ಬೆಂಗಳೂರು, ಅ.30: ರೈತರ ಜಮೀನನ್ನು ವಕ್ಫ್ಗೆ ಹಸ್ತಾಂತರಿಸುವ ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮವನ್ನು ವಿರೋ ಧಿಸಿ ನ.4ರಂ ದು ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ .ವಿಜಯೇಂದ್ರ ತಿಳಿಸಿದ್ದಾರೆ.
ಅಮಾಯಕ ರೈತರ ಪಹಣಿಗಳಲ್ಲಿ ‘ವಕ್ಫ್ ಆಸ್ತಿ, ಪರಭಾರೆ ನಿಷೇ ಧಿಸಿದೆ’ ಎಂದು ನಮೂದಿಸುವ ಮೂಲಕ ರಾಜ್ಯಾದ್ಯಂತ ರೈತರ ಜಮೀ ನು ಕಬಳಿಸುವ ಪ್ರಯತ್ನ ನಡೆದಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಕೈಗೊಳ್ಳಲಾಗುತ್ತಿದೆ ಎಂದು ಎಲ್ಲ ಜಿಲ್ಲಾಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಕಲಬುರಗಿ, ವಿಜಯಪುರ,ಯಾದಗಿರಿ,ಬೀದರ್, ಶಿವಮೊಗ್ಗ, ಸೇರಿ ಹಲವಾರು ಜಿಲ್ಲೆಗಳಲ್ಲಿ ರೈತರು ಜಮೀನಿಗೆ ಸಂಚಕಾರ ಬಂದಿದೆ. ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಈ ಸಂದರ್ಭದಲ್ಲಿ ರಚನಾತ್ಮಕ ವಿರೋಧ ಪಕ್ಷವಾಗಿ ರೈತರ ಪರವಾಗಿ ಸರ್ಕಾರವನ್ನು ಎಚ್ಚರಿಸುವ ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ. ಎಲ್ಲ ಜಿಲ್ಲಾಧಿಕಾರಿ ಕಚೇರಿ ಮತ್ತು ತಾಲ್ಲೂಕು ಕಚೇರಿಗಳ ಮುಂದೆ ರೈ ತರನ್ನು ಒಳಗೊಂಡಂತೆ ಬೃಹತ್ ಮಟ್ಟದ ಹೋರಾಟದಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದ್ದಾರೆ
Discover more from Coastal Times Kannada
Subscribe to get the latest posts sent to your email.
Discussion about this post