• About us
  • Contact us
  • Disclaimer
Friday, June 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಸೆ.1ರಿಂದ 30ರವರೆಗೆ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದಿಂದ ಅಭಿಯಾನ

Coastal Times by Coastal Times
August 31, 2024
in ಕರಾವಳಿ
ಮಂಗಳೂರು: ಸೆ.1ರಿಂದ 30ರವರೆಗೆ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದಿಂದ ಅಭಿಯಾನ
30
VIEWS
WhatsappTelegramShare on FacebookShare on Twitter

ಮಂಗಳೂರು: “ಕಲ್ಕತ್ತಾದಲ್ಲಿ ನಡೆದಿರುವ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಹತ್ಯೆ ಘಟನೆಯಿಂದ ಹಿಡಿದು ಕಾರ್ಕಳದಲ್ಲಿ ನಡೆದಿರುವ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದವರೆಗೆ ದೇಶದಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಎನ್ನುವುದೇ ಇಲ್ಲವಾಗಿದೆ. ಹೆಣ್ಣನ್ನು ಕೇವಲ ಭೋಗದ ವಸ್ತುವಾಗಿ ನೋಡಲಾಗುತ್ತದೆ. ಇದೆಲ್ಲದಕ್ಕೂ ಕಾರಣ ಮದ್ಯ ಮತ್ತು ಮಾದಕ ವಸ್ತುಗಳ ಬಳಕೆ ಮಾರಾಟವೇ ಆಗಿದೆ. ಇಷ್ಟೇ ಅಲ್ಲದೆ ಅಶ್ಲೀಲ ವೆಬ್ ಸೈಟ್, ಗಳ ವೀಕ್ಷಣೆ ಹಾಗೂ ಸಾಮಾಜಿಕ ಜಾಲತಾಣಗಳು ಯುವಜನತೆಯನ್ನು ದಾರಿ ತಪ್ಪಿಸುತ್ತಿವೆ. ಇಂತಹ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗವು ದೇಶಾದ್ಯಂತ ಒಂದು ತಿಂಗಳ ಕಾಲ ಅಭಿಯಾನವನ್ನು ಆಯೋಜಿಸಲಾಗುವುದು. ಸೆ.1ರಿಂದ 30ರವರೆಗೆ ನೈತಿಕತೆಯೇ ಸ್ವಾತಂತ್ರ್ಯ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಅಭಿಯಾನ ನಡೆಸಲಾಗುವುದು“ ಎಂದು ಅಭಿಯಾನದ ರಾಜ್ಯ ಸಮಿತಿ ಸದಸ್ಯೆ ಸಬೀಹಾ ಫಾತಿಮಾ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಸಂಘಟನೆಯ ಸಲಹಾ ಸಮಿತಿ ಸದಸ್ಯೆ ಶಮಿರಾ ಜಹಾನ್ ಮಾತನಾಡಿ, ”ಯುವ ಪೀಳಿಗೆಯನ್ನು ಸ್ವಾತಂತ್ರ್ಯದ ತಪ್ಪು ಕಲ್ಪನೆಯಿಂದ ಜಾಗೃತಗೊಳಿಸುವುದು ಮತ್ತು ಅದರಿಂದ ರಕ್ಷಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ವಿಶೇಷವಾಗಿ ಮುಸ್ಲಿಂ ಸಮುದಾಯದಲ್ಲಿ ಕುರ್‌ ಆನ್ ಮತ್ತು ಸುನ್ನತ್‌ ಬೆಳಕಿನಲ್ಲಿ ಇಸ್ಲಾಮಿನ ಸರಿಯಾದ ಅರಿವನ್ನು ಉಂಟು ಮಾಡುವುದು ಹಾಗೂ ತಮ್ಮ ಜೀವನವನ್ನು ಅದರ ಮಾನದಂಡದಲ್ಲಿ ಎರಕಹೊಯ್ಯುವಂತೆ ಪ್ರೇರೇಪಿಸುವುದರ ಕಡೆಗೆ ಗಮನವೀಯಲಾಗುವುದು. ಅಭಿಯಾನದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಉದಾಹರಣೆಗೆ, ‘ಧರ್ಮದಲ್ಲಿ ನೈತಿಕತೆಯ ಕಲ್ಪನೆ’ ಶೀರ್ಷಿಕೆಯಲ್ಲಿ ಅಂತರ್‌ ಧರ್ಮೀಯ ವಿಚಾರಗೋಷ್ಠಿ, ಮಹಿಳಾ ಸಮಾವೇಶ, ಶಾಲಾ-ಕಾಲೇಜುಗಳಲ್ಲೂ ಉಪನ್ಯಾಸ, ವೈಯಕ್ತಿಕ ಭೇಟಿ, ಸಮಾಜದ ಪ್ರಸಿದ್ಧ ವ್ಯಕ್ತಿಗಳ ಸಂದರ್ಶನ ನಡೆಸುವುದು ಅದರ ಪ್ರಮುಖ ಅಂಶಗಳನ್ನು ಆಯ್ದು ಸೋಶಿಯಲ್ ಮೀಡಿಯಾದ ಮೂಲಕ ಪ್ರಚಾರ ಮಾಡುವುದು. ಲೇಖನ, ಭಾಷಣ ಸ್ಪರ್ಧೆ, ಪೋಸ್ಟರ್ ಡಿಸೈನಿಂಗ್, ಕಥೆ ಮುಂತಾದವುಗಳ ಸ್ಪರ್ಧೆಗಳನ್ನು ನಡೆಸಲಾಗುವುದು. ಕರ್ನಾಟಕದಲ್ಲಿ ಈ ಅಭಿಯಾನದ ಉದ್ಘಾಟನೆಯು ಸೆಪ್ಟೆಂಬರ್ 1ರಂದು ನೆರವೇರಲಿರುವುದು. ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಅಧ್ಯಕ್ಷರಾದ ಡಾಕ್ಟರ್ ಮುಹಮ್ಮದ್ ಸಅದ್ ಬೆಳಗಾವಿಯವರು ಇದರ ಅಧ್ಯಕ್ಷತೆ ವಹಿಸಲಿದ್ದಾರೆ“ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ನಗರ ಸಂಚಾಲಕಿ ಸುಮಯ್ಯ ಹಮೀದುಲ್ಲ, ಶಹಿದಾ ಉಮರ್ ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ: ಪತ್ನಿ ಬಿಕಿನಿ ಫೋಟೋಶೂಟ್‌ ಶೋಕಿಗೆ ಪತಿ ಸಾಥ್, ಫೋಟೋಶೂಟ್‌ಗೆ ಬೀಚ್‌ನಲ್ಲಿ ಆಕ್ಷೇಪ: ಯುವತಿ ನಡೆಗೆ ಸ್ಥಳೀಯರ ಆಕ್ರೋಶ

Next Post

ಮಂಗಳೂರು ಕಬಡ್ಡಿ ಪ್ರೀಮಿಯರ್ ಲೀಗ್ “ಟೀಮ್ ಬಾವಾ” ಲೋಗೋ, ಟಿ ಶರ್ಟ್ ಅನಾವರಣ

Related Posts

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ
ಕರಾವಳಿ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

June 12, 2026
40
ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಕರಾವಳಿ

ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

June 12, 2026
35
Next Post
ಮಂಗಳೂರು ಕಬಡ್ಡಿ ಪ್ರೀಮಿಯರ್ ಲೀಗ್ “ಟೀಮ್ ಬಾವಾ” ಲೋಗೋ, ಟಿ ಶರ್ಟ್ ಅನಾವರಣ

ಮಂಗಳೂರು ಕಬಡ್ಡಿ ಪ್ರೀಮಿಯರ್ ಲೀಗ್ “ಟೀಮ್ ಬಾವಾ” ಲೋಗೋ, ಟಿ ಶರ್ಟ್ ಅನಾವರಣ

Discussion about this post

Recent News

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

June 12, 2026
40
ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

June 12, 2026
35
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

June 12, 2026
ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

June 12, 2026
ಧರ್ಮಸ್ಥಳ : 26 ವರ್ಷಗಳ ಹಿಂದೆ ಕಾಣೆಯಾಗಿದ್ದ ಸತೀಶ್, ಸಲೀಂ ಆಗಿ ಪತ್ತೆ! ಸಾಯುವ ಮುನ್ನ ಮಗನ ನೋಡಬೇಕೆಂಬ ತಾಯಿ ಕನಸು ನನಸು!

ಧರ್ಮಸ್ಥಳ : 26 ವರ್ಷಗಳ ಹಿಂದೆ ಕಾಣೆಯಾಗಿದ್ದ ಸತೀಶ್, ಸಲೀಂ ಆಗಿ ಪತ್ತೆ! ಸಾಯುವ ಮುನ್ನ ಮಗನ ನೋಡಬೇಕೆಂಬ ತಾಯಿ ಕನಸು ನನಸು!

June 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d