ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ನಿರ್ಬಂಧಗಳನ್ನು ಎರಡು ದಿನಗಳ ಕಾಲ ವಿಸ್ತರಿಸಿ ಜಿಲ್ಲಾಡಳಿತ ಭಾನುವಾರ ಆದೇಶ ಹೊರಡಿಸಿದೆ. ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಜುಲೈ 29 ರಂದು ಫಾಝಿಲ್ ಹತ್ಯೆಯ ಹಿನ್ನೆಲೆಯಲ್ಲಿ, ಆಗಸ್ಟ್ 1 ರವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಜಿಲ್ಲಾಡಳಿತ ಆದೇಶಿಸಿತ್ತು. ನಗರ ಪೊಲೀಸ್ ಅಧಿಕಾರಿಗಳ ಮನವಿಗೆ ಅನುಗುಣವಾಗಿ ಈಗ ಆಗಸ್ಟ್ 3 ರವರೆಗೆ ನಿರ್ಬಂಧಗಳನ್ನು ವಿಸ್ತರಿಸಲಾಗಿದೆ. ಆಸ್ಪತ್ರೆಗಳು ಮತ್ತು ಔಷಧಿ ಅಂಗಡಿಗಳು ಸೇರಿದಂತೆ ತುರ್ತು ಮತ್ತು ಅಗತ್ಯ ಸೇವೆಗಳು ಲಭ್ಯವಿರುತ್ತವೆ. ಪೊಲೀಸರು ಜಿಲ್ಲಾ ಗಡಿಗಳಲ್ಲಿ ಮತ್ತು ಜಿಲ್ಲೆಯ ಸೂಕ್ಷ್ಮ ಸ್ಥಳಗಳಲ್ಲಿ, ಸಾಮಾಜಿಕ ತಾಣಗಳ ಮೇಲೆ ವ್ಯಾಪಕ ಕಟ್ಟೆಚ್ಚರ ವಹಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post