• About us
  • Contact us
  • Disclaimer
Saturday, September 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಪೊಲೀಸರಿಗೆ ‘ನಾಯಿಂಡೆ ಮೋನೆ ಪೊಲೀಸ್ ‘ ಎಂದು ನಿಂದಿಸಿದ ಆರೋಪಿಗಳು ಸೇರಿ 9 ಜನರ ಬಂಧನ

Coastal Times by Coastal Times
May 31, 2022
in ಕ್ರೈಮ್ ನ್ಯೂಸ್
ಮಂಗಳೂರು: ಪೊಲೀಸರಿಗೆ ‘ನಾಯಿಂಡೆ ಮೋನೆ ಪೊಲೀಸ್ ‘ ಎಂದು ನಿಂದಿಸಿದ ಆರೋಪಿಗಳು ಸೇರಿ 9 ಜನರ ಬಂಧನ
461
VIEWS
WhatsappTelegramShare on FacebookShare on Twitter

ಮಂಗಳೂರು: ಎಸ್ ಡಿಪಿಐ ‘ಜನಾಧಿಕಾರ’ ಸಮಾವೇಶದ ವೇಳೆ ನಗರದ ಕೊಡೆಕ್ಕಲ್ ಚೆಕ್ ಪೋಸ್ಟ್ ಬಳಿ ಪೊಲೀಸ್ ಸಿಬ್ಬಂದಿಗಳಿಗೆ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳು ಸೇರಿ ಒಟ್ಟು 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಇನೋಳಿ ನಿವಾಸಿಗಳಾದ ನೌಷಾದ್‌ (28), ಹೈದರಾಲಿ (27) ಬಂಧಿತ ಆರೋಪಿಗಳು. ಆರೋಪಿಗಳಿಗೆ ಆಶ್ರಯ ನೀಡಿದ ಮಂಗಳೂರು ಪಾಂಡೇಶ್ವರ ನಿವಾಸಿ ಮೊಹಮ್ಮದ್‌ ಸಯ್ಯದ್‌ ಅಫ್ರೀದ್‌ (23),‌ ಕೋಣಾಜೆ ನಿವಾಸಿ ಬಶೀರ್ (40), ಮಂಗಳೂರು ಇನೋಳಿ ನಿವಾಸಿ ಬುಬೇರ್ (32), ಪುತ್ತೂರಿನ ಜಲೀಲ್‌ (25) ಹಾಗೂ ಪೊಲೀಸರ ತನಿಖೆಗೆ ಅಡ್ಡಿ ಪಡಿಸಿದ್ದ ವಿಟ್ಲ ನಿವಾಸಿ ಮೊಹಮ್ಮದ್‌ ಯಾಸೀನ್‌ (25), ಅಫ್ರೀದ್‌ ಸಾಗ್ (19), ಮಂಗಳೂರಿನ ಶಿವಭಾಗ್‌ ನಿವಾಸಿ ಮೊಹಮ್ಮದ್‌ ತುಫೇಲ್‌ ಸೇರಿದಂತೆ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಲ್ಲಿ ನಡೆದ್ದದ್ದು ಏನು? : ಎಸ್‌ಡಿಪಿಐ ಸಮಾವೇಶದ ವೇಳೆ ನಗರದ ಕೊಡೆಕ್ಕಲ್ ಚೆಕ್ ಪೋಸ್ಟ್ ಬಳಿ ಪೊಲೀಸ್ ಸಿಬ್ಬಂದಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ವಿಡಿಯೋ ಮಾಡಿದ್ದ, ಆರೋಪಿಗಳ ವಿರುದ್ಧ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಂಗಳವಾರ ಆರೋಪಿಗಳನ್ನು ಮತ್ತು ಅವರಿಗೆ ಆಶ್ರಯ ನೀಡಿದವರನ್ನು ಬೆಂಗಳೂರು ಮತ್ತು ಮೈಸೂರಿನಲ್ಲಿ ವಶಕ್ಕೆ ಪಡೆದು ವಿಚಾರಿಸಿದಾಗ, ಪ್ರಮುಖ ಆರೋಪಿತರಾದ ನೌಷಾದ್ ಮತ್ತು ಹೈದರಾಲಿ, ಇತ್ತೀಚೆಗೆ ಕೇರಳದ ಅಲಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸರಿಗೆ ಬೈಯ್ಯುವ ವಾಟ್ಸಾಪ್‌ ವೈರಲ್‌ ವೀಡಿಯೋಗಳನ್ನು ನೋಡಿ  ಪ್ರಭಾವಿತರಾಗಿದ್ದರು. ಮಂಗಳೂರಿನ ಕಾರ್ಯಕ್ರಮದ ಸಂದರ್ಭದಲ್ಲಿ ಸ್ಥಳೀಯ ಎಸ್.ಡಿ.ಪಿ.ಐ. ನಾಯಕರು ಮತ್ತು ಕಾರ್ಯಕ್ರಮದ ಆಯೋಜಕರು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಮತ್ತು ಅದಕ್ಕಾಗಿ ದಾರಿಯುದ್ದಕ್ಕೂ ತಮ್ಮ ವಿರೋಧಿ ಸಂಘಟನೆಗಳ ವಿರುದ್ಧ ಹಾಗೂ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಬೇಕು ಎಂದು ಹೇಳಿದ್ದರು ಎನ್ನುವುದು ವಿಚಾರಣೆ ವೇಳೆ ತಿಳಿದು ಬಂದಿದೆ. ಅಲ್ಲದೇ ನಿಮಗೆ  ಏನಾದರೂ ತೊಂದರೆಯಾದಲ್ಲಿ ಎಲ್ಲಾ ರೀತಿಯ ಬೆಂಬಲವನ್ನು ನೀಡಿ, ನಿಮ್ಮನ್ನು ರಕ್ಷಿಸುವ ಜವಾಬ್ದಾರಿ ನಮ್ಮದು ಎಂದು ತಮ್ಮನ್ನು ಹುರಿದುಂಬಿಸಿರುವುದಾಗಿ ಪೊಲೀಸರ ಎದುರು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ.

ಮಡಿವಾಳ ಪೊಲೀಸರಿಂದ ಮೂವರ ಬಂಧನ: ಆರೋಪಿ ನೌಷಾದ್​ನನ್ನು ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಬಂಧಿಸಲು ಹೋದಾಗ ಆತನ ರೂಂನಲ್ಲಿದ್ದ ಇತರ ಮೂವರು ತಪ್ಪಿಸಿಕೊಳ್ಳಲು ಸಹಕರಿಸಿದ್ದು ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿತ್ತು. ಆ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗೂ ಗಾಯವಾಗಿತ್ತು. ಈ ಬಗ್ಗೆ ಬಂಧಿಸಲು ಹೋದ ಕಂಕನಾಡಿ ನಗರ ಠಾಣಾ ಪೊಲೀಸರು ಮಡಿವಾಳ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಮಡಿವಾಳ ಪೊಲೀಸರು ದ.ಕ ಜಿಲ್ಲೆಯ ವಿಟ್ಲದ ಮೊಹಮ್ಮದ್ ಯಾಸೀನ್, ಅಫ್ರೀದ್ ಸಾಗ್, ಮೊಹಮ್ಮದ್ ತುಫೇಲ್ ಎಂಬ ಮೂವರನ್ನು ಬಂಧಿಸಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ವಿವರಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಹಿಳಾ ಟಿ20 ಚಾಲೆಂಜ್‌: ಸೂಪರ್‌ನೋವಾಸ್ ಚಾಂಪಿಯನ್‌; ವೆಲಾಸಿಟಿ ವಿರುದ್ಧ 4 ರನ್‌ ರೋಚಕ ಗೆಲುವು

Next Post

ಖ್ಯಾತ ಬಾಲಿವುಡ್ ಗಾಯಕ ಕೃಷ್ಣಕುಮಾರ್ ಸಂಗೀತ ಕಾರ್ಯಕ್ರಮದ ನಂತರ ಕುಸಿದು ಬಿದ್ದು ಸಾವು

Related Posts

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು
ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
50
ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ
ಕ್ರೈಮ್ ನ್ಯೂಸ್

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
51
Next Post
ಖ್ಯಾತ ಬಾಲಿವುಡ್ ಗಾಯಕ ಕೃಷ್ಣಕುಮಾರ್ ಸಂಗೀತ ಕಾರ್ಯಕ್ರಮದ ನಂತರ ಕುಸಿದು ಬಿದ್ದು ಸಾವು

ಖ್ಯಾತ ಬಾಲಿವುಡ್ ಗಾಯಕ ಕೃಷ್ಣಕುಮಾರ್ ಸಂಗೀತ ಕಾರ್ಯಕ್ರಮದ ನಂತರ ಕುಸಿದು ಬಿದ್ದು ಸಾವು

Discussion about this post

Recent News

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

September 18, 2026
30
ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ

ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ

September 18, 2026
45
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

September 18, 2026
ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ

ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ

September 18, 2026
ಬಡವರರಿಗಾಗಿ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ: ಸಚಿವ ಕೆ.ಹೆಚ್. ಮುನಿಯಪ್ಪ

ಬಡವರರಿಗಾಗಿ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ: ಸಚಿವ ಕೆ.ಹೆಚ್. ಮುನಿಯಪ್ಪ

September 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d