ಮಂಗಳೂರು, ಜು.31: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
2013ರ ನವೆಂಬರ್ 18ರಂದು ಆರೋಪಿಗಳಾದ ಪ್ರಜ್ವಲ್, ಅರುಣ್ ಅಮೀನ್, ಆದಿತ್ಯ ಸಾಲ್ಯಾನ್ ಹಾಗೂ ಅಬ್ದುಲ್ ರಿಯಾಝ್ ಅವರು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಶುಕ್ರವಾರ ತೀರ್ಪು ಪ್ರಕಟಿಸಿ, ನಾಲ್ವರು ಆರೋಪಿಗಳಿಗೆ ತಲಾ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ. ಸಂತ್ರಸ್ತೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ವಾದ ಮಂಡಿಸಿದ್ದರು.
Discover more from Coastal Times Kannada
Subscribe to get the latest posts sent to your email.







Discussion about this post