• About us
  • Contact us
  • Disclaimer
Wednesday, March 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು| ನೀನು ಬ್ಯಾರಿಯೆಂದು ಪತ್ರಕರ್ತನಿಗೆ ಹೇಳಿ ಹಲ್ಲೆಗೆ ಯತ್ನಿಸಿದ ಇಬ್ಬರ ಬಂಧನ

Coastal Times by Coastal Times
July 31, 2023
in ಕ್ರೈಮ್ ನ್ಯೂಸ್
ಮಂಗಳೂರು| ನೀನು ಬ್ಯಾರಿಯೆಂದು ಪತ್ರಕರ್ತನಿಗೆ ಹೇಳಿ ಹಲ್ಲೆಗೆ ಯತ್ನಿಸಿದ ಇಬ್ಬರ ಬಂಧನ
121
VIEWS
WhatsappTelegramShare on FacebookShare on Twitter

ಮಂಗಳೂರು,ಜು.31: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ರಚಿಸಲಾದ ‘ಆ್ಯಂಟಿ ಕಮ್ಯುನಲ್ ವಿಂಗ್’ನ ಹೊರತಾಗಿಯೂ ದ.ಕ. ಜಿಲ್ಲೆಯಲ್ಲಿ ಅನೈತಿಕ ಪೊಲೀಸ್‌ಗಿರಿ ಹೆಚ್ಚುತ್ತಿದ್ದು, ನಗರದ ಯುವ ಪತ್ರಕರ್ತರೊಬ್ಬರನ್ನು ತಡೆದು ಧರ್ಮದ ಹೆಸರೆತ್ತಿ ಅವಾಚ್ಯವಾಗಿ ನಿಂದಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಘಟನೆ ಬಗ್ಗೆ ಅಭಿಜಿತ್ ಕೋಲ್ಪೆ ಅವರು ಕಾವೂರು ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೋಟೆಕಾರು ನಿವಾಸಿ ಚೇತನ್ (38)  ಮತ್ತು ಯೆಯ್ಯಾಡಿ ನಿವಾಸಿ ನವೀನ್(39) ಬಂಧಿತರು. ನವೀನ್ ಮೂಲತಃ ಕಾಸರಗೋಡಿನ ಕುಂಬ್ಲೆ ನಿವಾಸಿಯಾಗಿದ್ದು ಮಂಗಳೂರಿನಲ್ಲಿ ಕೆಲಸದ ನಿಮಿತ್ತ ಉಳಿದುಕೊಂಡಿದ್ದಾರೆ.

ಅಭಿಜಿತ್ ಜುಲೈ 26ರಂದು ಮಧ್ಯಾಹ್ನ ತನ್ನ ಸ್ನೇಹಿತೆಯ ಜೊತೆಗೆ ಕಾವೂರಿನ ಹೊಟೇಲ್ ಒಂದರಲ್ಲಿ ಊಟ ಮಾಡಿ ಹೊರ ಬರುತ್ತಿದ್ದಾಗ ಅಪರಿಚಿತ ಯುವಕರಿಬ್ಬರು ನೀನು ಬ್ಯಾರಿ, ಹಿಂದು ಹುಡುಗಿ ಜೊತೆಗೆ ಏನು ಮಾಡುತ್ತಿದ್ದೀಯಾ ಎಂದು ಹೇಳಿ ರೇಗಾಡಿದ್ದಾರೆ. ನಾನು ಬ್ಯಾರಿಯಲ್ಲ, ಹಿಂದು. ನಗರದ ವೆಬ್‌ಸೈಟ್‌ವೊಂದರ ವರದಿಗಾರ ಎಂದು ಐಡಿ ಕಾರ್ಡ್ ತೋರಿಸಿದರೂ, ಅವರು ಕೇಳದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ, ಅಭಿಜಿತ್ ಜೊತೆಗಿದ್ದ ಯುವತಿಗೂ ನಿಂದಿಸಿದ್ದಾರೆ.

ಈ ಬಗ್ಗೆ ಅಭಿಜಿತ್ ಅದೇ ದಿನ ಕಾವೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆ ಸಂದರ್ಭ ಅಪರಿಚಿತ ವ್ಯಕ್ತಿಯ ಕಾರಿನ ನಂಬರ್ ನೋಟ್ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅವರ ನಿರ್ದೇಶನದ ಮೇರೆಗೆ ಆರೋಪಿಗಳಾದ ಚೇತನ್ ಕುಮಾರ್ ಹಾಗೂ ನವೀನ್‌ರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಯಾವುದೇ ಸಂಘಟನೆಯಲ್ಲಿ ಗುರುತಿಸಿಕೊಂಡಿರುವುದು ಬೆಳಕಿಗೆ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ ವೀಡಿಯೊ ಚಿತ್ರೀಕರಣ ವಿವಾದ: ದ.ಕನ್ನಡ ಬಿಜೆಪಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ

Next Post

ಮುಂಬೈ | ಥಾಣೆಯಲ್ಲಿ ಭೀಕರ ಅವಘಡ ಹೆದ್ದಾರಿ ಕಾಮಗಾರಿ ವೇಳೆ ಕ್ರೇನ್‌ ಕುಸಿತ; ಸ್ಥಳದಲ್ಲೇ 16 ಮಂದಿ ಸಾವು

Related Posts

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ
ಕ್ರೈಮ್ ನ್ಯೂಸ್

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
41
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ
ಕ್ರೈಮ್ ನ್ಯೂಸ್

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
17
Next Post
ಮುಂಬೈ | ಥಾಣೆಯಲ್ಲಿ ಭೀಕರ ಅವಘಡ ಹೆದ್ದಾರಿ ಕಾಮಗಾರಿ ವೇಳೆ ಕ್ರೇನ್‌ ಕುಸಿತ; ಸ್ಥಳದಲ್ಲೇ 16 ಮಂದಿ ಸಾವು

ಮುಂಬೈ | ಥಾಣೆಯಲ್ಲಿ ಭೀಕರ ಅವಘಡ ಹೆದ್ದಾರಿ ಕಾಮಗಾರಿ ವೇಳೆ ಕ್ರೇನ್‌ ಕುಸಿತ; ಸ್ಥಳದಲ್ಲೇ 16 ಮಂದಿ ಸಾವು

Discussion about this post

Recent News

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
41
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

March 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d