ಮಂಗಳೂರು: ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ರವಿಕುಮಾರ್ ಅವರು 2012ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಆಗಿದ್ದು,
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಿಜಿಸ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಈ ಹಿಂದಿನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ. ವಿ. ಡಾ. ರಾಜೇಂದ್ರ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಸ್ಥಾನವನ್ನು ಡಾ. ಕೆ. ವಿ. ರಾಜೇಂದ್ರ ಅವರು ತುಂಬಿದ್ದಾರೆ.
ಡಾ. ಕೆ.ವಿ.ರಾಜೇಂದ್ರ ದಕ್ಷಿಣ ಕನ್ನಡ ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿ ಜುಲೈ 30, 2020ರಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಬಳಿಕ ಕೋವಿಡ್ ಸಂಕಷ್ಟ, ಜಲಪ್ರಳಯ, ಗಲಭೆಯಂತಹ ಸಂದಿಗ್ಧ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಯಂತ್ರಿಸಿದ್ದರು. ಇದೀಗ ಜಿಲ್ಲೆಯ 131ನೇ ಜಿಲ್ಲಾಧಿಕಾರಿಯಾಗಿ ಎಂ. ಆರ್. ರವಿಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ಜಿಲ್ಲೆಯ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post