ಮಂಗಳೂರು, ಆಗಸ್ಟ್ 30: ದ.ಕ. ಜಿಲ್ಲೆಯಲ್ಲಿ ಮತ್ತೆ ವಾರಾಂತ್ಯ ಕರ್ಫ್ಯೂ ಮುಂದುವರಿಕೆ ಮಾಡಲಾಗಿದ್ದು, ಉಡುಪಿ ಹಾಗೂ ಹಾಸನ ಜಿಲ್ಲೆಯನ್ನು ಹೊಸದಾಗಿ ಈ ಪಟ್ಟಿಗೆ ಸೇರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ದ.ಕ. ಉಡುಪಿ, ಕೊಡಗು, ಹಾಸನ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಉಳಿದಂತೆ ಬೆಳಗಾವಿ, ಬೀದರ್, ವಿಜಯಪುರ, ಕಲಬುರಗಿ, ಮೈಸೂರು, ಚಾಮರಾಜ ನಗರಗಳಲ್ಲಿದ್ದ ವಾರಾಂತ್ಯ ಕರ್ಫ್ಯೂ ರದ್ದುಗೊಳಿಸಲಾಗಿದೆ.
ಮದುವೆ ಸಮಾರಂಭಗಳು ಸಣ್ಣ ಹಾಲ್ ಗಳಲ್ಲಿ ಅದರ ಸಾಮರ್ಥ್ಯದ ಅರ್ಧದಷ್ಟು ಮತ್ತು ದೊಡ್ಡ ಹಾಲ್ ಗಳಲ್ಲಿ 400ಕ್ಕೆ ಮೀರದಂತೆ ಜನರು ಸೇರಲು ಅವಕಾಶ ನೀಡಲಾಗಿದೆ. ವೀಕೆಂಡ್ ಲಾಕ್ಡೌನ್ ಇದ್ದರೂ ಈ ಅವಧಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಅವಕಾಶ ಇರುತ್ತದೆ. ಪರೀಕ್ಷೆಗೆ ಬರುವವರು ಹಾಲ್ ಟಿಕೆಟ್ ತೋರಿಸಿ ಸಂಚರಿಸಬಹುದು.
ಇನ್ನು ವಾರಂತ್ಯ ಕರ್ಫ್ಯೂ ಸಂದರ್ಭ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬಹುದು ಎಂದು ಸರಕಾರ ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ.