಅಂಚನ್, ನಿಟ್ಟೆ ವಿಶ್ವವಿದ್ಯಾಲಯದ ಸಹ ಕುಲಪತಿ ಡಾ.ಶಾಂತಾರಾಮ ಶೆಟ್ಟಿ, ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ಮಾಜಿ ಶಾಸಕ ಜೆ.ಆರ್. ಲೋಬೊ, ಸಹಕಾರ ಸಂಘಗಳ ಉಪ ನಿಬಂಧಕ ಎಚ್.ಎನ್. ರಮೇಶ್, ಪಾಲಿಕೆ ಸದಸ್ಯೆ ಭಾನುಮತಿ ಪಿ.ಎಸ್. ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.‌

1997ರಲ್ಲಿ ಕೇವಲ 3 ಲಕ್ಷ ರೂ. ಮೂಲ ಬಂಡವಾಳದೊಂದಿಗೆ 9 ಜನ ನಿರ್ದೇಶಕರು ಮತ್ತು 800 ಶೇರುದಾರರೊಂದಿಗೆ ಆರಂಭಗೊಂಡ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ (ನಿ) ಇಂದು 2.8 ರೂ. ಕೋಟಿ ಬಂಡವಾಳದೊಂದಿಗೆ ಸುಮಾರು 5500ಕ್ಕೂ ಹೆಚ್ಚು ಶೇರುದಾರರನ್ನು ಹೊಂದಿದ್ದು, ವಾರ್ಷಿಕವಾಗಿ ಸುಮಾರು ರೂ. 400 ಕೋಟಿಗೂ ಮಿಕ್ಕಿ ವ್ಯವಹಾರವನ್ನು ನಡೆಸುವ ಮೂಲಕ ಸಮಾಜಕ್ಕೆ ಹಲವು ಉತ್ತಮ ಸೇವಾ ಸೌಲಭ್ಯಗಳು ಮತ್ತು ಆರ್ಥಿಕ ಸಂಕಷ್ಟದಲ್ಲಿರುವ ಬಡವರ್ಗದವರಿಗೆ ಸಹಾಯ ಹಸ್ತ ಚಾಚುವ ಮೂಲಕ ಸಂಘವು ಉನ್ನತ ಮಟ್ಟಕ್ಕೇರಲು ಸಾಧ್ಯವಾಗಿದೆ. ಸಂಘವು 2022ರ ಸಾಲಿನಲ್ಲಿ 1 ಕೋಟಿಗೂ ಮಿಕ್ಕಿ ಲಾಭ ಪಡೆದಿದ್ದು, ಗ್ರಾಹಕರಿಗೆ ಶೇ. 20 ಡಿವಿಡೆಂಡ್ ನೀಡಿದೆ. ಸಂಘ ಸ್ಥಾಪನೆಯಾದ ವರ್ಷದಿಂದ ಈ ವರೆಗೆ ಎ ಗ್ರೇಡ್ ಮಾನ್ಯತೆ ಪಡೆದಿರುತ್ತದೆ ಎಂದು ಮಾಹಿತಿ ನೀಡಿದರು.‌‌

ಸಂಘವು ಜೆಪ್ಪು ಮೋರ್ಗನ್ಸ್‌ಗೇಟ್‌ನಲ್ಲಿ ಪ್ರಧಾನ ಕಚೇರಿ ಮತ್ತು ಶಾಖೆಯನ್ನು ಹೊಂದಿದ್ದು, ಹಂಪನಕಟ್ಟೆ, ಕಾವೂರು, ಕಾಟಿಪಳ್ಳ-ಕೈಕಂಬ ಮತ್ತು ಉಳ್ಳಾಲ ಮುಂತಾದೆಡೆ 5 ಶಾಖೆ ಹೊಂದಿದೆ. ಮುಂದಿನ ವರ್ಷದಲ್ಲಿ ಮತ್ತೆ ಐದು ಶಾಖೆಗಳನ್ನು ತೆರೆಯಲು ಯೋಜನೆ ರೂಪಿಸಲಾಗಿದೆ ಎಂದರು.

ಸಂಘದ ಉಪಾಧ್ಯಕ್ಷ ಕೆ. ದಿನೇಶ್ ರಾವ್, ನಿರ್ದೇಶಕರಾದ ಜೆ.ಕೆ.ರಾವ್, ಪಿ. ಬಾಬು, ಕೆ.ಎಸ್. ರಂಜನ್, ವಾರಿಜ ಕೆ., ಡಾ.ಎಚ್. ಪ್ರಭಾಕರ್, ಡಾ.ಮಂಜುಳಾ ಎ. ರಾವ್, ಕೆ.ರವೀಂದ್ರ, ಕೆ.ಜೈರಾಜ್‌ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಪ್ರಸಾದ್ ಪಿ.ಎ. ಇದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ : ಜಿಲ್ಲಾಧಿಕಾರಿ ಮಾಹಿತಿ

Next Post

ಮಂಗಳೂರು : ಲಾಡ್ಜ್‌ನಲ್ಲಿ ಮೈಸೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Related Posts

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್
ಕರಾವಳಿ

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

March 4, 2026
13
ಮಂಗಳೂರು: ಮುಲ್ಲಕಾಡ್ ಸರ್ಕಾರಿ ಶಾಲೆಯ ಮೇಲ್ಛಾವಣಿ ಉದ್ಘಾಟನೆ
ಕರಾವಳಿ

ಮಂಗಳೂರು: ಮುಲ್ಲಕಾಡ್ ಸರ್ಕಾರಿ ಶಾಲೆಯ ಮೇಲ್ಛಾವಣಿ ಉದ್ಘಾಟನೆ

March 3, 2026
4
Next Post
ಮಂಗಳೂರು : ಲಾಡ್ಜ್‌ನಲ್ಲಿ ಮೈಸೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಮಂಗಳೂರು : ಲಾಡ್ಜ್‌ನಲ್ಲಿ ಮೈಸೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Discussion about this post

Recent News

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

March 4, 2026
13
ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

March 3, 2026
99
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

March 4, 2026
ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

March 3, 2026
ಮಂಗಳೂರು: ಮುಲ್ಲಕಾಡ್ ಸರ್ಕಾರಿ ಶಾಲೆಯ ಮೇಲ್ಛಾವಣಿ ಉದ್ಘಾಟನೆ

ಮಂಗಳೂರು: ಮುಲ್ಲಕಾಡ್ ಸರ್ಕಾರಿ ಶಾಲೆಯ ಮೇಲ್ಛಾವಣಿ ಉದ್ಘಾಟನೆ

March 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d