ಉಡುಪಿ: ಉಡುಪಿ ಸಂತೆಕಟ್ಟೆ ಸಮೀಪದ ರೋಬೊ ಸಾಪ್ಟ್ ಬಳಿ ಆ 30 ರ ಸಂಜೆ ಭಗ್ನ ಪ್ರೇಮಿ ಯುವಕನೊಬ್ಬ ಯುವತಿಯ ಕತ್ತು ಸೀಳಿ ಬಳಿಕ ತಾನೂ ಕೂಡ ಕತ್ತು ಕೊಯಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಕೂಡ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.
ಉಡುಪಿ ಜಿಲ್ಲೆಯ ಅಂಬಾಗಿಲು ಸಮೀಪದ ಕಕ್ಕುಂಜೆ ನಿವಾಸಿ ವಿಠಲ ಭಂಡಾರಿ ಹಾಗೂ ಸುಶೀಲಾ ದಂಪತಿಯ ಪುತ್ರಿ ಸೌಮ್ಯಶ್ರೀ ಭಂಡಾರಿ (26) ಹಾಗೂ ಅಲೆವೂರು ರಾಂಪುರ ನಿವಾಸಿ ಸಂದೇಶ್ ಕುಲಾಲ್(26) ಮೃತಪಟ್ಟ ಯುವಕ ಹಾಗೂ ಯುವತಿ . ಸೌಮ್ಯಶ್ರೀ ಸಂತೆಕಟ್ಟೆಯ ರಾಷ್ಟ್ರೀಕೃತ ಬ್ಯಾಂಕಿನ ಆಧಾರ್ ಕಾರ್ಡ್ ಲಿಂಕ್ ವಿಭಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಡೇಟಾ ಎಂಟ್ರಿ ಆಪರೇಟರ್ ಉದ್ಯೋಗಿಯಾಗಿದ್ದರು . ಸಂದೇಶ್ ಕುಲಾಲ್ ಉಡುಪಿಯ ಐಡಿಯಲ್ ಮೆಡಿಕಲ್ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ .
ಯುವತಿ ನಿನ್ನೆ ರಾತ್ರಿ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಇಂದು ಬೆಳಿಗ್ಗೆ ಸಂದೇಶ್ ಕೂಡ ಅದೇ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ . ಉಡುಪಿಯ ಸಂತೆಕಟ್ಟೆ ಸಮೀಪ ಉದ್ಯೋಗಿಯಾಗಿದ್ದ ಸೌಮ್ಯಶ್ರೀ ಮತ್ತು ಸಂದೇಶ್ ಕಳೆದ 7 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಸೌಮ್ಯಶ್ರೀಗೆ ವಾರದ ಹಿಂದಷ್ಟೇ ಬೇರೊಬ್ಬ ಯುವಕನೊಂದಿಗೆ ನಿಶ್ಚಿತಾರ್ಥ ನೆರವೇರಿತ್ತು. ಪ್ರೇಮಿಗಳಿಬ್ಬರ ಜಾತಿ ಬೇರೆ ಬೇರೆಯಾದ ಕಾರಣ ಇವರಿಬ್ಬರ ವಿವಾಹಕ್ಕೆ ಯುವತಿ ಸೌಮ್ಯನ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗುತ್ತಿದೆ. ಹೀಗಾಗಿ ಸೌಮ್ಯ ಬೇರೊಬ್ಬನನ್ನು ವಿವಾಹವಾಗಲು ಒಪ್ಪಿಕೊಂಡಿದ್ದಳು ಎಂದು ಮೂಲಗಳು ತಿಳಿಸಿವೆ.
ಸೌಮ್ಯಳಿಗೆ ನಿಶ್ಚಿತಾರ್ಥವಾದ ಬಳಿಕ ಆಕೆಯ ಗೆಳೆಯ ಸಂದೇಶ ಕುಲಾಲ್ ಕುಪಿತಗೊಂಡಿದ್ದ. ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳವೂ ನಡೆದಿತ್ತು. ಹೀಗಿರುವಾಗ ನಿನ್ನೆ ಸಂಜೆ ಬ್ಯಾಂಕಿನಿಂದ ಆಕೆ ಸ್ಕೂಟಿಯಲ್ಲಿ ಮನೆಗೆ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಸಂದೇಶ್ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಬಳಿ ಅಡ್ಡಗಟ್ಟಿ ನಿಂತಿದ್ದಾನೆ. ಈ ವೇಳೆ ಯುವತಿಯ ಜೊತೆ ವಾಗ್ವಾದಕ್ಕೆ ಇಳಿದಿದ್ದಾನೆ.
ಬಳಿಕ ಪ್ರಿಯಕರ ಸಂದೇಶ್ ಸೌ ಅಕೆಗೆ ಚಾಕುವಿನಿಂದ ಇರಿದು, ತಾನು ಕತ್ತು ಕೊಯ್ದುಕೊಂಡಿದ್ದ. ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ. ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಸೌಮ್ಯಶ್ರೀ ದುರಂತ ಸಾವಿಗೀಡಾದರೆ, ಗಾಯಗೊಂಡಿರುವ ಸಂದೇಶ್ಗೆ ಕೂಡ ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾನೆ. ಈ ಮೂಲಕ ಇವರಿಬ್ಬರ ಪ್ರೀತಿ ದುರಂತ ಅಂತ್ಯ ಕಂಡಿದೆ.
ಉಡುಪಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದ್ದು, ಎಸ್ಪಿ ಕುಮಾರ್ ಚಂದ್ರ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿಯನ್ನು ಕಲೆಹಾಕಿದ್ದಾರೆ
Discover more from Coastal Times Kannada
Subscribe to get the latest posts sent to your email.
Discussion about this post